Homeಮುಖಪುಟಮಹಾರಾಷ್ಟ್ರ:ಮಧ್ಯರಾತ್ರಿ 12 ರ ವರೆಗೆ ರೆಸ್ಟೋರೆಂಟ್ಸ್‌‌ ತೆರೆಯಲು ಅನುಮತಿ

ಮಹಾರಾಷ್ಟ್ರ:ಮಧ್ಯರಾತ್ರಿ 12 ರ ವರೆಗೆ ರೆಸ್ಟೋರೆಂಟ್ಸ್‌‌ ತೆರೆಯಲು ಅನುಮತಿ

- Advertisement -
- Advertisement -

ಕೊರೊನಾ ಒಂದನೆ ಮತ್ತು ಎರಡನೇ ಅಲೆಯ ಸಮಯದಲ್ಲಿ ಭಾರಿ ಸಂಕಷ್ಟಕ್ಕೆ ಒಳಗಾಗಿದ್ದ ಮಹಾರಾಷ್ಟ್ರದಲ್ಲಿ ಇದೀಗ ಸೋಂಕು ತಹಬದಿಗೆ ಬಂದಿದೆ. ರಾಜ್ಯವು ತನ್ನ ಕೊರೊನಾ ನಿಯಮಗಳನ್ನು ಹಂತ-ಹಂತವಾಗಿ ಸಡಿಲಿಕೆ ಮಾಡುತ್ತಿದೆ. ರಾಜ್ಯದ ಹೊಸ ನಿಮಯಗಳಂತೆ ಇಂದಿನಿಂದ ರೆಸ್ಟೋರೆಂಟ್‌ಗಳು ಮಧ್ಯರಾತ್ರಿ 12 ರ ವರೆಗೆ ಮತ್ತು ಅಂಗಡಿಗಳನ್ನು ರಾತ್ರಿ 11 ಗಂಟೆಯವರೆಗೆ ತೆರೆದಿಡಲು ಅನುಮತಿ ನೀಡಲಾಗಿದೆ.

ಇದಕ್ಕಿಂತಲೂ ಮುಂಚೆ ಅಂಗಡಿಗಳು ಮತ್ತು ರೆಸ್ಟೋರೆಂಟ್‌‌ಗಳಿಗೆ ರಾತ್ರಿ 10 ರವರೆಗೆ ಮಾತ್ರ ತೆರೆದಿಡಲು ಅನುಮತಿ ನೀಡಲಾಗಿತ್ತು. ಹೊಸ ಸಡಿಲಿಕೆ ಘೋಷಣೆಯಾಗಿದ್ದರೂ, ರೆಸ್ಟೋರೆಂಟ್ ಸಿಬ್ಬಂದಿಗೆ ಸಂಪೂರ್ಣವಾಗಿ ಲಸಿಕೆ ಹಾಕುವುದು ಅತ್ಯಗತ್ಯ ಎಂದು ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ರೈತರ ಹತ್ಯಾಕಾಂಡ ವಿರೋಧಿಸಿ ಮಹಾರಾಷ್ಟ್ರ ಬಂದ್: ಅಂಗಡಿ ಮುಂಗಟ್ಟು, ಮಾರುಕಟ್ಟೆ ಸಂಪೂರ್ಣ ಬಂದ್

ಹೆಚ್ಚುವರಿ ಕ್ರಮವಾಗಿ, ಅಗತ್ಯವೆನಿಸಿದರೆ ಸಮಯವನ್ನು ಕಡಿತಗೊಳಿಸಲು ಸ್ಥಳೀಯ ಅಧಿಕಾರಿಗಳಿಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಹೆಚ್ಚುವರಿ ಸಮಯದ ವಿಸ್ತರಣೆಯನ್ನು ವಿಶೇಷ ಅನುಮತಿಯಿಲ್ಲದೆ ಮಾಡಲು ಸಾಧ್ಯವಿಲ್ಲ ಎಂದು ಸರ್ಕಾರ ಹೇಳಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಚೇರಿಯು ಈ ಆದೇಶದ ಪ್ರತಿಯೊಂದಿಗೆ ಸುದ್ದಿಯನ್ನು ಟ್ವೀಟ್ ಮಾಡಿದೆ.

ಸೋಮವಾರವಷ್ಟೇ ವ್ಯವಹಾರದ ಸಮಯವನ್ನು ವಿಸ್ತರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು.

ಇದನ್ನೂ ಓದಿ: ಮಹಾರಾಷ್ಟ್ರ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿರಂತರವಾಗಿ ಕುಸಿಯುತ್ತಿರುವುದರಿಂದ ಸರ್ಕಾರವು ಮನೋರಂಜನಾ ಉದ್ಯಾನವನಗಳು ಮತ್ತು ಚಿತ್ರಮಂದಿರಗಳನ್ನು ಮತ್ತೆ ತೆರೆಯುವುದಾಗಿ ಘೋಷಿಸಿತ್ತು. ಚಿತ್ರಮಂದಿರಗಳನ್ನು ಅಕ್ಟೋಬರ್ 22 ರಿಂದ ತೆರೆಯಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ಕಳೆದ ತಿಂಗಳು, ರಾಜ್ಯದ ಅತೀ ದೊಡ್ಡ ಆಚರಣೆಯಾದ ಗಣೇಶ ಹಬ್ಬದ ಸಮಯದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕಟ್ಟುಪಾಡುಗಳನ್ನು ಜಾರಿಗೆ ತಂದಿತ್ತು.

“ಹಬ್ಬಗಳು ಮತ್ತು ಧಾರ್ಮಿಕ ಕಾರ್ಯಕ್ರಮಗಳ ಮೇಲೆ ನಿರ್ಬಂಧಗಳನ್ನು ವಿಧಿಸಲು ಯಾರೂ ಬಯಸುವುದಿಲ್ಲ. ಆದರೆ ಜನರ ಜೀವನ ಬಹಳ ಮುಖ್ಯವಾದುದಾಗಿದೆ” ಎಂದು ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಇದುವರೆಗೂ 65.9 ಲಕ್ಷ ಜನರಿಗೆ ಕೊರೊನಾ ಸೋಂಕಿದ್ದು, ಇದುವರೆಗೂ 1.4 ಲಕ್ಷ ಜನರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 26 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...