Homeಕರ್ನಾಟಕಮಹಿಷ ದಸರಾ ಆಚರಣೆ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಮಹಿಷ ದಸರಾ ಆಚರಣೆ ವಿರುದ್ಧ ಕೋರ್ಟ್‌ಗೆ ಅರ್ಜಿ ಸಲ್ಲಿಕೆ

- Advertisement -
- Advertisement -

ಮಹಿಷ ದಸರಾ ಆಚರಣೆ ಸಮಿತಿಯ ಅಧ್ಯಕ್ಷರ ವಿರುದ್ಧ ಸಾಮಾಜಿಕ ಕಾರ್ಯಕರ್ತನೆನ್ನಲಾದ ಸ್ನೇಹಮಯಿ ಕೃಷ್ಣ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಸಮಿತಿ ಅಧ್ಯಕ್ಷರಿಗೆ ಈ ಬಗ್ಗೆ ಕೋರ್ಟ್ ತುರ್ತು ನೊಟೀಸ್ ನೀಡಿ ಅ.11ಕ್ಕೆ ವಿಚಾರಣೆ ಮುಂದೂಡಿದೆ.

ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಪುರಾಣದಲ್ಲಿ ರಾಕ್ಷಸನೆಂದು ಗುರುತಿಸಲ್ಪಟ್ಟ ಮಹಿಷಾಸುರನನ್ನು ವೈಭವೀಕರಿಸಿ ಮಹಿಷಾ ದಸರಾ ಆಚರಿಸಲಾಗುತ್ತಿದೆ. ಈ ಬಗ್ಗೆ ಮಾದ್ಯಮಗಳಲ್ಲಿ ಮಾತನಾಡುವಾಗ ಚಾಮುಂಡೇಶ್ವರಿ ದೇವಿಯ ಬಗ್ಗೆ ಆಧಾರ ಇಲ್ಲದೆ ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಕೋಟ್ಯಾಂತರ ಭಕ್ತರ ಭಾವನೆಗಳಿಗೆ ಧಕ್ಕೆ ಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇನ್ನು ಮಹಿಷಾ ದಸರಾದ ಬಗ್ಗೆಅವಹೇಳನಾಕಾರಿಯಾಗಿ ಹೇಳಿಕೆ ನೀಡುತ್ತಿರುವ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿಯ ಮೈಸೂರು ಜಿಲ್ಲಾ ಸಮಿತಿ ಆಗ್ರಹಿಸಿದೆ.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕಾರದ ಬೆಟ್ಟಯ್ಯ ಕೋಟೆ, ಆಲಗೂಡ್‌ ಶಿವಕುಮಾರ್‌ ಹಾಗೂ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗ ಸ್ವಾಮಿ ಅವರು ಈ ಕುರಿತು ಜಂಟಿ ಪತ್ರಿಕಾ ಹೇಳಿಕೆಯನ್ನು ನೀಡಿದ್ದು, ಮಹಿಷ ದಸರಾ ಬಗ್ಗೆ ಅವಹೇಳನ ಮಾಡುವ ಪ್ರತಾಪ್‌ ಸಿಂಹ ಅವರಿಗೆ ಇತಿಹಾಸ ಮತ್ತು ಸಂವಿಧಾನದ ಪಾಠ ಮಾಡಬೇಕಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಅನೇಕ ಹಳ್ಳಿಗಳಲ್ಲಿ ರಾವಣನ ದೇವಸ್ಥಾನಗಳಿವೆ. ಮಾತ್ರವಲ್ಲದೆ ಹಿರಣ್ಯ ಕಶ್ಯಪುವಿನ ದೇವಸ್ಥಾನಗಳಿವೆ. ಅಲ್ಲಲ್ಲಿ ಪೂಜೆ ನಡೆಯುತ್ತಿದೆ. ಹಬ್ಬಗಳನ್ನು ಆಚರಿಸಲಾಗುತ್ತಿದೆ. ಇಂತಹ ಬಹುತ್ವದ ದೇಶ ನಮ್ಮದು. ಮೈಸೂರು ಮೂಲತಃ ಮಹಿಷನ ನಾಡು. ಓಣಂ, ಬಲಿ ಚಕ್ರವರ್ತಿ ಹಬ್ಬದಂತೆ ದಸರಾ ವೇಳೆ ಪಿತೃಪಕ್ಷ ಆಚರಣೆಯಾಗಿ ಮಹಿಷನ ದಿನಾಚರಣೆಯನ್ನು ಮೂಲನಿವಾಸಿಗಳು ಆಚರಿಸುತ್ತಾರೆ. ಸಂಸದ ಪ್ರತಾಪ್‌ ಸಿಂಹ ಈ ನೆಲದ ಮೂಲ ನಿವಾಸಿಗಳ ಭಾವನೆಗಳನ್ನು ಘಾಸಿಗೊಳಿಸಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.

ವಿಧತೆಯಲ್ಲಿ ಏಕತೆ ಹೇಳುವ ಸಂವಿಧಾನದಲ್ಲಿ ಎಲ್ಲಾ ಆಚರಣೆಗೆ ಅವಕಾಶ ಇರುವಾಗ ಮಹಿಷ ದಸರಾ ಬೇಡ ಎನ್ನುವುದಕ್ಕೆ ಪ್ರತಾಪ್‌ ಸಿಂಹಗೆ ಯೋಗ್ಯತೆ ಏನಿದೆ ಎಂದು ದಸಂಸ ಪ್ರಶ್ನಿಸಿದೆ.

ಇನ್ನು ಮೈಸೂರಿನಲ್ಲಿ ಮಹಿಷ ದಸರಾಗೆ ಸರ್ಕಾರ ಅನುಮತಿ ಕೊಟ್ಟಾಗಿನಿಂದ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ಅ.13 ರಂದು ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮ ನಡೆಸುವುದಾಗಿ ಹೇಳಿಕೊಂಡಿದ್ದಾರೆ.

ಇದನ್ನು ಓದಿ: ಬಿಗ್‌ ಬಾಸ್‌ ಮನೆಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ: ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...