Homeಮುಖಪುಟಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

ಮಹಾರಾಷ್ಟ್ರ: ಬಿಜೆಪಿಯ 12 ಶಾಸಕರನ್ನು ಸದನದಿಂದ ಒಂದು ವರ್ಷ ಅಮಾನತು ಮಾಡಿದ ಸ್ಪೀಕರ್‌

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆಯ ಮಳೆಗಾಲದ ಅಧಿವೇಶನದ ಮೊದಲ ದಿನ ಸೋಮವಾರ ಗೊಂದಲಗಳ ಗೂಡಾಗಿತ್ತು. ಸ್ಪೀಕರ್ ಕಚೇರಿಯಲ್ಲಿ ಪ್ರಿಸಿಡಿಂಗ್ ಆಫೀಸರ್ ಭಾಸ್ಕರ್ ಜಾದವ್ ಅವರನ್ನು ನಿಂದಿಸಿದ ಮತ್ತು ದೈಹಿಕ ಹಲ್ಲೆ ನಡೆಸಿದ ಆರೋಪದಲ್ಲಿ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದವರೆಗೆ ಸ್ಪೀಕರ್‌ ಅಮಾನತುಗೊಳಿಸಿದ್ದಾರೆ.

ಸದನದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. “ಇವು ಸುಳ್ಳು ಆರೋಪಗಳು. ಶಾಸಕರ ವಿರುದ್ಧ ಒಂದು ಕಥೆ ಕಟ್ಟಲಾಗುತ್ತಿದೆ. ಬಿಜೆಪಿಯಿಂದ ಯಾರೂ ನಿಂದನೆ ಮಾಡಿಲ್ಲ” ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವೀಸ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಜೊತೆಗೆ “ಒಬಿಸಿ (Other Backward Castes) ಮೀಸಲಾತಿಗಾಗಿ, ನಾವು ನಮ್ಮ 12 ಕ್ಕೂ ಹೆಚ್ಚು ಶಾಸಕರನ್ನು ತ್ಯಾಗಮಾಡಲು ಸಿದ್ಧರಿದ್ದೇವೆ” ಎಂದು ಹೇಳಿದ್ದಾರೆ. ಈ ಅಧಿವೇಶನದಲ್ಲಿ ತಮ್ಮ ಪಕ್ಷವು ಒಬಿಸಿ ಮೀಸಲಾತಿ ಕೂಡ ತಾವು ಹೈಲೈಟ್ ಮಾಡಲು ನಿರ್ಧರಿಸಿರುವ ಪ್ರಮುಖ ವಿಷಯಗಳಲ್ಲಿ ಒಂದು” ಎಂದು ಫಡ್ನವೀಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ-ಶಿವಸೇನೆ ಸಂಬಂಧ, ಅಮಿರ್ ಖಾನ್-ಕಿರಣ್ ರಾವ್ ಸಂಬಂಧದಂತೆ- ಸಂಜಯ್ ರಾವತ್

“ಪ್ರತಿಪಕ್ಷದ ನಾಯಕರು ನನ್ನ ಕ್ಯಾಬಿನ್‌ಗೆ ಬಂದು ದೇವೇಂದ್ರ ಫಡ್ನವೀಸ್ ಮತ್ತು ಹಿರಿಯ ನಾಯಕ ಚಂದ್ರಕಾಂತ್ ಪಾಟೀಲ್ ಅವರ ಮುಂದೆಯೇ ಅಸಂಸದೀಯ ಭಾಷೆ ಬಳಸಿ ನನ್ನನ್ನು ನಿಂದಿಸಿದ್ದಾರೆ. ಕೆಲವು ನಾಯಕರು ನನ್ನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ” ಎಂದು ಭಾಸ್ಕರ್ ಜಾಧವ್ ಮಾಧ್ಯಮಗಳಿಗೆ ತಿಳಿಸಿದರು.

12 ಶಾಸಕರನ್ನು ಒಂದು ವರ್ಷ ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಾಬ್ ಮಂಡಿಸಿದ್ದು, ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಸಂಜಯ್ ಕುಟೆ, ಆಶಿಸ್ ಶೆಲಾರ್. ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲಾವ್ನಿ, ಹರೀಶ್ ಪಿಂಪಾಲೆ, ರಾಮ್ ಸತ್ಪುಟ್, ಯೋಗೇಶ್ ಸಾಗರ್, ಜಯ ಕುಮಾರ್ ರಾವತ್, ನಾರಾಯಣ್ ಕುಚೆ ಮತ್ತು ಕೀರ್ತಿಕುಮಾರ್ ಭಾಂಗ್ಡಿಯಾ ಅಮಾನತುಗೊಂಡ ಶಾಸಕರು.

ಶರದ್ ಪವಾರ್ ಅವರ ಎನ್‌ಸಿಪಿ ಮುಖಂಡ ನವಾಬ್ ಮಲಿಕ್ ಟ್ವಿಟ್ಟರ್‌ನಲ್ಲಿ ಗಲಾಟೆಯ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸದಸ್ಯರು, ಪ್ರತಿಪಕ್ಷಗಳು ಸದನದ ಕಲಾಪವನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

“ಈ ಠಾಕ್ರೆ ಸರ್ಕಾರ ತಾಲಿಬಾನ್‌ನಂತೆ ವರ್ತಿಸುತ್ತಿದೆ. ನಾನು ಈ ಕ್ರಮವನ್ನು ಖಂಡಿಸುತ್ತೇನೆ. ನಾನು ಮತ್ತು ಇತರ ಯಾವುದೇ ಶಾಸಕರು ಭಾಸ್ಕರ್ ಜಾಧವ್ ಅವರನ್ನು ನಿಂದಿಸಲಿಲ್ಲ. ನಾನು ಅವರ ಬಳಿ ಕ್ಷಮೆಯಾಚಿಸಿದ್ದೇನೆ ಆದರೂ ಕುಡ ಅವರು ಅಮಾನತುಗೊಳಿಸಿದ್ದಾರೆ” ಎಂದು ಬಿಜೆಪಿ ಶಾಸಕ ಆಶಿಶ್ ಶೆಲಾರ್ ಹೇಳಿದ್ದಾರೆ.


ಇದನ್ನೂ ಓದಿ: ‘ಶಿವಸೇನೆ ಎಂದಿಗೂ ಬಿಜೆಪಿಯ ಶತ್ರುವಲ್ಲ’: ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...