Homeಕರ್ನಾಟಕಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ - ಮಹೇಶ್ ಚಂದ್ರ ಗುರು

ಮಹಿಷ ದಸರಾ: ಅಂಬಾರಿಯಲ್ಲಿ ಗಾಂಧಿ, ಅಂಬೇಡ್ಕರ್, ನಾಲ್ವಡಿ ಫೋಟೊ ಇರಲಿ – ಮಹೇಶ್ ಚಂದ್ರ ಗುರು

- Advertisement -
- Advertisement -

ಮೈಸೂರು ದಸರಾ ಅಂಬಾರಿಯಲ್ಲಿ ಚಾಮುಂಡಿಯ ಬದಲಾಗಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯ ಭಾವಚಿತ್ರ, ಸಂವಿಧಾನ ರಚನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ, ಸರ್ವರ ಸಮಾನತೆಗೆ ಶ್ರಮಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡಬೇಕು ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ. ಬಿ.ಪಿ. ಮಹೇಶ್ ಚಂದ್ರ ಗುರು ಒತ್ತಾಯಿಸಿದರು.

ಮೈಸೂರಿನ ಅಶೋಕಪುರಂನ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು “ಮೈಸೂರು ದಸರಾ ಆಚರಣೆಗೆ ನಾವು ವಿರೋಧಿಗಳಲ್ಲ. ಪ್ರತಿಷ್ಠೆಗೊಸ್ಕರ ಮಹಿಷ ದಸರಾ ಆಚರಣೆ ಮಾಡುತ್ತಿಲ್ಲ. ಮೌಲ್ಯಗಳಿಗೆ ಶರಣಾಗಿ, ಪ್ರಕೃತಿಗೆ, ಸಂವಿಧಾನಕ್ಕೆ, ಚರಿತ್ರೆಗೆ, ಮೂಲ ನಿವಾಸಿಗಳಿಗೆ ಶರಣಾಗಿ ಮಹಿಷ ದಸರಾವನ್ನು ಆಚರಣೆ ಮಾಡಲಾಗುತ್ತಿದೆ” ಎಂದರು.

ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಮಹಿಷಾ ದಸರಾ ವೈಜ್ಞಾನಿಕ ಮತ್ತು ವಿಜ್ಞಾನದ ದಸರಾ. ಇದು ಮೌಢ್ಯವಲ್ಲ, ಬೌದ್ಧ ದೀಕ್ಷೆ ಸ್ವೀಕರಿಸುವ ಸಮಾವೇಶವಾಗಿದೆ.  ಜಾಗೃತ ಸಮಾಜದಿಂದ ದೇಶವನ್ನು ಆಳುವುದಕ್ಕೆ ಸಾಧ್ಯ. ಸತ್ತ ಸಮಾಜದಿಂದ ಯಾವುದೇ ಪ್ರಯೋಜನವಿಲ್ಲ ಎಂದು ಅಂಬೇಡ್ಕರ್ ಅವರು ಹೇಳಿದ್ದಾರೆ. ಆದ್ದರಿಂದ ನಾವು ಜಾಗೃತರಾಗಬೇಕು ಎಂದರು.

ಪ್ರಸ್ತುತ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿ ಶಿಕ್ಷಣ ಕ್ಷೇತ್ರವನ್ನು ಮತ್ತೆ ಸಾಂಪ್ರದಾಯಿಕ ವ್ಯವಸ್ಥೆಗೆ ತಗೆದುಕೊಂಡು ಹೋಗಲಾಗುತ್ತಿದೆ. ಗುರುಕುಲದ ಶಿಕ್ಷಣ ಪದ್ಧತಿ ಬರಲಿದೆ. ಮಡಕೆ ಮಾಡುವವರು, ಚಪ್ಪಲಿ ಹೊಲೆಯುವವರು, ಜೀತ ಮಾಡುವವರು ಜೀತ ಮಾಡಬೇಕೆಂದು ಎನ್‌ಇಪಿ ಬಯಸುತ್ತದೆ. ಇಂಥ ಶಿಕ್ಷಣ ನಮಗೆ ಬೇಕೆ ಎಂದು ಪ್ರಶ್ನಿಸಿದರು.

ಹಾಡುಹಗಲೇ ರೈತರ ಮೇಲೆ ಕಾರು ಹರಿಸಿ ರೈತರನ್ನು ಕೊಲೆ ಮಾಡಿದ್ದಾರೆ. ಕೊಲೆ ಮಾಡಿದವರನ್ನು ಬಂಧಿಸುವುದನ್ನು ಬಿಟ್ಟು, ಮೃತರ ಕುಟುಂಬ ಸದಸ್ಯರ ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ್ದಾರೆ. ಇಲ್ಲಿ ಸಂವಿಧಾನ ಗಾಳಿಗೆ ತೂರಿದ್ದಾರೆ. ಪ್ರಜಾಪ್ರಭುತ್ವ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತಿಹಾಸ ತಜ್ಞ ಪ್ರೊ. ನಂಜರಾಜೇ ಅರಸ್ ಮಾತನಾಡಿ “ನಮ್ಮದು ಜಾತ್ಯತೀತ ರಾಷ್ಟ್ರ. ಸರ್ಕಾರದ ವತಿಯಿಂದ ಯಾವುದೇ ಧಾರ್ಮಿಕ ಆಚರಣೆಗಳನ್ನು ಮಾಡಬಾರದು ಎಂದು 1974ರಲ್ಲಿ ಸಂವಿಧಾನದ ತಿದ್ದುಪಡಿಯಲ್ಲಿ ಹೇಳಲಾಗಿದೆ. ಆದರೆ ಕರ್ನಾಟಕ ಸರ್ಕಾರ ಸಾರ್ವಜನಿಕರ ತೆರಿಗೆ ಹಣದಿಂದ, 7-8 ಕೋಟಿ ರೂಪಾಯಿ ಖರ್ಚು ಮಾಡಿ ದಸರಾವನ್ನು ಆಚರಣೆ ಮಾಡುತ್ತಿದೆ. ಇದು ಸಂವಿಧಾನದ ವಿರೋಧಿ ಕೆಲಸ ಎಂದರು.

ವಿಚಾರವಾದಿ ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ “ಹಿಂದೂ ಧರ್ಮ ಗುಲಾಮಗಿರಿ ಧರ್ಮ. ಶೇ.4ರಷ್ಟು ಜನರು ಶೇ.96ರಷ್ಟು ಜನರನ್ನು ಆಳುತ್ತಿದ್ದಾರೆ. ಈ ಬಹುಸಂಖ್ಯಾತರು ತಲೆ ಬೆಳೆಸಿಕೊಂಡಿಲ್ಲ. ಶೇ.ನಾಲ್ಕರಷ್ಟಿರುವ ಜನರ ಕೈಗೆ ತಲೆಯನ್ನು ಕೊಟ್ಟುಬಿಟ್ಟಿದ್ದಾರೆ. ಅವರು ಪಂಚಾಂಗಗಳ ಮೂಲಕ ನಿಮ್ಮನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳುತ್ತಿದ್ದಾರೆ. ಆದ್ದರಿಂದ ಬಹುಸಂಖ್ಯಾತರು ಸ್ವಂತ ಬುದ್ಧಿಶಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೊಳ್ಳೇಗಾಲದ ಜೇತವನದ ಮನೋರಕ್ಖಿತ ಭಂತೇಜಿ, ನಾಗಬಸವ ಸ್ವಾಮೀಜಿ, ಡಾ.ಕೃಷ್ಣಮೂರ್ತಿ ಚಮರಂ, ಬೆಟ್ಟಯ್ಯ ಕೋಟೆ, ಚಿಕ್ಕಂದಾನಿ, ಸಿದ್ಧಸ್ವಾಮಿ, ಪಾಲಿಕೆ ಸದಸ್ಯರಾದ ಪಲ್ಲವಿ ಬೇಗಂ, ಜಪರಪ್ಪ, ಮಲೆಯೂರು ಸೋಮಣ್ಣ, ಎನ್.ಸಿದ್ದರಾಜು, ಚೋರನಹಳ್ಳಿ ಶಿವಣ್ಣ, ಬಿ.ಡಿ.ಶಿವಬುದ್ಧಿ, ಶಂಭುಲಿಂಗಸ್ವಾಮಿ, ಮರಂಕಯ್ಯ, ರಾಜಶೇಖರ ಕೋಟೆ, ಚುಂಚನಹಳ್ಳಿ ಮಲ್ಲೇಶ್, ನಗರ್ಲೆ ಎಂ.ವಿಜಯಕುಮಾರ್, ಕಾರ್ಯ ಬಸವಣ್ಣ, ಯಡದೊರೆ ಮಹಾದೇವಯ್ಯ, ಮಹೇಶ್ ಸೋಸ್ಲೆ, ಮರಿದೇವರು, ಈಶ್ವರ ಚಕ್ಕಡಿ, ಅಲಗೂಡು ಶಿವಕುಮಾರ್, ರೇವಣ್ಣ, ಮುದ್ದುಮಾದಯ್ಯ,ಬೈರಾಪುರ ರಾಮು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...