Homeಮುಖಪುಟಮಹಾರಾಷ್ಟ್ರದ ಸಹಜ ಸ್ಥಿತಿ ಪುನಃಸ್ಥಾಪನೆಗೆ ಒಗ್ಗಟ್ಟಿನ ಪ್ರಯತ್ನ ಅಗತ್ಯ: ಶರದ್ ಪವಾರ್

ಮಹಾರಾಷ್ಟ್ರದ ಸಹಜ ಸ್ಥಿತಿ ಪುನಃಸ್ಥಾಪನೆಗೆ ಒಗ್ಗಟ್ಟಿನ ಪ್ರಯತ್ನ ಅಗತ್ಯ: ಶರದ್ ಪವಾರ್

- Advertisement -
- Advertisement -

ಮಹಾರಾಷ್ಟ್ರದ ಬೀಡ್ ಮತ್ತು ಪರ್ಭಾನಿಯಲ್ಲಿ ನಡೆದ ಸರಪಂಚ್ ಹತ್ಯೆ ಮತ್ತು ನ್ಯಾಯಾಂಗ ಬಂಧನದಲ್ಲಿದ್ದ ದಲಿತ ಯುವಕನ ಸಾವಿನ ನಂತರ ಬೀಡ್ ಮತ್ತು ಪರ್ಭಾನಿಯಲ್ಲಿ ಆವರಿಸಿರುವ ಸಾಮಾಜಿಕ ಉದ್ವಿಗ್ನತೆಯನ್ನು ಶಮನಗೊಳಿಸುವ ಪ್ರಯತ್ನಗಳ ಕುರಿತು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತನಾಡಿದ್ದಾಗಿ ಹೇಳಿಕೊಂಡಿದ್ದಾರೆ. ಮಹಾರಾಷ್ಟ್ರದ ಸಹಜ ಸ್ಥಿತಿ

ಬೀಡ್ ಮತ್ತು ಪರ್ಭಾನಿಯಲ್ಲಿ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಒಗ್ಗಟ್ಟಿನ ಪ್ರಯತ್ನಗಳು ಅಗತ್ಯವಾಗಿವೆ ಎಂದು ಶರದ್ ಪವಾರ್ ಶನಿವಾರ ಹೇಳಿದ್ದಾರೆ.

ಡಿಸೆಂಬರ್ 9 ರಂದು ಬೀಡ್ ಜಿಲ್ಲೆಯ ಮಸಾಜೋಗ್ ಗ್ರಾಮದ ಸರಪಂಚ್ ಸಂತೋಷ್ ದೇಶಮುಖ್ ಅವರ ಹತ್ಯೆಯ ನಂತರ ಆಡಳಿತರೂಢ ಮತ್ತು ವಿರೋಧ ಪಕ್ಷಗಳ ನಡುವೆ ಗದ್ದಲಕ್ಕೆ ಕಾರಣವಾಗಿತ್ತು. ಸಂಬಂಧಿತ ಸುಲಿಗೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಗಳಲ್ಲಿ ಒಬ್ಬರು ರಾಜ್ಯದ ಸಚಿವ ಧನಂಜಯ್ ಮುಂಡೆ ಅವರ ಆಪ್ತರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಘಟನೆಯ ನಂತರ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದ್ದು, ಜೊತೆಗೆ ದೇಶಮುಖ್ ಮರಾಠರಾಗಿರುವುದರಿಂದ ಮತ್ತು ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ ಬಂಧಿತರಾದ ಕೆಲವರು ವಂಜರಿ ಸಮುದಾಯದವರು ಎಂಬ ಕಾರಣಕ್ಕೆ ಜಾತಿ ಸಂಘರ್ಷದ ಭೀತಿ ಉಂಟಾಗಿದೆ. ಮಹಾರಾಷ್ಟ್ರದ ಸಹಜ ಸ್ಥಿತಿ

ಡಿಸೆಂಬರ್ 10 ರಂದು ಪರ್ಭಾನಿಯಲ್ಲಿ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ ನಂತರ ಸಂಭವಿಸಿದ ಹಿಂಸಾಚಾರದ ನಂತರ ಬಂಧಿಸಲ್ಪಟ್ಟ ಸೋಮನಾಥ್ ಸೂರ್ಯವಂಶಿ, ಹಠಾತ್ ಅನಾರೋಗ್ಯಕ್ಕೊಳಗಾಗಿ ಜೈಲಿನಿಂದ ಆಸ್ಪತ್ರೆಗೆ ಸಾಗಿಸಲ್ಪಟ್ಟ ನಂತರ ಡಿಸೆಂಬರ್ 15 ರಂದು ನಿಧನರಾಗಿದ್ದರು.

ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪವಾರ್, 1993 ರಲ್ಲಿ 10,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ವಿನಾಶಕಾರಿ ಲಾತೂರ್ ಭೂಕಂಪ ಮತ್ತು ಅದೇ ವರ್ಷ ಮುಂಬೈನಲ್ಲಿ ನಡೆದ ಸರಣಿ ಸ್ಫೋಟಗಳನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿಯಾಗಿ ತಮ್ಮ ಅನುಭವವನ್ನು ಉಲ್ಲೇಖಿಸಿದ್ದಾರೆ. ಮಹಾರಾಷ್ಟ್ರದ ಜನರು ಸಾಮಾಜಿಕವಾಗಿ ಜಾಗೃತರಾಗಿದ್ದು, ಯಾವಾಗಲೂ ಒಗ್ಗಟ್ಟಿನಿಂದ ನಿಂತು ಬಿಕ್ಕಟ್ಟಿನ ಸಂದರ್ಭಗಳಲ್ಲಿ ಆಡಳಿತದೊಂದಿಗೆ ಸಹಕರಿಸಿದ್ದರು ಎಂದು ಅವರು ಹೇಳಿದ್ದಾರೆ.

“ಉದ್ವಿಗ್ನತೆಯನ್ನು ಶಮನಗೊಳಿಸಿ ಶಾಂತಿಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನದ ಅಗತ್ಯವಿದೆ. ಆದರೆ ಒಬ್ಬ ಮುಖ್ಯಮಂತ್ರಿ ಅದನ್ನು ಒಬ್ಬಂಟಿಯಾಗಿ ಮಾಡಲು ಸಾಧ್ಯವಿಲ್ಲ. ಈ ಘಟನೆಗಳ ನಂತರ ಬೀಡ್ ಮತ್ತು ಪರ್ಭಾನಿಯಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ನಾನು ಇಂದು ಸಿಎಂ ಫಡ್ನವೀಸ್ ಅವರೊಂದಿಗೆ ವಿವರವಾದ ಚರ್ಚೆ ನಡೆಸಿದೆ. ಈ ದಿನಗಳಲ್ಲಿ ನನ್ನ ಹೆಚ್ಚಿನ ಸಮಯ ಬೀಡ್ ಮತ್ತು ಪರ್ಭಾನಿಯಲ್ಲಿ ಪರಿಸ್ಥಿತಿಯನ್ನು ಶಮನಗೊಳಿಸುವುದು ಮತ್ತು ಸಮಸ್ಯೆಗಳನ್ನು ಹೇಗೆ ಪರಿಹರಿಸುವುದು ಎಂಬುದರ ಮೇಲೆ ಮೀಸಲಿಡಲಾಗಿದೆ” ಎಂದು ಶರದ್ ಪವಾರ್ ಹೇಳಿದ್ದಾರೆ.

“ಸೌಹಾರ್ದಯುತವಾಗಿ ಬದುಕುತ್ತಿದ್ದ ಜನರು ಈಗ ಭಯದಲ್ಲಿ ಬದುಕುತ್ತಿದ್ದಾರೆ ಮತ್ತು ಪರಸ್ಪರ ದ್ವೇಷ ಬೆಳೆಸಿಕೊಂಡಿದ್ದಾರೆ. ನಾನು ಸಿಎಂ ಜೊತೆ ಮಾತನಾಡಿದೆ. ನಮ್ಮಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿರಬಹುದು ಆದರೆ ಏನೇ ಬಂದರೂ ಜನರನ್ನು ಒಗ್ಗಟ್ಟಿನಿಂದ ಇರಿಸಲು ನಾವು ಕೆಲಸ ಮಾಡಬೇಕು” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...