Homeಕರ್ನಾಟಕಮಹಿಷ ದಸರಾ: ಸಂಘರ್ಷ, ಹೊಡೆದಾಟಕ್ಕೆ ಕರೆ ಕೊಟ್ಟ ಪ್ರತಾಪ್ ಸಿಂಹ್‌ನನ್ನು ಬಂಧಿಸಿ- ಎಂ.ಲಕ್ಷ್ಮಣ್

ಮಹಿಷ ದಸರಾ: ಸಂಘರ್ಷ, ಹೊಡೆದಾಟಕ್ಕೆ ಕರೆ ಕೊಟ್ಟ ಪ್ರತಾಪ್ ಸಿಂಹ್‌ನನ್ನು ಬಂಧಿಸಿ- ಎಂ.ಲಕ್ಷ್ಮಣ್

- Advertisement -
- Advertisement -

”ಮಹಿಷ ದಸರಾ ವಿಷಯವಾಗಿ ಸಂಘರ್ಷ, ಹೊಡೆದಾಟಕ್ಕೆ ಸಿದ್ಧ ಎಂದು ಹೇಳಿಕೆ ನೀಡಿರುವ ಸಂಸದ ಪ್ರತಾಪ್ ಸಿಂಹ್ ಅವರನ್ನು ಬಂಧಿಸಬೇಕು” ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ.

ಮೈಸೂರಿನ ಕಾಂಗ್ರೆಸ್‌‍ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಜನರ ದಿಕ್ಕು ತಪ್ಪಿಸುತ್ತಿರುವ ಸಂಸದ ಪ್ರತಾಪಸಿಂಹ ದಲಿತ ವಿರೋಧಿಯಾಗಿದ್ದಾರೆ. ಈತ ಸಂಘರ್ಷ, ಹೊಡೆದಾಟಕ್ಕೆ ಸಿದ್ಧ ಎಂದು ಹೇಳಿದ್ದಾರೆ. ಆದರೂ ಪೊಲೀಸರು ಈತನನ್ನು ಏಕೆ ಬಂಧಿಸಿಲ್ಲ? ಪೊಲೀಸರು ಬಿಜೆಪಿ ಮನಸ್ಥಿತಿ ಬಿಟ್ಟು ಕೂಡಲೇ ಬಂಧಿಸಬೇಕು” ಎಂದು ಹೇಳಿದ್ದಾರೆ.

”ದಸರಾಗೆ ಅಡ್ಡಪಡಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಚಲೋ ಮಾಡುತ್ತಿದ್ದಾರೆ. ಮಹಿಷ ಪೂಜೆ ಮಾಡಬೇಡ ಎನ್ನಲು ಪ್ರತಾಪಸಿಂಹ ಯಾರು?” ಎಂದು ಪ್ರಶ್ನೆ ಮಾಡಿದ್ದಾರೆ.

”ಯಾರು ಯಾರಬೇಕಾದವರನ್ನ ಪೂಜಿಸಲು ಸಂವಿಧಾನ ಅವಕಾಶ ಕೊಟ್ಟಿದೆ. ಮಹಿಷಾಸುರ ಸರಿ ಇಲ್ಲದಿದ್ದರೆ ನಿಮ್ಮದೇ ಸರ್ಕಾರ ಇದ್ದಾಗ, ಪ್ರತಿಮೆ ತೆಗೆಸಬೇಕಿತ್ತು. ಮಹಿಷಾಸುರ ಭಯೋತ್ಪಾದಕನೇ?” ಎಂದು ಪ್ರಶ್ನಿಸಿದ್ದಾರೆ.

”ಚಾಮುಂಡಿ ಚಲೋದಲ್ಲಿ ಭಾಗವಹಿಸಲು ವಿವಿಧ ರಾಜ್ಯಗಳಿಂದ 400 ಆರ್‌ಎಸ್‌ಎಸ್ ಕಾರ್ಯಕರ್ತರು ಮೈಸೂರಿಗೆ ಬಂದಿದ್ದಾರೆ. ಕಲ್ಲು ಹೊಡೆಸುವುದು, ಹೆಣ ಉರುಳಿಸಿ ಕೆಟ್ಟ ಹೆಸರು ತರಲು ಮುಂದಾಗಿದ್ದಾರೆ. ಏನಾದರೂ ಸಮಸ್ಯೆಯಾದರೆ ಜಿಲ್ಲಾಡಳಿತ, ಪೊಲೀಸರು ಹೊಣೆ‌” ಎಂದು ಎಚ್ಚರಿಸಿದರು.

”ಚಾಮುಂಡಿ ಬೆಟ್ಟ ಚಲೋದಲ್ಲಿ ಬಿಜೆಪಿ ಮುಖಂಡರು ಭಾಗವಹಿಸದಂತೆ ಮನವಿ ಮಾಡಿದ ಲಕ್ಷ್ಮಣ್‌ ಅವರು, ಪೋಷಕರು ತಮ್ಮ ಮಕ್ಕಳನ್ನು ಚಲೋಗೆ ಕಳಹಿಸಬೇಡಿ ಎಂದು ಕೇಳಿದರು. ಸಂಘರ್ಷಕ್ಕೆ ಕರೆ ಕೊಟ್ಟಿರುವ ಪ್ರತಾಪಸಿಂಹ ದಲಿತ ವಿರೋಧಿ” ಎಂದು ಲಕ್ಷ್ಮಣ್ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪ್ರಶ್ನೆಗೆ, ಸತ್ಯಕ್ಕೆ ಹೆದರಿದ ಭ್ರಷ್ಟ: ಮೋದಿ ವಿರುದ್ಧ ನಟ ಕಿಶೋರ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...