Homeಮುಖಪುಟರೇಪ್‌ ಕೇಸ್‌: ಬಂಧಿತ ಬಿಜೆಪಿ ನಾಯಕರ ಮನೆಗಳನ್ನು ಯಾವಾಗ ಕೆಡವುತ್ತೀರಿ-ಯೋಗಿಗೆ ಮಹುವಾ ಪ್ರಶ್ನೆ

ರೇಪ್‌ ಕೇಸ್‌: ಬಂಧಿತ ಬಿಜೆಪಿ ನಾಯಕರ ಮನೆಗಳನ್ನು ಯಾವಾಗ ಕೆಡವುತ್ತೀರಿ-ಯೋಗಿಗೆ ಮಹುವಾ ಪ್ರಶ್ನೆ

- Advertisement -
- Advertisement -

ತೃಣಮೂಲ ಕಾಂಗ್ರೆಸ್‌ ನಾಯಕಿ ಮಹುವಾ ಮೊಯಿತ್ರಾ ಅವರು ಬಿಎಚ್‌ಯು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರದಲ್ಲಿ ಸ್ಥಳೀಯ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಪಿಗಳು ಯೋಗಿ ಆದಿತ್ಯನಾಥ್‌ ಜೊತೆಗಿರುವ ಫೋಟೋ ಹಂಚಿಕೊಂಡು ಅವರ ಆಸ್ತಿಗಳನ್ನು ಬುಲ್ಡೋಜರ್ ಚಲಾಯಿಸಿ ನೆಲಸಮಗೊಳಿಸಲು ಎಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಆದಿತ್ಯನಾಥ್ ಅವರು 2017ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಸಂದರ್ಶನವೊಂದರಲ್ಲಿ, ಯಾರಾದರೂ ಅಪರಾಧ ಮಾಡಿದರೆ ಅವರನ್ನು ಗುಂಡಿಕ್ಕಿ ಕೊಲ್ಲಲಾಗುತ್ತದೆ (Agar aparadh karenge, toh thok diye jayenge). ಆ ಬಳಿಕ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಹಲವು ಅಪರಾಧಿಗಳ ಎನ್‌ಕೌಂಟರ್‌ಗಳು ನಡೆದಿದೆ.

ಉತ್ತರ ಪ್ರದೇಶದ ಐಐಟಿ-ಬಿಎಚ್‌ಯು ಕ್ಯಾಂಪಸ್‌ನಲ್ಲಿ ಮಹಿಳಾ ವಿದ್ಯಾರ್ಥಿನಿಯೊಬ್ಬಳು ಸಾಮೂಹಿಕ ಅತ್ಯಾಚಾರಕ್ಕೊಳಗಾದ 2 ತಿಂಗಳ ನಂತರ, ಪೊಲೀಸರು ಭಾನುವಾರ ಮೂವರನ್ನು ಬಂಧಿಸಿದ್ದಾರೆ. ವಿರೋಧ ಪಕ್ಷಗಳು ಆರೋಪಿಗಳು ಬಿಜೆಪಿ ಪದಾಧಿಕಾರಿಗಳು ಎಂದು ಆರೋಪಿಸಿದ್ದು, ಮೂವರು ಆರೋಪಿಗಳು ತಾವು ಬಿಜೆಪಿಯ ಐಟಿ ಸೆಲ್ ಸದಸ್ಯರು ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಿದೆ.

ಕಾಂಗ್ರೆಸ್ ಕೂಡ ಬಿಜೆಪಿಯನ್ನು ಈ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದು,  ಬಿಜೆಪಿ ‘ಬೇಟಿ ಬಚಾವೋ, ಬೇಟಿ ಪಢಾವೋ’ ಘೋಷಣೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದೆ. ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಹಿಳಾ ಕಾಂಗ್ರೆಸ್ ಮುಖ್ಯಸ್ಥೆ ನೆಟ್ಟಾ ಡಿಸೋಜಾ, ಅವರು ಮಹಿಳೆಯರಿಗೆ “ಬಲತ್ಕಾರಿ (ಅತ್ಯಾಚಾರಿ) ಜನತಾ ಪಕ್ಷ” ಆಗಿರುವುದು ಸತ್ಯ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್‌ನ ಡಾಲಿ ಶರ್ಮಾ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಉತ್ತರಪ್ರದೇಶದಲ್ಲಿ ದುರ್ಬೀನು ಹಿಡಿದು ಹುಡುಕಿದರೂ ಕ್ರಿಮಿನಲ್‌ಗಳು ಸಿಗುವುದಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳುತ್ತಿದ್ದರು. ದುರ್ಬೀನುಗಳ ಅಗತ್ಯವಿಲ್ಲ ಏಕೆಂದರೆ ನಿಮ್ಮ ಪಕ್ಕದಲ್ಲಿ ಅಪರಾಧಿಗಳು ಕುಳಿತಿದ್ದಾರೆ. ಉತ್ತರಪ್ರದೇಶದಲ್ಲಿ ಈ ಕ್ರಿಮಿನಲ್‌ಗಳ ಮನೆಗಳಿಗೆ ಬುಲ್ಡೋಜರ್‌ಗಳು ಹೋಗುತ್ತಿರುವುದು ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

ನ.1ರ ರಾತ್ರಿ ಐಐಟಿ ಬಿಎಚ್‌ಯು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಕುನಾಲ್ ಪಾಂಡೆ, ಆನಂದ್ ಅಲಿಯಾಸ್ ಅಭಿಷೇಕ್ ಚೌಹಾಣ್ ಮತ್ತು ಸಕ್ಷಮ್ ಪಟೇಲ್ ಅವರನ್ನು ಉತ್ತರಪ್ರದೇಶದ ಪೊಲೀಸರು ಬಂಧಿಸಿದ್ದರು ಸಂತ್ರಸ್ತೆ ತನ್ನ ಸ್ನೇಹಿತನೊಂದಿಗೆ ತನ್ನ ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸಂತ್ರಸ್ತೆಯನ್ನು ಬಲವಂತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆಗೆ ಲೈಂಗಿಕ ದೌರ್ಜನ್ಯ ನೀಡಿ, ಬೆದರಿಕೆ ಹಾಕಿ ಫೋನ್‌ನ್ನು ಕಸಿದುಕೊಂಡಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 354, ಸಾಮೂಹಿಕ ಅತ್ಯಾಚಾರ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಂಕಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಇದನ್ನು ಓದಿ: ರೈತರಿಗೆ ‘ಜಾತಿ’ ಉಲ್ಲೇಖಿಸಿ ಸಮನ್ಸ್‌ ಪ್ರಕರಣ: ‘ED’ ಅಧಿಕಾರಿಗಳ ವಿರುದ್ದ ಎಸ್ಸಿ-ಎಸ್ಟಿ ಕಾಯ್ದೆಯಡಿ ಕ್ರಮಕ್ಕೆ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ರಾಹುಲ್ ಗಾಂಧಿಯ ವಯನಾಡ್‌ ಕ್ಷೇತ್ರದ ಹಿಂದೂ ಮಂದಿರದಲ್ಲಿ ಚಿಕನ್ ಶಾಪ್...

0
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡ್‌ನ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ದೇವಸ್ಥಾನವೊಂದರಲ್ಲಿ ಕೋಳಿ ಅಂಗಡಿ (ಚಿಕನ್ ಶಾಪ್) ತೆರೆಯಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ವೈರಲ್ ವಿಡಿಯೋದಲ್ಲಿ ದೇವಾಲಯದಂತಹ ಕಟ್ಟಡವೊಂದು...