Homeಮುಖಪುಟಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು...

ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ಯಾತ್ರೆ’ಯ ಪ್ರಚಾರಕ್ಕಾಗಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಗಾಂಧಿ ಕೊಲೆ ಆರೋಪಿ ವಿ.ಡಿ. ಸಾವರ್ಕರ್‌ ಚಿತ್ರವನ್ನು ಬಳಸಲಾಗಿರುವ ಘಟನೆ ಕೇರಳದ ನೆಡುಂಬಸ್ಸೆರಿ ಬಳಿಯ ಅಥಣಿಯಲ್ಲಿ ನಡೆದಿದೆ.

ಚಿತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಇದರ ನಂತರ ಎಚ್ಚೆತ್ತ ಪಕ್ಷದ ಕಾರ್ಯಕರ್ತರು ಆ ಚಿತ್ರಕ್ಕೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿ ಅದನ್ನು ಮರೆಮಾಚಿದ್ದಾರೆ. ಈ ನಡುವೆ ಪಕ್ಷವೂ ಸ್ಥಳೀಯ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯನ್ನು ಘಟನೆಗೆ ಹೊಣೆಯನ್ನಾಗಿಸಿ ಅಮಾನತು ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾರತ್‌ ಜೋಡೊ ಯಾತ್ರೆಯನ್ನು ಸ್ವಾಗತಿಸಲು ಪಕ್ಷವು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳಿರುವ ಬ್ಯಾನರನ್ನು ಅಥಣಿಯಲ್ಲಿ ಹಾಕಿತ್ತು. ಈ ಬ್ಯಾನರ್‌ನಲ್ಲಿ ರವೀಂದ್ರ ನಾಥ್ ಠಾಗೋರ್, ಅಬ್ದುಲ್ ಕಲಾಂ ಆಜಾದ್, ಜಿ.ಬಿ. ಪಂತ್ ಸೇರಿದಂತೆ ಹಲವು ಸ್ವಾತಂತ್ಯ್ರ ಹೋರಾಟಗಾರರ ನಡುವೆ ಗಾಂಧಿ ಕೊಲೆ ಆರೋಪಿಯ ಚಿತ್ರವು ಸೇರಿಕೊಂಡಿತ್ತು. ಬ್ಯಾನರ್ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಸ್ಥಳೀಯ ಸಮಿತಿ ಕಾರ್ಯದರ್ಶಿ ಸುರೇಶ್ ಅವರನ್ನು ಅಮಾನತು ಮಾಡಿದೆ.

ವಿಷಯವು ವಿವಾದವಾಗುತ್ತಿದ್ದಂತೆ ಕಾರ್ಯಕರ್ತರು ಸಾವರ್ಕರ್‌ ಚಿತ್ರದ ಮೇಲೆ ಮಹಾತ್ಮ ಗಾಂಧಿಯ ಚಿತ್ರವನ್ನು ಅಂಟಿಸಿದ್ದಾರೆ. ಈ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ ಪ್ರವೇಶಿಸುವ ಗಂಟೆಗಳ ಮೊದಲು ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಭಿಯಾನದ ಸಮನ್ವಯದಲ್ಲಿ ಗಂಭೀರ ಲೋಪ ಎಸಗಿರುವ ಸ್ಥಳೀಯ ಸಮಿತಿ ಕಾರ್ಯದರ್ಶಿ ವಿರುದ್ಧ ಜಿಲ್ಲಾ ನಾಯಕತ್ವ ಕ್ರಮ ಕೈಗೊಂಡಿದೆ.

“ಪಕ್ಷದ ಸ್ಥಳೀಯ ಕಾರ್ಯಕರ್ತರೊಬ್ಬರು ಈ ಫ್ಲೆಕ್ಸ್‌ ಕಟ್ಟಿದ್ದಾರೆ. ಅವರು ಸ್ವಾತಂತ್ಯ್ರ ಹೋರಾಟಗಾರರ ಚಿತ್ರಗಳನ್ನು ಮುದ್ರಿಸಿ ಕೊಡುವಂತೆ ಫ್ಲೆಕ್ಸ್‌‌ ಮುದ್ರಣ ಮಾರಾಟಗಾರರನ್ನು ಕೇಳಿದ್ದರು. ಅದನ್ನು ಮುದ್ರಿಸುವಾಗ ಈ ಚಿತ್ರವೂ ಪ್ರಮಾದದಿಂದಾಗಿ ಮುದ್ರಣಗೊಂಡಿದೆ. ಸಮಸ್ಯೆ ಗಮನಕ್ಕೆ ಬಂದ ಕೂಡಲೇ ತೆಗೆಸಲು ಸೂಚನೆ ನೀಡಲಾಗಿದೆ” ಎಂದು ಕಾಂಗ್ರೆಸ್‌ ಮುಖಂಡರು ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳ ವರದಿ ಮಾಡಿವೆ.

ಇದನ್ನೂ ಓದಿ: ಭಾರತ್ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆಯೇ?: ಪಾದಯಾತ್ರೆಗಳ ಇತಿಹಾಸ ಏನು ಹೇಳುತ್ತದೆ?

ಈ ಮಧ್ಯೆ ಭಾರತ್ ಜೋಡೋ ಯಾತ್ರೆ ಇಂದು ಎರ್ನಾಕುಲಂ ಜಿಲ್ಲೆಯಲ್ಲಿ ತನ್ನ ಪ್ರವಾಸವನ್ನು ಪ್ರಾರಂಭಿಸಿತು. ನಿನ್ನೆ ಸಂಜೆ ಜಿಲ್ಲೆಯ ಗಡಿಭಾಗವಾದ ಆರೂರ್‌ನಲ್ಲಿ ಪ್ರಯಾಣ ಮುಗಿಸಿ ಬೆಳಗ್ಗೆ ಕುಂಬಳಂ ಟೋಲ್ ಜಂಕ್ಷನ್‌ನಿಂದ ಹೊರಟಿತ್ತು. ಇಂದಿನ ಯಾತ್ರೆಯು ಸುಮಾರು 18 ಕಿ.ಮೀ ಕ್ರಮಿಸಿ ಎಡಪಲ್ಲಿಯ ಸೇಂಟ್ ಜಾರ್ಜ್ ಚರ್ಚ್ ನಲ್ಲಿ ಕೊನೆಗೊಳ್ಳಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...