Homeಮುಖಪುಟಮಹುವಾ ಮೊಯಿತ್ರಾ ರಾಜಕೀಯದ ಬಲಿಪಶು: ಅಭಿಷೇಕ್ ಬ್ಯಾನರ್ಜಿ

ಮಹುವಾ ಮೊಯಿತ್ರಾ ರಾಜಕೀಯದ ಬಲಿಪಶು: ಅಭಿಷೇಕ್ ಬ್ಯಾನರ್ಜಿ

- Advertisement -
- Advertisement -

ಕೃಷ್ಣನಗರ ಸಂಸದೆ ಮಹುವಾ ಮೊಯಿತ್ರಾ ಅವರು ರಾಜಕೀಯದ ಬಲಿಪಶು ಎಂದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆ ಕೇಳಲು ಪ್ರಮುಖ ಉದ್ಯಮಿಯೊಬ್ಬರಿಂದ ಹಣ ಪಡೆದ ಆರೋಪಕ್ಕೆ ಗುರಿಯಾಗಿರುವ ಮೊಯಿತ್ರಾ ಅವರ ಬೆಂಬಲಕ್ಕೆ ಅಭಿಷೇಕ್ ಬ್ಯಾನರ್ಜಿ ನಿಂತಿದ್ದಾರೆ.

”ಅವರು ತಮ್ಮದೇಯಾದ ಹೋರಾಟಗಳನ್ನು ಎದುರಿಸಲು ಸಾಕಷ್ಟು ಸಮರ್ಥರಿದ್ದಾರೆ. ಬಿಜೆಪಿಯು ಮೊಯಿತ್ರಾರನ್ನು ಗುರಿಯಾಗಿಸಿಕೊಂಡಿದೆ” ಎಂದು ಆರೋಪಿಸಿದರು.

”ಇದು ಕೇಂದ್ರ ಸರ್ಕಾರದ ಕ್ರಮ ಎಂದು ನಾನು ಭಾವಿಸುತ್ತೇನೆ. ನೈತಿಕ ಸಮಿತಿಯ ವರದಿಯನ್ನು ನಾನು ಓದಿದ್ದೇನೆ, ಅವರು ಮೊಯಿತ್ರಾ ವಿರುದ್ಧ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಮಹುವಾ ವಿರುದ್ಧ ನಿಮ್ಮ ಬಳಿ ಏನೂ ಇಲ್ಲದಿದ್ದರೆ  ಇದು ತನಿಖೆಯ ವಿಷಯವಾಗಿದೆ, ಉಚ್ಚಾಟನೆಯನ್ನು ಏಕೆ ಶಿಫಾರಸು ಮಾಡಲಾಗಿದೆ? ಮಹುವಾ ತನ್ನ ಯುದ್ಧಗಳನ್ನು ತಾನಾಗಿಯೇ ಹೋರಾಡಲು ಸಾಕಷ್ಟು ಸಮರ್ಥಳು ಎಂದು ನಾನು ಭಾವಿಸುತ್ತೇನೆ. ಅವರನ್ನು ನಾಲ್ಕು ವರ್ಷಗಳಿಂದ ಬಲಿಪಶು ಮಾಡುತ್ತಿದ್ದಾರೆ, ಇದು ಅವರ ಚಾಳಿ” ಎಂದು  ವಾಗ್ದಾಳಿ ನಡೆಸಿದ್ದಾರೆ.

ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದಿರುವ ಆರೋಪ ಮೊಯಿತ್ರಾ ಮೇಲಿದೆ.

ಮೊಯಿತ್ರಾ ವಿರುದ್ಧ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ನೀಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ, ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ತೃಣಮೂಲ ಸಂಸದರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಕೇಂದ್ರ ತನಿಖಾ ದಳದಿಂದ ತನಿಖೆಗೆ ಆದೇಶಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಲೋಕಸಭೆಯಿಂದ ಮಹುವಾ ಮೊಯಿತ್ರಾ ಉಚ್ಚಾಟನೆ ಸಾಧ್ಯತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...