Homeಮುಖಪುಟಮಹಾತ್ಮ ಗಾಂಧಿ ವಿರುದ್ಧ ಸಂಭಾಜಿ ಭಿಡೆ ವಿವಾದಾತ್ಮಕ ಹೇಳಿಕೆ: ಪ್ರಕರಣ ದಾಖಲು

ಮಹಾತ್ಮ ಗಾಂಧಿ ವಿರುದ್ಧ ಸಂಭಾಜಿ ಭಿಡೆ ವಿವಾದಾತ್ಮಕ ಹೇಳಿಕೆ: ಪ್ರಕರಣ ದಾಖಲು

- Advertisement -
- Advertisement -

ಮಹಾತ್ಮ ಗಾಂಧಿಯವರ ಕುಟುಂಬದ ಬಗ್ಗೆ ಕೆಲವು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಕಾರ್ಯಕರ್ತ ಸಂಭಾಜಿ ಭಿಡೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಭಾಜಿ ಭಿಡೆ ಹೇಳಿಕೆಯನ್ನು ವಿಧಾನಸಭೆಯಲ್ಲಿ ಖಂಡಿಸಿದ ಒಂದ ದಿನದ ನಂತರ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 153ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಉಲ್ಲೇಖಿಸಿದ್ದಾರೆ.

ಗುರುವಾರ ಅಮರಾವತಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಭಾಜಿ ಭಿಡೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಆ ಬಳಿಕ ಕಾಂಗ್ರೆಸ್, ಸಂಭಾಜಿ ಭಿಡೆ ರಾಷ್ಟ್ರಪಿತನ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಂದಕಿಶೋರ್ ಕುಯಟೆ ಸಂಭಾಜಿ ಭಿಡೆ ವಿರುದ್ಧ ದೂರು ದಾಖಲಿಸಿದ್ದಾರೆ.

ಶುಕ್ರವಾರ, ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಬಾಳಾಸಾಹೇಬ್ ಥೋರಟ್ ಅವರು ಭಿಡೆ ಹೇಳಿಕೆಗಳು ನಾಚಿಕೆಗೇಡಿನ ಸಂಗತಿಯಾಗಿದೆ. ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.

”ಸಂಭಾಜಿ ಭಿಡೆಯವರು ನೀಚ ಮನಸ್ಥಿತಿಯನ್ನು ಹೊಂದಿದ್ದಾರೆ. ರಾಷ್ಟ್ರಪಿತನ ಕುರಿತು ಅವರು ನೀಡಿರುವ ಹೇಳಿಕೆಗಳು ದೇಶವನ್ನೇ ತಲ್ಲಣಗೊಳಿಸಿವೆ. ಅವರು ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಮತ್ತು ರಾಜಕೀಯ ಹಿತಾಸಕ್ತಿಗಳಿಗಾಗಿ ಅವರನ್ನು ಬೆಂಬಲಿಸುವವರು ಯಾರು ಎಂಬುದನ್ನು ಕಂಡುಹಿಡಿಯಬೇಕು. ನಾವು ಅವರ ವಿರುದ್ಧ ಕಠಿಣ ಕ್ರಮವನ್ನು ಬಯಸುತ್ತೇವೆ” ಎಂದು ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವರು ಹೇಳಿದರು.

ಮಹಾತ್ಮಾ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಸಂಭಾಜಿ ಭಿಡೆ ಅವರನ್ನು ಬಂಧಿಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಅವರು, ”ಅಂತಹ ವ್ಯಕ್ತಿ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದರೆ, ಅವರಿಗೆ ರಾಜ್ಯದಲ್ಲಿ (ಸ್ವತಂತ್ರವಾಗಿ) ತಿರುಗಾಡುವ ಹಕ್ಕಿಲ್ಲ” ಎಂದು ಗುಡುಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...