Homeರಂಜನೆಕ್ರೀಡೆಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ ಧೋನಿ-ರೈನಾ!

ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ ಧೋನಿ-ರೈನಾ!

ಧೋನಿ ಭಾರತ ಕ್ರಿಕೆಟ್ ತಂಡದ ನಾಯಕರಾಗಿ ತಂಡವನ್ನು ಹಲವಾರು ನಿರ್ಣಾಯಕ ಹಂತದಲ್ಲಿ ಮುನ್ನಡೆಸಿದ್ದರು.

- Advertisement -
- Advertisement -

ಭಾರತ ಕ್ರಿಕೇಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಭಾರತ ಕ್ರಿಕೆಟ್ ತಂಡದ ಮತ್ತೊಬ್ಬ ಆಟಗಾರ ಸುರೇಶ್ ರೈನಾ ಅಂತರಾಷ್ಟ್ರೀಯ ಕ್ರಿಕೆಟ್‍ನಿಂದ ನಿವೃತ್ತಿ ಘೋಷಿಸಿದ್ದಾರೆ.

ಧೋನಿ ನಿವೃತ್ತಿ ಘೋಷಿಸಿದ ಸ್ವಲ್ಪ ಹೊತ್ತಿನಲ್ಲೇ ರೈನಾ ಕೂಡಾ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ಇನ್‍ಸ್ಟ್ರಾಗ್ರಾಮ್ ಖಾತೆಯಲ್ಲಿ, ನನ್ನ ಹೃದಯ ಹೆಮ್ಮೆಯಿಂದ ತುಂಬಿದೆ, ನಿಮ್ಮ ಪ್ರಯಾಣದಲ್ಲಿ ನಾನು ಜೊತೆಯಾಗುತ್ತೇನೆ ಎಂದು ಹೇಳಿದ್ದಾರೆ.

ಧೋನಿ ಭಾರತ ಕ್ರಿಕೆಟ್ ತಂಡದ ಪರವಾಗಿ ಹದಿನೈದು ವರ್ಷಗಳಿಂದ ಆಡುತ್ತಿದ್ದಾರೆ. 2014 ರಲ್ಲಿ ಟೆಸ್ಟ್‌ ಕ್ರಕೆಟ್‍ನಿಂದ ನಿವೃತ್ತಿ ಘೋಷಿಸಿದ್ದ ಧೋನಿ 350 ಏಕದಿನ ಮತ್ತು 98 ಟಿ 20 ಪಂದ್ಯಗಳನ್ನು ಆಡಿದ್ದಾರೆ.

350 ಏಕದಿನ ಪಂದ್ಯಗಳಲ್ಲಿ ಧೋನಿ 50.57 ಸರಾಸರಿಯಲ್ಲಿ 10773 ರನ್ ಗಳಿಸಿದ್ದಾರೆ. ಅವರ ಹೆಸರಿನಲ್ಲಿ 10 ಶತಕಗಳು ಮತ್ತು 73 ಅರ್ಧಶತಕಗಳಿವೆ.

ಧೋನಿ ಎರಡು ಅರ್ಧಶತಕಗಳನ್ನು ಒಳಗೊಂಡಂತೆ 98 ಟಿ20 ಗಳಲ್ಲಿ 37.60 ಸರಾಸರಿಯಲ್ಲಿ 1617 ರನ್ ಗಳಿಸಿದ್ದಾರೆ.

ಧೋನಿ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸೌರವ್ ಗಂಗೂಲಿ, ಕುಮಾರ್ ಸಂಗಕ್ಕಾರ, ಬ್ರಿಯಾನ್ ಲಾರಾ ಮತ್ತು ಸನತ್ ಜಯಸೂರ್ಯ ಮುಂತಾದ ಗಣ್ಯ ಆಟಗಾರರ ಪಟ್ಟಿಯಲ್ಲಿ ಸೇರಿದ ಆಟಗಾರರಾಗಿದ್ದಾರೆ.

ಧೋನಿ ನಾಯಕತ್ವದಲ್ಲಿ, ಭಾರತವು 2011 ರಲ್ಲಿ 50 ಓವರ್‌ಗಳ ವಿಶ್ವಕಪ್ ಮತ್ತು 2007 ರಲ್ಲಿ ವಿಶ್ವ ಟ್ವೆಂಟಿ-20 ಅನ್ನು ಎತ್ತಿ ಹಿಡಿಯಿತು. 2013 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ವಿಜಯಕ್ಕೆ ಧೋನಿ ಭಾರತ ತಂಡವನ್ನು ಮುನ್ನಡೆಸಿದ್ದರು.

 


ಓದಿ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಮೇಲೆ FIR!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಮ ಮಂದಿರ, ಸಿಖ್ಖರ ಉಲ್ಲೇಖ ನೀತಿ ಸಂಹಿತೆ ಉಲ್ಲಂಘನೆಯಾಗದು: ಪ್ರಧಾನಿ ಮೋದಿಗೆ ಕ್ಲೀನ್ ಚಿಟ್...

0
ರಾಮ ಮಂದಿರ ನಿರ್ಮಾಣ, ಸಿಖ್‌ ತೀರ್ಥಯಾತ್ರೆಯ ಹಾದಿಯಾದ ಕರ್ತಾರ್‌ಪುರ್‌ ಸಾಹಿಬ್‌ ಕಾರಿಡಾರ್‌ ಅಭಿವೃದ್ಧಿ, ಸಿಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ ಪ್ರತಿಗಳನ್ನು ಅಫ್ಗಾನಿಸ್ತಾನದಿಂದ ವಾಪಸ್‌ ತರಲು ಸರ್ಕಾರದ ಕ್ರಮ ಕೈಗೊಂಡಿರುವುದನ್ನು ಉಲ್ಲೇಖಿಸಿ...