Homeಮುಖಪುಟಮಹಾರಾಷ್ಟ್ರ: ಸೆಪ್ಟಿಕ್ ಟ್ಯಾಂಕ್‌ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು

ಮಹಾರಾಷ್ಟ್ರ: ಸೆಪ್ಟಿಕ್ ಟ್ಯಾಂಕ್‌ನಲ್ಲಿ ಉಸಿರುಗಟ್ಟಿ ಮೂವರು ಕಾರ್ಮಿಕರು ಸಾವು

- Advertisement -
- Advertisement -

ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರರದ ಪುಣೆಯ ಹೌಸಿಂಗ್ ಸೊಸೈಟಿಯಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವ ಗುತ್ತಿಗೆದಾರನ ವಿರುದ್ಧ ಪೊಲೀಸರು ‘ನಿರ್ಲಕ್ಷ್ಯದಿಂದ ಸಾವು’ ಪ್ರಕರಣ ದಾಖಲಿಸಿದ್ದಾರೆ ಎಂದು ಎನ್‌ಡಿಟಿವಿ ವರಿದ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಂತ್ರಸ್ತರು ವಘೋಲಿ ಪ್ರದೇಶದಲ್ಲಿ 18 ಅಡಿ ಆಳದ ಒಳಚರಂಡಿ ಸಂಸ್ಕರಣಾ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಒಳಗೆ ಸಿಲುಕಿಕೊಂಡಿದ್ದಾರೆ ಎಂದು ನಮಗೆ ಬೆಳಿಗ್ಗೆ 7 ಗಂಟೆಗೆ ಕರೆ ಬಂದಿತು” ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನಾವು ಸ್ಥಳಕ್ಕೆ ತಲುಪಿದ ನಂತರ, ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಮೇಲೆತ್ತಿದ್ದೇವೆ. ಇನ್ನೂ ಒಬ್ಬರು ಕಾಣೆಯಾಗಿದ್ದಾರೆ ಎಂದು ನಮಗೆ ತಿಳಿಸಲಾಗಿತ್ತು. ನಂತರ ಅವರ ಮೃತ ದೇಹ ಕೂಡಾ ಪತ್ತೆಯಾಗಿದೆ” ಎಂದು ಅವರು ಹೇಳಿದ್ದಾರೆ. ಮೂವರು ವ್ಯಕ್ತಿಗಳು ಕೂಡಾ ಒಳಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: ಮುಸ್ಲಿಂ ವ್ಯಾಪಾರಿಗಳ ಮೇಲೆ ಗುಂಪು ಹಲ್ಲೆ; 2 ಪ್ರಕರಣ ದಾಖಲು

ಸ್ಥಾವರ ನಿರ್ವಹಣೆಯ ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಲೋನಿಕಂಡ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್‌ನಲ್ಲಿ, ನಗರದ ಲೋನಿ ಕಲ್ಬೋರ್ ಪ್ರದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಮೂವರು ಕಾರ್ಮಿಕರು ಹಾಗೂ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...