Homeಕರ್ನಾಟಕಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ; ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ

- Advertisement -
- Advertisement -

ಮಹಾತ್ಮ ಗಾಂಧಿ 76ನೇ ಹುತಾತ್ಮ ದಿನಾಚರಣೆ ಪ್ರಯುಕ್ತ ರಾಜ್ಯದಾದ್ಯಂತ ಸೌಹಾರ್ದತೆಗಾಗಿ ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ.

ಹಲವು ಪ್ರಗತಿಪರ ಮತ್ತು ಜನಪರ ಸಂಘಟನೆಗಳ ಸಹಯೋಗದೊಂದಿಗೆ ‘ಸೌಹಾರ್ದ ಕರ್ನಾಟಕ ವೇದಿಕೆ’ಯು ಕರ್ನಾಟಕದಾದ್ಯಂತ ಬೃಹತ್‌ ಮಾನವ ಸರಪಳಿ ಕಾರ್ಯಕ್ರಮವನ್ನು ನಡೆಸಿದೆ. ಸೌಹಾರ್ದ ಬಯಸುವ ಶಾಂತಿಪ್ರಿಯ ಮನಸ್ಸುಗಳು ಕೈ ಕೈ ಬೆಸೆಯುವ ಮುಖಾಂತರ ಸರ್ವಜನಾಂಗದ ಶಾಂತಿಯ ತೋಟವನ್ನು ಕಟ್ಟಲು ಪಣತೊಟ್ಟಿವೆ.

ದೇಶದಲ್ಲಿ ಸೌಹಾರ್ದತೆ ಬಯಸಿ ಬೆಂಗಳೂರು, ಬೀದರ್‌, ಕಲಬುರ್ಗಿ, ಕೊಪ್ಪಳ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ವಿಜಯಪುರ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ್‌, ಹಾವೇರಿ, ಧಾರವಾಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಂತರ, ರಾಮನಗರ, ಶಿವಮೊಗ್ಗ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕ ಕೇಂದ್ರಗಳಲ್ಲಿ ಸಾವಿರಾರು ಸಂಖ್ಯೆಯ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಪ್ರಗತಿಪರ ಸಾಹಿತಿಗಳು, ಚಿಂತಕರು, ಮುಸ್ಲಿಂ ಒಕ್ಕೂಟ, ದಲಿತ ಸಂಘರ್ಷ ಸಮಿತಿ, ಕ್ಯಾಥೋಲಿಕ್ ಸಭಾ, ಸಿಐಟಿಯು,ಜನವಾದಿ ಮಹಿಳಾ ಸಂಘಟನೆ, ಡಿವೈಎಫ್ಐ, ಎಸ್‌ಎಫ್‌ಐ, ಸಮುದಾಯ, ಕರ್ನಾಟಕ ಮುಸ್ಲಿಂ ಜಮಾತೆ, ಆದಿವಾಸಿ ಹಕ್ಕುಗಳ ಸಮಿತಿ, ದಲಿತ ಹಕ್ಕುಗಳ ಸಮಿತಿ ಸೇರಿದಂತೆ ವಿವಿಧ ಜನಪರ ಸಂಘಟನೆಗಳು ಶಾಂತಿ ಸೌಹಾರ್ದತೆಗಾಗಿ ರಾಜ್ಯದಾದ್ಯಂತ ನಡೆದ ಮಾನವ ಸರಪಳಿಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ; ದ್ವೇಷ, ಹಿಂಸೆಯ ಸಿದ್ಧಾಂತ ನಮ್ಮ ಪ್ರೀತಿಯ ಬಾಪುವನ್ನು ಕಿತ್ತುಕೊಂಡಿತು: ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...