ಮಹಾರಾಷ್ಟ್ರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಚಾರ; ಆರೋಪಿ ಬಂಧನ | Naanu gauri

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ 15 ವರ್ಷ ವಯಸ್ಸಿನ ಬಾಲಕಿಯ ಮೇಲೆ ದುಷ್ಕರ್ಮಿಯೊಬ್ಬ ಹಲವು ಬಾರಿ ಅತ್ಯಾಚಾರವೆಸಗಿದ್ದು, ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 20 ವರ್ಷದ ಯುವಕನನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ ಎಂದು ಜವಾಹರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಜಿಲ್ಲೆಯ ಜವಹಾರ್ ತಾಲೂಕಿನ ಗ್ರಾಮವೊಂದರ ನಿವಾಸಿಯಾದ ಆರೋಪಿಯು, ಅದೇ ಗ್ರಾಮದ ಬಾಲಕಿಯ ಮೇಲೆ ಸುಮಾರು ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದನು.

ಇದರಿಂದ ಬಾಲಕಿ ಗರ್ಭಿಣಿಯಾಗಿದ್ದು, ಕೆಳೆದ ಒಂದೆರೆಡು ದಿನಗಳ ಹಿಂದೆ ಅಕಾಲಿಕವಾಗಿ ಮಗುವಿಗೆ ಜನ್ಮ ನೀಡಿದ್ದರು ಎಂದು ಪೊಲೀಸ್‌ ಅಧಿಕಾರಿ ಹೇಳಿದ್ದಾರೆ.

ಬಾಲಕಿ ಶನಿವಾರ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಯುವಕನ ವಿರುದ್ದ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

LEAVE A REPLY

Please enter your comment!
Please enter your name here