Homeಮುಖಪುಟಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

ಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧದ ಪ್ರಶ್ನೆಗಾಗಿ ನಗುದು ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಮೌನ ಮುರಿದಿದ್ದು, ಮೋಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಮೊಯಿತ್ರಾ ಅವರ ಉಚ್ಚಾಟನೆ ನಡೆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಪ್ರತಿಪಕ್ಷದ ನಾಯಕರ ವಿರುದ್ದ ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗದ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿರುವ ಕೇಂದ್ರೀಯ ಸಂಸ್ಥೆಗಳು 2024ರ ಚುನಾವಣೆಯ ನಂತರ ಬಿಜೆಪಿಯನ್ನು ಹಿಂಬಾಲಿಸುತ್ತವೆ. ಕೇಂದ್ರದಲ್ಲಿ ಈ ಸರ್ಕಾರ ಇನ್ನು 3 ತಿಂಗಳು ಮಾತ್ರ ಇರುತ್ತದೆ ಎಂದು ಹೇಳಿದ್ದಾರೆ.

ಈ ಮೊದಲು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಪಡೆದಿದ್ದಾರೆ ಎಂಬ ಮೊಯಿತ್ರಾ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಲು ನಿರಾಕರಿಸಿದ್ದರು.

ನ.9ರಂದು ಮಮತಾ ಬ್ಯಾನರ್ಜಿ ಅವರು ಶ್ರೀಮತಿ ಮೊಯಿತ್ರಾ ಅವರನ್ನು ರಾಜಕೀಯದ ಬಲಿಪಶು ಎಂದು ಕರೆದಿದ್ದರು. ಎಥಿಕ್ಸ್ ಕಮಿಟಿ ವರದಿಯನ್ನು ನಾನು ಓದಿದ್ದೇನೆ. ಆಕೆಯ ವಿರುದ್ಧ ತನಿಖೆ ನಡೆಯಬೇಕು ಎಂದು ಅವರು ಹೇಳಿದ್ದಾರೆ. ನೀವು ಮಹುವಾ ಮೊಯಿತ್ರಾ ವಿರುದ್ಧ ಏನೂ ಇಲ್ಲದಿದ್ದರೂ ಉಚ್ಚಾಟನೆಯನ್ನು ಏಕೆ ಶಿಫಾರಸು ಮಾಡಲಾಗಿದೆ? ಮಹುವಾ ಮೊಯಿತ್ರಾ ತನ್ನ ಹೋರಾಟವನ್ನು ತಾನಾಗಿಯೇ ಹೋರಾಡುವಷ್ಟು ಸಮರ್ಥಳು ಎಂದು ನಾನು ಭಾವಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಈ ಮೊದಲು ಲೋಕಸಭೆಯ ನೈತಿಕತೆ ಸಮಿತಿ ಮುಂದೆ ಹಾಜರಾಗಿದ್ದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ತಮಗೆ ಕೆಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ಸಭೆಯಿಂದ ಹೊರ ನಡೆದಿದ್ದರು.

ಮಹುವಾ ಮೊಯಿತ್ರಾ ಅವರಲ್ಲದೆ ಸಮಿತಿಯ ವಿಪಕ್ಷ ಸದಸ್ಯರೂ ಹೊರ ನಡೆದಿದ್ದಾರೆ. ಕೊಳಕು ಪ್ರಶ್ನೆಗಳನ್ನು ಕೇಳಿದ್ದರಿಂದ ತಾವು ಸಹಕರಿಸಿಲ್ಲ, ಇನ್ನಷ್ಟು ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಹೊರನಡೆದಿದ್ದಾಗಿ ಅವರು ಹೇಳಿಕೊಂಡಿದ್ದರು.

ಇದನ್ನು ಓದಿ: ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತಿಮಾ ಬೀವಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...