Homeಮುಖಪುಟಮಹಾರಾಷ್ಟ್ರ ಬದಲಾವಣೆ ಬಯಸುತ್ತಿದೆ, ನಮ್ಮ ಮೈತ್ರಿ ಅದಕ್ಕಾಗಿ ಕೆಲಸ ಮಾಡುತ್ತಿದೆ: ಶರದ್ ಪವಾರ್

ಮಹಾರಾಷ್ಟ್ರ ಬದಲಾವಣೆ ಬಯಸುತ್ತಿದೆ, ನಮ್ಮ ಮೈತ್ರಿ ಅದಕ್ಕಾಗಿ ಕೆಲಸ ಮಾಡುತ್ತಿದೆ: ಶರದ್ ಪವಾರ್

- Advertisement -
- Advertisement -

ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದು, ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಅವರಿಗೆ ಪರ್ಯಾಯವನ್ನು ನೀಡುವ ನಿಟ್ಟಿನಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಯು ಕೆಲಸ ಮಾಡಲಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಗುರುವಾರ ಹೇಳಿದ್ದಾರೆ. ಮಹಾರಾಷ್ಟ್ರ

ನವೆಂಬರ್ 20 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾಗ್ಪುರ ವಿಮಾನ ನಿಲ್ದಾಣದಲ್ಲಿ ತಮ್ಮ ಸಾರ್ವಜನಿಕ ಸಭೆಗಳಿಗೆ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಜಾತಿ ಗಣತಿ ನಡೆಯಬೇಕು ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಎಂವಿಎ ಮೈತ್ರಿಯಲ್ಲಿ ಪ್ರಮುಖವಾಗಿ ಎನ್‌ಸಿಪಿ (ಎಸ್‌ಪಿ), ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಅವರ ಶಿವಸೇನೆ (ಯುಬಿಟಿ) ಪಕ್ಷಗಳು ಇವೆ. ಬುಧವಾರ ನಾಗ್ಪುರಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಜಾತಿ ಆಧಾರಿತ ಜನಗಣತಿ ನಡೆಯಲಿದೆ ಎಂದು ಹೇಳಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷವು “50%” ಮೀಸಲಾತಿ ಮಿತಿಯನ್ನು ಮೀರಿ ಮೀಸಲಾತಿ ನೀಡಲಿದೆ ಎಂದು ಭರವಸೆ ನೀಡಿದ್ದರು. ಮಹಾರಾಷ್ಟ್ರ

ತಮ್ಮ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಶರದ್ ಪವಾರ್, “ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ಅವರಿಗೆ ವಿಶ್ವಾಸವನ್ನು ನೀಡುವಲ್ಲಿ ನಾವು ಕೆಲಸ ಮಾಡಬೇಕಾಗಿದೆ ಎಂದು ನಾವು ಭಾವಿಸುತ್ತೇವೆ ಮತ್ತು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ. ಅದಕ್ಕಾಗಿ ನಾನು ಮತ್ತು ನನ್ನ ಎಲ್ಲಾ ಸಹಚರರು ಇಂದಿನಿಂದ ಮಹಾರಾಷ್ಟ್ರದಾದ್ಯಂತ ಜನರನ್ನು ತಲುಪುತ್ತಿದ್ದೇವೆ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪವಾರ್, “ನನ್ನ ಪಕ್ಷದ ನಿಲುವನ್ನು ನಾನು ಹೇಳುತ್ತೇನೆ. ನಾವು ಕಳೆದ ಮೂರು ವರ್ಷಗಳಿಂದ ಜಾತಿ ಗಣತಿಗೆ ಒತ್ತಾಯಿಸುತ್ತಿದ್ದೇವೆ. ಜಾತಿ ಗಣತಿ ನಡೆಸಬೇಕು, ಅದು ದೇಶದ ಮುಂದೆ ನಿಜವಾದ ಸಮಸ್ಯೆಗಳನ್ನು ಇಡುತ್ತದೆ” ಎಂದು ಹೇಳಿದ್ದಾರೆ.

“ಪ್ರಮುಖವಾಗಿ, ಮೀಸಲಾತಿ ಮಿತಿಯನ್ನು ಹೆಚ್ಚಿಸುವ ನಿರ್ಧಾರವನ್ನು ಸುಲಭಗೊಳಿಸಲು ಜಾತಿ ಗಣತಿ ಸಹಾಯ ಮಾಡುತ್ತದೆ ಎಂದು ತೋರುತ್ತದೆ. ಜನಗಣತಿ ಪೂರ್ಣಗೊಂಡ ನಂತರ ಈ ಚಿತ್ರಣವು ಸ್ಪಷ್ಟವಾಗಿ ಕಾಣುತ್ತದೆ. ಜೊತೆಗೆ, ರಾಹುಲ್ ಗಾಂಧಿ ಹೇಳುವಂತೆ ನಡೆದರೆ ಮೀಸಲಾತಿ ಶೇಕಡಾವಾರು ಹೆಚ್ಚಿಸಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ಸಾರ್ವಜನಿಕವಾಗಿ ಬಿಜೆಪಿ ನಾಯಕನ ಪಾದ ಮುಟ್ಟಿದ ನಿತೀಶ್; ಟೀಕಿಸಿದ ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...