Homeಮುಖಪುಟಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

- Advertisement -
- Advertisement -

‘ಪ್ರಶ್ನೆಗಾಗಿ ನಗದು’ ಪ್ರಕರಣಕ್ಕೆ ಸಂಬಂಧಪಟ್ಟಂತೆ ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡಲಾಗಿದೆ.

ಮಹುವಾ ಮೊಯಿತ್ರಾ ಮೇಲಿನ ಆರೋಪಕ್ಕೆ ಸಂಬಂಧಪಟ್ಟಂತೆ ಲೋಕಸಭೆಯ ನೈತಿಕ ಸಮಿತಿಯ ವರದಿಯನ್ನು ಸಮಿತಿಯ ಮುಖ್ಯಸ್ಥ, ಬಿಜೆಪಿ ಸಂಸದ ವಿಜಯ್ ಸೋನ್ಕರ್‌ ಇಂದು ಮಧ್ಯಾಹ್ನ 12 ಗಂಟೆಗೆ ಲೋಕಸಭೆಯಲ್ಲಿ ಮಂಡಿಸಿದರು.

ಹಣ ಪಡೆದು ತಮ್ಮ ಸಂಸದೀಯ ಪೋರ್ಟಲ್ ಬಳಸಿ ಉದ್ಯಮಿ ದರ್ಶನ್ ಹಿರಾನಂದಾನಿಗೆ ಪ್ರಶ್ನೆಗಳನ್ನು ಕೇಳಲು ಮಹುವಾ ಮೊಯಿತ್ರಾ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಲು ಶಿಫಾರಸು ಮಾಡಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಗದ್ದಲ ಉಂಟಾಯಿತು. ಹಾಗಾಗಿ ಸ್ಪೀಕರ್ ಕಲಾಪವನ್ನು ಅಪರಾಹ್ನ 2 ಗಂಟೆಗೆ ಮುಂದೂಡಿಕೆ ಮಾಡಿದರು.

2 ಗಂಟೆಗೆ ಕಲಾಪ ಪುನರಾರಂಭವಾದ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು ನೈತಿಕ ಸಮಿತಿಯ ವರದಿಯನ್ನು ಚರ್ಚಿಸಲು ಪ್ರಸ್ತಾವನೆಯನ್ನು ಮಂಡಿಸಿದರು. ಬಳಿಕ ನೈತಿಕ ಸಮಿತಿಯ ವರದಿಯನ್ನು ಸಂಸತ್‌ನಲ್ಲಿ ಅಂಗೀಕರಿಸಲಾಯಿತು.

ಸದನದ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಮಹುವಾ ಮೊಯಿತ್ರಾ ಅವರ ನಡವಳಿಕೆಯು ಸಂಸದರಾಗಿ ಅನೈತಿಕ ಮತ್ತು ಸರಿಯಾದುದಲ್ಲ ಎಂಬ ಸಮಿತಿಯ ತೀರ್ಮಾನಗಳನ್ನು ಈ ಸದನವು ಒಪ್ಪಿಕೊಂಡಿದೆ. ಹಾಗಾಗಿ, ಅವರು ಸಂಸದೆಯಾಗಿ ಮುಂದುವರಿಯುವುದು ಸೂಕ್ತವಲ್ಲ ಎಂದು ಹೇಳಿದರು. ಸಂಸತ್‌ ಕಲಾಪವನ್ನು ನವೆಂಬರ್‌ 11ವರೆಗೆ ಮುಂದೂಡಿಕೆ ಮಾಡಿದರು.

ಸಂಸತ್‌ನಿಂದ ಹೊರ ನಡೆದ ಪ್ರತಿಪಕ್ಷ ಸದಸ್ಯರು:

ಮಹುವಾ ಮೊಯಿತ್ರಾ ಅವರನ್ನು ಸಂಸತ್‌ನಿಂದ ಉಚ್ಚಾಟನೆ ಮಾಡುವ ನಿರ್ಧಾರವನ್ನು ಸ್ಪೀಕರ್ ಪ್ರಕಟಿಸುತ್ತಿದ್ದಂತೆ ಕಾಂಗ್ರೆಸ್‌, ಟಿಎಸಿಂ ಸೇರಿದಂತೆ ಪ್ರತಿಪಕ್ಷಗಳ ಸದಸ್ಯರು ಸಂಸತ್‌ನಿಂದ ಹೊರ ನಡೆದರು. ಬಳಿಕ ಸಂಸತ್‌ ಭವನದ ಹೊರಗಿನ ಗಾಂಧಿ ಪ್ರತಿಮೆ ಬಳಿ ನಿಂತು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ನಿಯಮ ಉಲ್ಲಂಘಿಸಿ ಉಚ್ಚಾಟನೆ : ಮಹುವಾ ಆಕ್ರೋಶ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್‌ನಿಂದ ಉಚ್ಚಾಟನೆ ಮಾಡುವ ಘೋಷಣೆ ಮಾಡುತ್ತಿದ್ದಂತೆ ಪ್ರತಿಪಕ್ಷ ನಾಯಕರೊಂದಿಗೆ ಸಂಸತ್‌ನಿಂದ ಹೊರ ನಡೆದ ಮಹುವಾ ಮೊಯಿತ್ರಾ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ನನ್ನನ್ನು ಉಚ್ಚಾಟನೆ ಮಾಡಲಾಗಿದೆ. ಸಂಪೂರ್ಣವಾಗಿ ನಿಯಮ ಉಲ್ಲಂಘಿಸಲಾಗಿದೆ” ಎಂದರು.

ಮಹುವಾಗೆ ಮಾತನಾಡಲು ಅವಕಾಶ ನಿರಾಕರಣೆ :

ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡುತ್ತಿದ್ದಂತೆ ಮಾತನಾಡಲು ಅವಕಾಶ ನೀಡುವಂತೆ ಮಹುವಾ ಮೊಯಿತ್ರಾ ಸ್ಪೀಕರ್‌ಗೆ ಮನವಿ ಮಾಡಿದರು. ಯಾವುದೇ ಆರೋಪದ ವಿರುದ್ಧ ತಮ್ಮನ್ನು ತಾವು ಸಮರ್ಥಿಸಿಕೊಳ್ಳುವುದು ಆರೋಪಿಯ ಮೂಲಭೂತ ಹಕ್ಕು ಎಂದರು. ಟಿಎಂಸಿ ಸಂಸದರಾದ ಸುದೀಪ್ ಬಂಡೋಪಾಧ್ಯಾಯ ಸೇರಿದಂತೆ ಹಲವರು ಮಹುವಾ ಬೆಂಬಲಕ್ಕೆ ನಿಂತು, ಮಾತನಾಡಲು ಅವಕಾಶ ನೀಡುವಂತೆ ಸ್ಪೀಕರ್‌ಗೆ ಮನವಿ ಮಾಡಿದರು.

ಆದರೆ, ಮಹುವಾಗೆ ಮಾತನಾಡಲು ಅವಕಾಶ ನಿರಾಕರಿಸಿದ ಸ್ಪೀಕರ್, ಅದಕ್ಕೆ ಕಾರಣಗಳನ್ನು ಕೊಟ್ಟರು. ಈ ಹಿಂದಿನ ಸ್ಪೀಕರ್‌ಗಳು ಇಂತಹ ಪ್ರಕರಣಗಳಲ್ಲಿ ಅನುಸರಿಸಿದ ಸಾಂಪ್ರದಾಯಿಕ ನಿಯಮವನ್ನು ನಾನೂ ಅನುಸರಿಸುತ್ತೇನೆ. ಈ ಹಿಂದೆ ಮಾಜಿ ಸ್ಪೀಕರ್‌ಗಳಾದ ಸೋಮನಾಥ್ ಚಟರ್ಜಿ ಮತ್ತು ಪ್ರಣಬ್ ಮುಖರ್ಜಿ ಇಂತಹ ಪ್ರಕರಣಗಳಲ್ಲಿ ಆರೋಪಿಗಳಿಗೆ ಮಾತನಾಡಲು ಅವಕಾಶ ನೀಡಿಲ್ಲ ಎಂದರು.

ಸರ್ಕಾರದ ಪರವಾಗಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, 2005 ರ ‘ಪ್ರಶ್ನೆಗಾಗಿ ನಗದು’ ಪ್ರಕರಣದಲ್ಲಿ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿಯವರ ನಡೆಯನ್ನುಉಲ್ಲೇಖಸಿದರು. ಬಿಜೆಪಿ ಆರು ಮತ್ತು ಕಾಂಗ್ರೆಸ್‌ನ ಒಬ್ಬರು ಸಂಸದರ ಮೇಲೆ ಮಹುವಾ ರೀತಿಯ ಆರೋಪ ಕೇಳಿ ಬಂದಾಗ ಅವರು ನೈತಿಕ ಸಮಿತಿಯ ಮುಂದೆ ಹೇಳಿಕೆ ದಾಖಲಿಸಿದ್ದರು. ಬಳಿಕ ಆರೋಪಿತ ಸಂಸದರಿಗೆ ಸಂಸತ್‌ನಲ್ಲಿ ಮಾತನಾಡಲು ಅವಕಾಶ ನೀಡಿರಲಿಲ್ಲ ಎಂದರು.

ಮಹುವಾ ಮೇಲಿನ ಆರೋಪವೇನು?

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪ ಸಂಸದೆ ಮಹುವಾ ಮೊಯಿತ್ರಾ ಮೇಲಿದೆ. ಈ ಸಂಬಂಧ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಶ್ನೆಗಾಗಿ ನಗದು ಪ್ರಕರಣ: ಮಹುವಾ ಮೊಯಿತ್ರಾ ಕುರಿತ ನೈತಿಕ ಸಮಿತಿ ವರದಿ ಲೋಕಸಭೆಯಲ್ಲಿ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...