Homeಮುಖಪುಟಒಂದೇ ಸಮಯಕ್ಕೆ ರಾಜ್ಯಪಾಲರ ಕಛೇರಿಗೆ ಭೇಟಿಕೊಟ್ಟ ಬಿಜೆಪಿ, ಕಾಂಗ್ರೆಸ್‌ ಮತ್ತು ಎನ್‌ಸಿಪಿ.. ಮುಂದೇನಾಗಲಿದೆ?

ಒಂದೇ ಸಮಯಕ್ಕೆ ರಾಜ್ಯಪಾಲರ ಕಛೇರಿಗೆ ಭೇಟಿಕೊಟ್ಟ ಬಿಜೆಪಿ, ಕಾಂಗ್ರೆಸ್‌ ಮತ್ತು ಎನ್‌ಸಿಪಿ.. ಮುಂದೇನಾಗಲಿದೆ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಕಸರತ್ತು ಮುಂದುವರಿದಿದೆ. ಯಾರು ಸರ್ಕಾರ ರಚನೆ ಮಾಡಿದರೂ ಮತ್ತೊಬ್ಬರ ಬೆಂಬಲ ಬೇಕೇ ಬೇಕು. ಹೀಗಾಗಿ ಬಿಕ್ಕಟ್ಟು ಉದ್ಭವಿಸಿದೆ.  ಶಿವಸೇನೆ ಬೆಂಬಲವಿಲ್ಲದೆ ಬಿಜೆಪಿ ಸರ್ಕಾರ ರಚನೆ ಮಾಡಲು ಸಾಧ್ಯವಿಲ್ಲ. ಸರ್ಕಾರ ರಚನೆಗೆ ಬಾಗಿಲು ತೆರೆದಿದೆ ಎಂದು ಬಿಜೆಪಿ ಶಿವಸೇನೆಗೆ ಅವಕಾಶ ತೆರೆದಿಟ್ಟಿದೆ.

ಶಿವಸೇನೆ ಈಗಲೂ ನಮ್ಮೊಂದಿಗೆ ಸರ್ಕಾರ ರಚಿಸಲು ಮುಂದಾಗಬಹುದು ಎಂದು ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಪಾಟೀಲ್ ಮುಕ್ತ ಆಹ್ವಾನ ನೀಡಿದ್ದಾರೆ. ಇದಕ್ಕೆ ಶಿವಸೇನೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನ ವಹಿಸಿದೆ.

ಇನ್ನೊಂದೆಡೆ ಶಿವಸೇನೆ ಸರ್ಕಾರ ರಚನೆಗೆ ಕಾಂಗ್ರೆಸ್ ಮತ್ತು ಎನ್.ಸಿ.ಪಿ ಬೆಂಬಲ ನೀಡಬೇಕು ಎಂದು  ಮನವಿ ಮಾಡಿದ್ದಾರೆ. ಶಿವಸೇನೆಯು ಸರ್ಕಾರ ರಚನೆಯಲ್ಲಿ ಪಾಲ್ಗೊಳ್ಳಲು ಎನ್.ಸಿ.ಪಿ ಮತ್ತು ಕಾಂಗ್ರೆಸ್ ಗೆ 48 ಗಂಟೆಗಳ ಗಡುವನ್ನು ನೀಡಿದೆ.

ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಶಿವಸೇನೆಗೆ ಬೆಂಬಲ ನೀಡಲಿವೆ ಎಂದು ಮೂಲಗಳು ತಿಳಿಸಿವೆ. ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿರುವ ಮಧ್ಯೆಯೇ ಬಿಜೆಪಿ ಹಾಗೂ ಎನ್.ಸಿ.ಪಿ ಮತ್ತು ಕಾಂಗ್ರೆಸ್ ನಾಯಕರು ರಾಜಭವನಕ್ಕೆ ಭೇಟಿ ನೀಡಿದ್ದಾರೆ.

ಶತಾಯಗತಾಯ ಮುಖ್ಯಮಂತ್ರಿ ಹುದ್ದೆಯನ್ನು ಪಡೆಯಲೇ ಬೇಕು ಎಂಬ ಹಟಕ್ಕೆ ಬಿದ್ದಿರುವ ಶಿವಸೇನೆ ಬಿಜೆಪಿ ಜೊತೆಗಿನ ಮೈತ್ರಿಯನ್ನು ಸಂಪೂರ್ಣ ಕಡಿದುಕೊಂಡಿದೆ. ಬಿಜೆಪಿ ಸರ್ಕಾರ ರಚಿಸಿದರೆ ತಾನು ಅದರಲ್ಲಿ ಭಾಗಿಯಾಗುವುದಿಲ್ಲ ಎಂದು ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...