Homeಮುಖಪುಟಮಹಾರಾಷ್ಟ್ರ: ಶಿಂಧೆ ಸರ್ಕಾರ 15 ದಿನಗಳಲ್ಲಿ ಪತನ: ಸಂಜಯ್ ರಾವತ್

ಮಹಾರಾಷ್ಟ್ರ: ಶಿಂಧೆ ಸರ್ಕಾರ 15 ದಿನಗಳಲ್ಲಿ ಪತನ: ಸಂಜಯ್ ರಾವತ್

- Advertisement -
- Advertisement -

ಭಾನುವಾರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಪಚೋರಾದಲ್ಲಿ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು, ರಾಜ್ಯದಲ್ಲಿ ಏಕನಾಥ್ ಶಿಂಧೆ ಸರ್ಕಾರ 15 ದಿನಗಳಲ್ಲಿ ಪತನವಾಗಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಜಲಗಾಂವ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಸೇನಾ (ಯುಬಿಟಿ) ಮುಖ್ಯ ವಕ್ತಾರ ಸಂಜಯ್ ರಾವತ್ ಅವರು, ”ಶಿಂಧೆ ಸರ್ಕಾರದ ಡೆತ್ ವಾರಂಟ್… 15 ದಿನಗಳಲ್ಲಿ ಸರ್ಕಾರ ಪತನವಾಗಲಿದೆ.” ಅಲ್ಲಿ ಪಕ್ಷವು ತನ್ನ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ” ಎಂದು ಹೇಳಿದರು.

”ಇನ್ನು 15 ದಿನಗಳಲ್ಲಿ ಶಿಂಧೆ ಸರ್ಕಾರ ಪತನವಾಗಲಿದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆದರೆ ಅದು ಆಗಲಿಲ್ಲ ಏಕೆಂದರೆ ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಮುಂದೂಡಲಾಗಿದೆ. ಈಗ ನ್ಯಾಯಾಲಯದ ತೀರ್ಪು ಹೊರಬೀಳಲಿದ್ದು, ಶಿಂಧೆ ಸರ್ಕಾರ ಪತನವಾಗಲಿದೆ…” ಎಂದು ಹೇಳಿದರು.

ಮುಖ್ಯಮಂತ್ರಿಗೆ ಗುಂಟುಮೂಟೆ ಕಟ್ಟಿಕೊಂಡು ಹೊರಡಲು ಬಿಜೆಪಿ ಹೇಳಿದೆ ಎಂದು ಶನಿವಾರ ರಾವತ್ ಹೇಳಿಕೊಂಡಿದ್ದಾರೆ.

ಠಾಕ್ರೆ ಭಾನುವಾರ ಪಚೋರಾದಲ್ಲಿ ಪಕ್ಷದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಬೆನ್ನಲ್ಲೇ, ಜಲಗಾಂವ್‌ನಲ್ಲಿ ಶಿವಸೇನಾದ ಎರಡು ಬಣಗಳ ನಡುವೆ ಮಾತಿನ ಯುದ್ಧ ಆರಂಭವಾಗಿದೆ. ಶಿಂಧೆ ಸೇನೆಗೆ ಸೇರಿದ ಮಹಾರಾಷ್ಟ್ರದ ನೀರು ಸರಬರಾಜು ಸಚಿವ ಗುಲಾಬ್ರಾವ್ ಪಾಟೀಲ್ ಅವರು, ”ಉದ್ಧವ್ ಠಾಕ್ರೆ ಅವರ ರ್ಯಾಲಿಯನ್ನು ಕಲ್ಲು ತೂರಾಟದ ಮೂಲಕ ಛಿದ್ರಗೊಳಿಸಬಹುದು” ಎಂದು ಹೇಳಿದ್ದಾರೆ.

”ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಆಸ್ಪತ್ರೆಗಳಿಗೆ ಉಪಕರಣಗಳ ಖರೀದಿಯಲ್ಲಿ ಪಾಟೀಲ್ ಬಹುಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ” ಎಂದು ರಾವತ್ ಆರೋಪಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು...

0
ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ. ಪೊಲೀಸರ...