Homeಮುಖಪುಟಮಹಾರಾಷ್ಟ್ರ| ಗೋಮಾಂಸ ಸಾಗಾಟ ಆರೋಪ : ರೈಲಿನಲ್ಲಿ ಹಿರಿಯ ವ್ಯಕ್ತಿ ಮೇಲೆ ಸಹ ಪ್ರಯಾಣಿಕರಿಂದ ಹಲ್ಲೆ

ಮಹಾರಾಷ್ಟ್ರ| ಗೋಮಾಂಸ ಸಾಗಾಟ ಆರೋಪ : ರೈಲಿನಲ್ಲಿ ಹಿರಿಯ ವ್ಯಕ್ತಿ ಮೇಲೆ ಸಹ ಪ್ರಯಾಣಿಕರಿಂದ ಹಲ್ಲೆ

- Advertisement -
- Advertisement -

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಇಗತ್‌ಪುರಿ ಬಳಿ ಎಕ್ಸ್‌ಪ್ರೆಸ್ ರೈಲಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ವೃದ್ದರೊಬ್ಬರ ಮೇಲೆ ಸಹ ಪ್ರಯಾಣಿಕರು ಹಲ್ಲೆ ನಡೆಸಿದ್ದಾರೆ ಎಂದು ರೈಲ್ವೆ ಪೊಲೀಸರು (ಜಿಆರ್‌ಪಿ) ಶನಿವಾರ ತಿಳಿಸಿದ್ದಾರೆ.

ಈ ವಾರದ ಆರಂಭದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಜಿಆರ್‌ಪಿ ತನಿಖೆಯನ್ನು ಪ್ರಾರಂಭಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿನೊಳಗೆ ಹತ್ತಾರು ಜನರು ವೃದ್ದರೊಬ್ಬರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಖ್ಯಾತ ಫ್ಯಾಕ್ಟ್‌ ಚೆಕ್ಕರ್ ಮಹಮದ್ ಝುಬೇರ್ ಸೇರಿದಂತೆ ಹಲವರು ಈ ವಿಡಿಯೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಜಿಆರ್‌ಪಿ ಪ್ರಕಾರ, ಸಂತ್ರಸ್ತ ವೃದ್ಧ ಜಲಗಾಂವ್ ಜಿಲ್ಲೆಯ ನಿವಾಸಿ ಹಾಜಿ ಅಶ್ರಫ್ ಮುನ್ಯಾರ್ ಕಲ್ಯಾಣ್‌ನಲ್ಲಿರುವ ತನ್ನ ಮಗಳ ಮನೆಗೆ ಹೋಗುತ್ತಿದ್ದಾಗ ಇಗತ್‌ಪುರಿ ಬಳಿ ಗೋಮಾಂಸ ಸಾಗಿಸುತ್ತಿದ್ದಾರೆಂದು ಆರೋಪಿಸಿ ಸಹ ಪ್ರಯಾಣಿಕರು ಥಳಿಸಿದ್ದಾರೆ.

“ನಾವು ವಿಡಿಯೋ ಗಮನಿಸಿದ್ದೇವೆ ಮತ್ತು ಸಂತ್ರಸ್ತನನ್ನು ಗುರುತಿಸಿದ್ದೇವೆ. ದಾಳಿಯಲ್ಲಿ ಭಾಗಿಯಾಗಿರುವ ಕೆಲವರನ್ನು ಕೂಡ ಗುರುತಿಸಲಾಗಿದೆ, ತನಿಖೆ ನಡೆಯುತ್ತಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ; ಪತಂಜಲಿ ‘ಸಸ್ಯಾಹಾರಿ’ ಟೂತ್ ಪೌಡರ್‌ನಲ್ಲಿ ಮಾಂಸದ ಅಂಶ! ರಾಮದೇವ್, ಕೇಂದ್ರಕ್ಕೆ ಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...