Homeಕರೋನಾ ತಲ್ಲಣಮಹಾರಾಷ್ಟ್ರ:ಕೊರೊನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ700 ಮಂದಿ ಭಾಗಿ, ಪ್ರಕರಣ ದಾಖಲು

ಮಹಾರಾಷ್ಟ್ರ:ಕೊರೊನಾ ನಿಯಮ ಉಲ್ಲಂಘಿಸಿ ಮದುವೆಯಲ್ಲಿ700 ಮಂದಿ ಭಾಗಿ, ಪ್ರಕರಣ ದಾಖಲು

- Advertisement -
- Advertisement -

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣದಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ನಿರ್ಬಂಧಗಳ ಹೊರತಾಗಿಯೂ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್‌ ನಗರದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಸುಮಾರು 700 ಮಂದಿ ಭಾಗವಹಿಸಿದ್ದಾರೆ.

ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಮದುವೆ ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾಜ್ಯದ ಮಾರ್ಗಸೂಚಿಗಳ ಪ್ರಕಾರ, 50 ಜನರಿಗೆ ಮಾತ್ರ ಮದುವೆಗೆ ಹಾಜರಾಗಲು ಅವಕಾಶವಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾರ್ಚ್ 10 ರಂದು ಈ ಕಾರ್ಯಕ್ರಮ ನಡೆದಿದೆ ಎಂದು ಕಲ್ಯಾಣ್ ಡೊಂಬಿವ್ಲಿ ಮಹಾನಗರ ಪಾಲಿಕೆ (ಕೆಡಿಎಂಸಿ) ಗುರುವಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಹೆಚ್ಚಿದ ಕೊರೊನಾ ಆತಂಕ: ಒಂದು ವಾರ ನಾಗ್ಪುರ ಲಾಕ್‌ಡೌನ್

“ಕಲ್ಯಾಣ್ (ಪೂರ್ವ) ದಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಹಲವಾರು ಜನರು ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿ ನೀಡಿದ್ದರು. ಸಿವಿಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ, ಮದುವೆಯಲ್ಲಿ ಸುಮಾರು 700 ಜನರನ್ನು ನೋಡಿದ್ದಾರೆ’ ಎಂದು ಹೇಳಿಕೆ ತಿಳಿಸಿದೆ.

ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದವರು ಕೊರೊನಾ ನಿಯಮಗಳನ್ನು ಪಾಲಿಸಿರಲಿಲ್ಲ. ಮಾಸ್ಕ್, ದೈಹಿಕ ಅಂತರಗಳನ್ನು, ಸುರಕ್ಷತಾ ನಿಯಮಾವಳಿಗಳನ್ನು ಅನುಸರಿಸಿಲ್ಲದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಐಪಿಸಿ ಸೆಕ್ಷನ್ 188 (ಸಾರ್ವಜನಿಕ ಸೇವಕರಿಂದ ಘೋಷಿಸಲ್ಪಟ್ಟ ಆದೇಶಕ್ಕೆ ಅಸಹಕಾರ), 269 ಮತ್ತು 270 (ಯಾವುದೇ ರೋಗದ ಸೋಂಕನ್ನು ಜೀವಕ್ಕೆ ಅಪಾಯಕಾರಿಯಾಗಿ ಹರಡುವ ಸಾಧ್ಯತೆ ಬಗ್ಗೆ ಇರುವ ನಿರ್ಲಕ್ಷ್ಯ ಮತ್ತು ಮಾರಕ ಕೃತ್ಯ), ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಕಾರ್ಯಕ್ರಮದ ಸಂಘಟಕರಾದ ರಾಜೇಶ್ ಮಾತ್ರೆ ಮತ್ತು ಮಹೇಶ್ ರಾವತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಲಾಗಿದೆ.

ಗುರುವಾರ, ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳಿಂದಾಗಿ ನಾಗ್ಪುರವನ್ನು ಮಾರ್ಚ್ 15 ರಿಂದ ಮಾರ್ಚ್ 21 ರವರೆಗೆ ಒಂದು ವಾರ ಲಾಕ್ ಡೌನ್ ಮಾಡಿ ಸರ್ಕಾರ ಆದೇಶಿಸಿದೆ. ಅಗತ್ಯ ಸೇವೆಗಳಾದ ತರಕಾರಿ, ಹಣ್ಣಿನ ಅಂಗಡಿಗಳು ಮತ್ತು ಹಾಲಿನ ಡೈರಿಗಳು ಕಾರ್ಯನಿರ್ವಹಿಸಲಿವೆ ಎಂದಿದೆ.


ಇದನ್ನೂ ಓದಿ: UAPA ಪ್ರಕರಣಗಳಲ್ಲಿ ತೀವ್ರ ಹೆಚ್ಚಳ: ಐದು ವರ್ಷಗಳಲ್ಲಿ 5,128 ಪ್ರಕರಣ- 7,050 ಜನರ ಬಂಧನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತ್ರಿಪುರದಲ್ಲಿ ಬುಡಕಟ್ಟು ಜನರಿಂದ ಮತದಾನ ಬಹಿಷ್ಕಾರ

0
ತ್ರಿಪುರ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯಲ್ಲಿ ರಸ್ತೆ, ನೀರಿನಂತಹ ಮೂಲಭೂತ ಸೌಕರ್ಯಗಳ ವ್ಯವಸ್ಥೆಯಿಲ್ಲದೆ ಕಂಗೆಟ್ಟ ಬುಡಕಟ್ಟು ಗ್ರಾಮದ 600ಕ್ಕೂ ಹೆಚ್ಚು ಜನರು ಮತದಾನವನ್ನು ಬಹಿಷ್ಕರಿಸುವ ಮೂಲಕ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ...