HomeUncategorizedಲೋಕಸಭೆಯಿಂದ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಲೋಕಸಭೆಯಿಂದ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

- Advertisement -
- Advertisement -

‘ಪ್ರಶ್ನೆಗಾಗಿ ನಗದು’ ಪ್ರಕರಣದಲ್ಲಿ ತನ್ನನ್ನು ಲೋಕಸಭೆಯಿಂದ ಉಚ್ಚಾಟನೆ ಮಾಡಿರುವುದನ್ನು ಪ್ರಶ್ನಿಸಿ ತೃಣಮೂಲಕ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂದು ವರದಿಗಳು ಹೇಳಿವೆ.

“ಲೋಕಸಭೆಯ ನೈತಿಕ ಸಮಿತಿಗೆ ತನ್ನನ್ನು ಉಚ್ಚಾಟನೆ ಮಾಡುವ ಅಧಿಕಾರ ಇಲ್ಲ. ನಾನು ದರ್ಶನ್ ಹಿರಾನಂದನಿಯಿಂದ ಹಣ ಸ್ವೀಕರಿಸಿದ್ದೇನೆ ಎಂಬುವುದು ರುಜುವಾತಾಗಿಲ್ಲ. ಕೇವಲ ನಿಶಿಕಾಂತ್ ದುಬೆ ಮತ್ತು ಜೈ ಅನಂತ್ ದೇಹದ್ರಾಯ್ ಅವರ ಆರೋಪದ ಹಿನ್ನೆಲೆ ತನ್ನ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಹಿರಾನಂದನಿ ಮತ್ತು ದೇಹದ್ರಾಯ್‌ಯನ್ನು ಕ್ರಾಸ್ ಪ್ರಶ್ನೆ ಮಾಡಲು ನನಗೆ ಅವಕಾಶ ನೀಡಿಲ್ಲ” ಎಂದು ಮಹುವಾ ಹೇಳಿದ್ದಾರೆ.

ಕೈಗಾರಿಕೋದ್ಯಮಿ ದರ್ಶನ್ ಹಿರಾನಂದನಿ ಅವರಿಂದ ನಗದು ಮತ್ತು ದುಬಾರಿ ಉಡುಗೊರೆಗಳನ್ನು ಪಡೆದುಕೊಂಡು ತನ್ನ ಸಂಸತ್ತಿನ ಲಾಗಿನ್‌ ಐಡಿ ನೀಡಿದ್ದಾರೆ ಮತ್ತು ಪ್ರಧಾನಿ ಮೋದಿ, ಅದಾನಿ ಸಮೂಹದ ವಿರುದ್ಧ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದಾರೆ ಎಂಬ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಕಳೆದ ಶುಕ್ರವಾರ ಲೋಕಸಭೆಯಿಂದ ಉಚ್ಚಾಟನೆ ಮಾಡಲಾಗಿತ್ತು.

ಲೋಕಸಭೆಯ ನೈತಿಕ ಸಮಿತಿಯ ಶಿಫಾರಸ್ಸಿನ ಮೇರೆಗೆ ಸ್ಪೀಕರ್ ಓಂ ಬಿರ್ಲಾ ಈ ಕ್ರಮ ಕೈಗೊಂಡಿದ್ದರು. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಲೋಕಸಭೆಗೆ ಮಹುವಾ ವಿರುದ್ದ ದೂರು ನೀಡಿದ್ದರು.

ಉಚ್ಚಾಟನೆ ಬೆನ್ನಲ್ಲೇ ಸಂಸತ್ತಿನ ಹೊರಗೆ ಕೇಂದ್ರದ ಬಿಜೆಪಿ ಸರ್ಕಾದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮಹುವಾ ಮೊಯತ್ರಾ, “ಅಸ್ತಿತ್ವದಲ್ಲೇ ಇಲ್ಲದ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ನಾನು ತಪ್ಪಿತಸ್ಥೆ ಎಂದು ನೈತಿಕ ಸಮಿತಿ ಸದಸ್ಯರು ಹೇಳಿದ್ದಾರೆ. ಸಮಿತಿಯು ಸಂಸತ್ತಿನ ಪ್ರತಿಯೊಂದು ನಿಯಮಗಳನ್ನೂ ಮುರಿದಿದ್ದಾರೆ. ನಾನು ಸಂಸತ್ತಿನ ಒಳಗೆ, ಹೊರಗೆ ಮುಂದಿನ 30 ವರ್ಷ ಬಿಜೆಪಿ ವಿರುದ್ಧ ಹೋರಾಡುತ್ತೇನೆ” ಎಂದು ಸವಾಲ್ ಹಾಕಿದ್ದರು.

ಇದನ್ನೂ ಓದಿ : ಪ್ರಶ್ನೆಗಾಗಿ ನಗದು ಪ್ರಕರಣ: ಲೋಕಸಭೆಯಿಂದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...