Homeಕರೋನಾ ತಲ್ಲಣಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

ಮಹಾರಾಷ್ಟ್ರದ ಮೊದಲ ಒಮೈಕ್ರಾನ್‌ ರೋಗಿ ಗುಣಮುಖ; ಆಸ್ಪತ್ರೆಯಿಂದ ಬಿಡುಗಡೆ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಪತ್ತೆಯಾದ ಮೊದಲ ಒಮೈಕ್ರಾನ್‌ ಸೋಂಕಿತ 33 ವರ್ಷದ ಮೆರೈನ್ ಎಂಜಿನಿಯರ್ ಗುಣಮುಖರಾಗಿದ್ದಾರೆ ಎಂದು ವರದಿಯಾಗಿದೆ. ಅವರ ಕೊರೊನಾ ಪರೀಕ್ಷೆಯು ನೆಗೆಟಿವ್‌ ಬಂದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಇಂದು ವರದಿ ಮಾಡಿದೆ. ಮುಂಬೈ ಸಮೀಪದ ಕಲ್ಯಾಣ್-ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ನಿವಾಸಿಯಾಗಿರುವ ವ್ಯಕ್ತಿಯು ಕೊರೊನಾ ಲಸಿಕೆಯನ್ನು ಪಡೆದಿರಲಿಲ್ಲ.

ನವೆಂಬರ್ ಕೊನೆಯ ವಾರದಲ್ಲಿ ಮುಂಬೈಗೆ ತಲುಪುವ ಮೊದಲು ಅವರು ದಕ್ಷಿಣ ಆಫ್ರಿಕಾದಿಂದ ದುಬೈ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಅವರನ್ನು ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಏಳು ದಿನಗಳ ಕಾಲ ಹೋಮ್ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅವರು ಲಸಿಕೆ ಪಡೆದುಕೊಳ್ಳಲು ಪ್ರಯತ್ನಿಸಿದ್ದರಾದರೂ, ಖಾಸಗಿ ವ್ಯಾಪಾರಿ ಹಡಗಿನಲ್ಲಿ ಕೆಲಸ ಮಾಡುತ್ತಿದ್ದರಿಂದ ಅವರಿಗೆ ಅದು ಸಾಧ್ಯವಾಗಿರಲಿಲ್ಲ. ಈ ವರ್ಷದ ಏಪ್ರಿಲ್‌ನಲ್ಲಿ ಅವರು ಭಾರತದಿಂದ ತೆರಳಿದ್ದರು. ಆ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಮುಂಚೂಣಿ ಕೆಲಸಗಾರರಿಗೆ ಮಾತ್ರ ಕೊರೊನಾ ಲಸಿಕೆ ಲಭ್ಯವಿತ್ತು.

ಇದನ್ನೂ ಓದಿ:ಮಾರ್ಚ್‌ ಹೊತ್ತಿಗೆ ಮಹಾರಾಷ್ಟ್ರದಲ್ಲಿ BJP ಸರ್ಕಾರ ರಚಿಸಲಿದೆ: ಒಕ್ಕೂಟ ಸರ್ಕಾರದ ಸಚಿವ

ಮಹಾರಾಷ್ಟ್ರದಲ್ಲಿ ಆರೋಗ್ಯ ಅಧಿಕಾರಿಗಳು ಅವರ ಸ್ವ್ಯಾಬ್ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದರು. ಪರೀಕ್ಷಾ ವರದಿಯಲ್ಲಿ ಅವರಿಗೆ ಒಮೈಕ್ರಾನ್‌ ಸೋಂಕಿರುವುದು ದೃಢವಾಗಿತ್ತು. ನಂತರ ಅವರನ್ನು ಕಲ್ಯಾಣ್ ಪಟ್ಟಣದ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ಆಯುಕ್ತ ಡಾ. ವಿಜಯ್ ಸೂರ್ಯವಂಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ. “ಕಾಕತಾಳಿಯವಾಗಿ, ಇಂದು ಅವರ ಜನ್ಮದಿನವಾಗಿತ್ತು” ಎಂದು ಆಯುಕ್ತರು ಹೇಳಿದ್ದಾರೆ.

“ಅವರ ಪರಿಕ್ಷಾ ವರದಿ ನೆಗೆಟಿವ್‌ ಬಂದಿರುವುದರಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಸ್ಟ್ಯಾಂಡರ್ಡ್ ಪ್ರೋಟೋಕಾಲ್ ಪ್ರಕಾರ, ಅವರ ಎರಡು ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಯಿತು, ಅವು ಎರಡರಲ್ಲೂ ನೆಗೆಟಿವ್ ಬಂದಿದೆ. ಈಗ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಮತ್ತು ಯಾವುದೇ ರೋಗಲಕ್ಷಣಗಳಿಲ್ಲ” ಎಂದು ಆಯುಕ್ತರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಇದುವರೆಗೆ 10 ಒಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿ ಆಗಿದೆ.

ಅಂತರಾಷ್ಟ್ರೀಯ ಪ್ರಯಾಣಿಕರಿಗೆ, ವಿಶೇಷವಾಗಿ “ಅಪಾಯದಲ್ಲಿರುವ” ದೇಶಗಳಿಂದ ಬರುವ ಪ್ರಯಾಣಿಕರಿಗೆ ಮಹಾರಾಷ್ಟ್ರವು ಕಟ್ಟುನಿಟ್ಟಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸಚಿವ ಆದಿತ್ಯ ಠಾಕ್ರೆ ಅವರು ಬೂಸ್ಟರ್ ಶಾಟ್‌ಗಳನ್ನು ಅನುಮತಿಸಲು, ಲಸಿಕೆ ಅಂತರವನ್ನು ಕಡಿಮೆ ಮಾಡಲು ಮತ್ತು ಲಸಿಕೆಗಳ ಕಟ್-ಆಫ್ ವಯಸ್ಸನ್ನು 15 ಕ್ಕೆ ಇಳಿಸಲು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...