Homeಮುಖಪುಟಮಹಾರಾಷ್ಟ್ರ: ಸೀಟು ಹಂಚಿಕೆ ಅಂತಿಮಗೊಳಿಸಿದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ

ಮಹಾರಾಷ್ಟ್ರ: ಸೀಟು ಹಂಚಿಕೆ ಅಂತಿಮಗೊಳಿಸಿದ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ

- Advertisement -
- Advertisement -

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಪಕ್ಷಗಳಾದ ಶಿವಸೇನೆ-ಉದ್ಧವ್ ಠಾಕ್ರೆ, ಕಾಂಗ್ರೆಸ್ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ-ಶರದ್ ಪವಾರ್ ರಾಜ್ಯದ ಎಲ್ಲಾ 48 ಲೋಕಸಭಾ ಕ್ಷೇತ್ರಗಳ ಸೀಟು ಹಂಚಿಕೆ ಮಾಡಿಕೊಂಡಿವೆ.

ಮಂಗಳವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮೈತ್ರಿಕೂಟದ ಮುಖಂಡರು ಮುಂಬರುವ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ 21 ಸ್ಥಾನಗಳಲ್ಲಿ, ಕಾಂಗ್ರೆಸ್ 17 ಮತ್ತು ಶರದ್ ಪವಾರ್ ಅವರ ಎನ್‌ಸಿಪಿ 10 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಘೋಷಿಸಿದ್ದಾರೆ.

ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನಾ-ಯುಬಿಟಿ ನಾಯಕ ಉದ್ಧವ್ ಠಾಕ್ರೆ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ವಾರಗಳ ಕಾಲ ಮಾತುಕತೆ ನಡೆಸಿ ಸೀಟು ಹಂಚಿಕೆಯ ಕುರಿತು ತಿಳಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸವಾಲು ಹಾಕಲು ಎಲ್ಲಾ ಮೂರು ಪಕ್ಷಗಳು ವಿರೋಧ ಪಕ್ಷದ ಇಂಡಿಯಾ ಒಕ್ಕೂಟದ ಭಾಗವಾಗಿವೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಕಾಂಗ್ರೆಸ್‌ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ” ನಾವು ಮನೆ ಮನೆಗೆ ತೆರಳಿ ಗ್ಯಾರಂಟಿ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ನಾವು 8 ಕೋಟಿ ಗ್ಯಾರಂಟಿ ಕಾರ್ಡ್‌ಗಳನ್ನು ಮನೆಗಳಿಗೆ ವಿತರಿಸುತ್ತಿದ್ದೇವೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ನಮ್ಮ ಪ್ರಮುಖ ಸ್ಟಾರ್ ಪ್ರಚಾರಕರು. ಅವರು ದೇಶದ ವಿವಿಧ ಭಾಗಗಳಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿಸಿದ್ದಾರೆ.

ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದ ಎಂಟು ಲೋಕಸಭಾ ಸ್ಥಾನಗಳಿಗೆ ಒಟ್ಟು 204 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ನೋಡಿ : ಪ್ರಧಾನಿ ಮೋದಿ ಕೆಲ ಬಿಲಿಯನೇರ್‌ಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ: ರಾಹುಲ್‌ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಾಯುವ ಮುನ್ನ ‘ಹೇ ರಾಮ್’ ಎಂದ ಮಹಾತ್ಮಾ ಗಾಂಧಿಯನ್ನು ಅನುಸರಿಸುತ್ತೇವೆ: ಪ್ರಿಯಾಂಕಾ ಗಾಂಧಿ

0
"ನಮ್ಮ ಪಕ್ಷವು ಮಹಾತ್ಮ ಗಾಂಧಿಯವರ ಆದರ್ಶಗಳನ್ನು ಅನುಸರಿಸುತ್ತದೆ; ಅವರು ಸಾಯುವ ಮೊದಲು 'ಹೇ ರಾಮ್' ಎಂದು ಉಚ್ಚರಿಸಿದರು. ಆದರೆ, ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಧರ್ಮ ವಿರೋಧಿ ಎಂದು ಆರೋಪಿಸುವುದು...