Homeಮುಖಪುಟಮಹಾರಾಷ್ಟ್ರ | 'ಗಡಿಯಾರ' ಚಿಹ್ನೆಯ ಜೊತೆಗೆ 'ವಿಚಾರಣಾಧೀನ' ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ...

ಮಹಾರಾಷ್ಟ್ರ | ‘ಗಡಿಯಾರ’ ಚಿಹ್ನೆಯ ಜೊತೆಗೆ ‘ವಿಚಾರಣಾಧೀನ’ ಎಂದು ಸೇರಿಸುವಂತೆ ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸುಪ್ರೀಂಕೋರ್ಟ್‌ ನಿರ್ದೇಶನ

- Advertisement -
- Advertisement -

ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆಯ ವೇಳೆ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಪಕ್ಷ ಬಳಸುವ ‘ಗಡಿಯಾರ’ ಚಿಹ್ನೆಯ ಎಲ್ಲಾ ಪ್ರಚಾರ ಸಾಮಗ್ರಿಗಳಲ್ಲಿ ‘ವಿಚಾರಣಾಧೀನ’ ಎಂದು ಸೂಚನೆ ಸೇರಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಆದೇಶ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ರಾಜ್ಯ ಚುನಾವಣೆಯಲ್ಲಿ ಅಜಿತ್ ಪವಾರ್ ಅವರ ಎನ್‌ಸಿಪಿ ಬಣವು ಪಕ್ಷದ ಚಿಹ್ನೆಯಾದ ‘ಗಡಿಯಾರ’ವನ್ನು ಬಳಸದಂತೆ ತಡೆಯಲು ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣವು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಮತದಾರರಲ್ಲಿ ಗೊಂದಲ ಉಂಟಾಗದಂತೆ ಅಜಿತ್ ಪವಾರ್ ಬಣಕ್ಕೆ ಹೊಸ ಚುನಾವಣಾ ಚಿಹ್ನೆ ನೀಡಬೇಕು ಎಂದು ಮನವಿಯಲ್ಲಿ ಶರದ್ ಪವಾರ್ ಅವರ ಬಣವು ಸುಪ್ರೀಂಕೋರ್ಟ್‌ಗೆ ಕೋರಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತತೆ ಮತ್ತು ಸ್ಪಷ್ಟತೆಯ ಅಗತ್ಯವಿದೆ ಎಂದು ಅರ್ಜಿ ವಾದಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

2023ರ ಜುಲೈ ತಿಂಗಳಲ್ಲಿ ಅಜಿತ್ ಪವಾರ್ ಅವರು ಪಕ್ಷದ ಹಲವಾರು ಶಾಸಕರೊಂದಿಗೆ ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರವನ್ನು ಸೇರಿಕೊಂಡಿದ್ದರು. ಈ ಸರ್ಕಾರ ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಬಣವನ್ನು ಒಳಗೊಂಡಿತ್ತು. ಸಮ್ಮಿಶ್ರ ಸರ್ಕಾರಕ್ಕೆ ಸೇರಿದ ನಂತರ ಅಜಿತ್ ಪವಾರ್ ಉಪ ಮುಖ್ಯಮಂತ್ರಿಗಿ ಅಧಿಕಾರ ವಹಿಸಿಕೊಂಡರು.

ಇದರ ನಂತರ ಎನ್‌ಸಿಪಿ ಪಕ್ಷ ವಿಭಜನೆಗೊಂಡು, ಒಂದು ಬಣ ಶರದ್ ಪವಾರ್ ಅವರನ್ನು ಬೆಂಬಲಿಸಿದರೆ, ಮತ್ತೊಂದು ಬಣ ಅಜಿತ್ ಪವಾರ್ ಅವರನ್ನು ಬೆಂಬಲಿಸಿತು.

ಫೆಬ್ರವರಿಯಲ್ಲಿ, ಚುನಾವಣಾ ಆಯೋಗವು ಅಜಿತ್ ಪವಾರ್ ನೇತೃತ್ವದ ಬಣವನ್ನು ನಿಜವಾದ ಎನ್‌ಸಿಪಿ ಎಂದು ಗುರುತಿಸಿ, ಗಡಿಯಾರದ ಚಿಹ್ನೆಯನ್ನು ಅವರಿಗೆ ನಿಗದಿಪಡಿಸಿತು. ಅದೆ ವೇಳೆ ಶರದ್ ಪವಾರ್ ನೇತೃತ್ವದ ಗುಂಪಿಗೆ “ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ – ಶರದ್ಚಂದ್ರ ಪವಾರ್” ಎಂಬ ಹೆಸರನ್ನು ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ “ತುತ್ತೂರು ಊದುವ ವ್ಯಕ್ತಿ” ಚಿಹ್ನೆಯನ್ನು ನಿಗದಿಪಡಿಸಿತ್ತು. ಇದನ್ನು ಶರದ್ ಪವಾರ್ ಬಣ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಮಾರ್ಚ್‌ನಲ್ಲಿ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಲೋಕಸಭೆ ಚುನಾವಣೆಗೆ ಗಡಿಯಾರದ ಚಿಹ್ನೆಯನ್ನು ಬಳಸಲು ಅನುಮತಿಸಲಾಗಿದೆ ಎಂದು ಆದೇಶಿಸಿತು.

ಆದಾಗ್ಯೂ, ಚಿಹ್ನೆಯ ಬಳಕೆಯು ವಿಚಾರಣಾಧೀನವಾಗಿದ್ದು, ಅದರ ಬಳಕೆಯು ಪ್ರಕರಣದ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಸ್ಪಷ್ಟಪಡಿಸಿ ಪಕ್ಷವು ದಿನಪತ್ರಿಕೆಗಳಲ್ಲಿ ಇಂಗ್ಲಿಷ್, ಹಿಂದಿ ಮತ್ತು ಮರಾಠಿಯಲ್ಲಿ ಸಾರ್ವಜನಿಕ ಸೂಚನೆಯನ್ನು ನೀಡಬೇಕಾಗಿತ್ತು.

ಅಜಿತ್ ಪವಾರ್ ಬಣವು ತಮ್ಮ ಚುನಾವಣಾ ಪ್ರಚಾರ ಸಾಮಗ್ರಿಗಳಲ್ಲಿ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಸೇರಿದಂತೆ ಗಡಿಯಾರದ ಚಿಹ್ನೆಯ ಬಳಕೆಯನ್ನು ವಿಚಾರಣಾಧೀನ ಎಂದು ನಮೂದಿಸುವಂತೆ ಸೂಚಿಸಲಾಗಿದೆ.

ಗುರುವಾರ, ಶರದ್ ಪವಾರ್ ಬಣವನ್ನು ಪ್ರತಿನಿಧಿಸುವ ವಕೀಲ ಅಭಿಷೇಕ್ ಸಿಂಘ್ವಿ, ವಿಚಾರಣಾಧೀನ ಚಿಹ್ನೆಯಿಂದ ಯಾವುದೇ ಬಣ ಪ್ರಯೋಜನ ಪಡೆಯಬಾರದು ಎಂದು ವಾದಿಸಿದರು. ಅಜಿತ್ ಪವಾರ್ ಬಣ ತನ್ನ ಪ್ರಚಾರ ಸಾಮಗ್ರಿಯಲ್ಲಿ ಅಗತ್ಯ ಸೂಚನೆಯನ್ನು ಸೇರಿಸುತ್ತಿಲ್ಲ ಎಂದು ಆರೋಪಿಸಿದ್ದರು.

ನ್ಯಾಯಾಲಯದ ಷರತ್ತುಗಳನ್ನು ಅನುಸರಿಸದ ಕಾರಣ, ಗಡಿಯಾರದ ಚಿಹ್ನೆಯನ್ನು ಬಳಸದಂತೆ ತಡೆಯಬೇಕು ಎಂದು ಸಿಂಘ್ವಿ ಪ್ರತಿಪಾದಿಸಿದ್ದು, ಅದಕ್ಕಾಗಿ ಅಜಿತ್ ಪವಾರ್ ಅವರ ಬಣದ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡ ಪ್ರಚಾರ ಪೋಸ್ಟರ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ನ್ಯಾಯಾಲಯದಲ್ಲಿ ತೋರಿಸಿದ್ದಾರೆ.

ಆದರೆ ಅಜಿತ್ ಪವಾರ್ ಗುಂಪಿನ ಪರ ಹಾಜರಾದ ವಕೀಲ ಬಲ್ಬೀರ್ ಸಿಂಗ್ ಆರೋಪವನ್ನು ತಳ್ಳಿಹಾಕಿದ್ದಾರೆ. ಎಲ್ಲಾ ಕರಪತ್ರಗಳು ಮತ್ತು ಪ್ರಚಾರ ಸಾಮಗ್ರಿಗಳಲ್ಲಿ ಅಗತ್ಯ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸಾಮಾಗ್ರಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಸಮಯಾವಕಾಶ ಕೋರಿದ್ದಾರೆ.

ಮಹಾರಾಷ್ಟ್ರ ಚುನಾವಣೆ ಸಂದರ್ಭದಲ್ಲಿ ಹಿಂದಿನ ಆದೇಶಗಳನ್ನು ಪಾಲಿಸಲಾಗುವುದು ಎಂದು ದೃಢಪಡಿಸುವ ಭರವಸೆಯನ್ನು ನೀಡುವಂತೆ ಅಜಿತ್ ಪವಾರ್ ಬಣಕ್ಕೆ ನ್ಯಾಯಾಲಯ ಆದೇಶಿಸಿದೆ. ತನ್ನ ಆದೇಶಗಳನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿದ ಪೀಠ, ಮುಂದಿನ ವಿಚಾರಣೆಯನ್ನು ನವೆಂಬರ್ 6ಕ್ಕೆ ನಿಗದಿಪಡಿಸಿದೆ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 20 ರಂದು ಮತದಾನ ನಡೆಯಲಿದೆ. ಜಾರ್ಖಂಡ್ ಚುನಾವಣೆಯ ಜೊತೆಗೆ ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಹೆಸರು ಶಿಫಾರಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...