Homeಮುಖಪುಟಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

ಮಹುವಾ ವಿರುದ್ಧದ ಪ್ರಶ್ನೆಗಾಗಿ ನಗದು ಆರೋಪ: ಮೌನ ಮುರಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ಅವರ ವಿರುದ್ಧದ ಪ್ರಶ್ನೆಗಾಗಿ ನಗುದು ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಮೌನ ಮುರಿದಿದ್ದು, ಮೋಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಮೊಯಿತ್ರಾ ಅವರ ಉಚ್ಚಾಟನೆ ನಡೆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ. ಪ್ರತಿಪಕ್ಷದ ನಾಯಕರ ವಿರುದ್ದ ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗದ ಬಗ್ಗೆ ಆಡಳಿತಾರೂಢ ಬಿಜೆಪಿ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿರುವ ಕೇಂದ್ರೀಯ ಸಂಸ್ಥೆಗಳು 2024ರ ಚುನಾವಣೆಯ ನಂತರ ಬಿಜೆಪಿಯನ್ನು ಹಿಂಬಾಲಿಸುತ್ತವೆ. ಕೇಂದ್ರದಲ್ಲಿ ಈ ಸರ್ಕಾರ ಇನ್ನು 3 ತಿಂಗಳು ಮಾತ್ರ ಇರುತ್ತದೆ ಎಂದು ಹೇಳಿದ್ದಾರೆ.

ಈ ಮೊದಲು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಲಂಚ ಪಡೆದಿದ್ದಾರೆ ಎಂಬ ಮೊಯಿತ್ರಾ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಲು ನಿರಾಕರಿಸಿದ್ದರು.

ನ.9ರಂದು ಮಮತಾ ಬ್ಯಾನರ್ಜಿ ಅವರು ಶ್ರೀಮತಿ ಮೊಯಿತ್ರಾ ಅವರನ್ನು ರಾಜಕೀಯದ ಬಲಿಪಶು ಎಂದು ಕರೆದಿದ್ದರು. ಎಥಿಕ್ಸ್ ಕಮಿಟಿ ವರದಿಯನ್ನು ನಾನು ಓದಿದ್ದೇನೆ. ಆಕೆಯ ವಿರುದ್ಧ ತನಿಖೆ ನಡೆಯಬೇಕು ಎಂದು ಅವರು ಹೇಳಿದ್ದಾರೆ. ನೀವು ಮಹುವಾ ಮೊಯಿತ್ರಾ ವಿರುದ್ಧ ಏನೂ ಇಲ್ಲದಿದ್ದರೂ ಉಚ್ಚಾಟನೆಯನ್ನು ಏಕೆ ಶಿಫಾರಸು ಮಾಡಲಾಗಿದೆ? ಮಹುವಾ ಮೊಯಿತ್ರಾ ತನ್ನ ಹೋರಾಟವನ್ನು ತಾನಾಗಿಯೇ ಹೋರಾಡುವಷ್ಟು ಸಮರ್ಥಳು ಎಂದು ನಾನು ಭಾವಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಶ್ನೆಗಾಗಿ ನಗದು ಪ್ರಕರಣದಲ್ಲಿ ಈ ಮೊದಲು ಲೋಕಸಭೆಯ ನೈತಿಕತೆ ಸಮಿತಿ ಮುಂದೆ ಹಾಜರಾಗಿದ್ದ ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ತಮಗೆ ಕೆಟ್ಟ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಆರೋಪಿಸಿ ಸಭೆಯಿಂದ ಹೊರ ನಡೆದಿದ್ದರು.

ಮಹುವಾ ಮೊಯಿತ್ರಾ ಅವರಲ್ಲದೆ ಸಮಿತಿಯ ವಿಪಕ್ಷ ಸದಸ್ಯರೂ ಹೊರ ನಡೆದಿದ್ದಾರೆ. ಕೊಳಕು ಪ್ರಶ್ನೆಗಳನ್ನು ಕೇಳಿದ್ದರಿಂದ ತಾವು ಸಹಕರಿಸಿಲ್ಲ, ಇನ್ನಷ್ಟು ಇಂತಹ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಹೊರನಡೆದಿದ್ದಾಗಿ ಅವರು ಹೇಳಿಕೊಂಡಿದ್ದರು.

ಇದನ್ನು ಓದಿ: ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಾಧೀಶೆ ಫಾತಿಮಾ ಬೀವಿ ನಿಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...