Homeಮುಖಪುಟಬಾಬಾ ಸಿದ್ದೀಕ್ ಹತ್ಯೆ ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು

ಬಾಬಾ ಸಿದ್ದೀಕ್ ಹತ್ಯೆ ಪ್ರಕರಣ | ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಹಾರಾಷ್ಟ್ರದ ಹಿರಿಯ ರಾಜಕಾರಣಿ, ಎನ್‌ಸಿಪಿ ನಾಯಕ ಬಾಬಾ ಸಿದ್ದೀಕ್ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು, ಘಟನೆ ನಡೆದ ಒಂದು ತಿಂಗಳ ಬಳಿಕ ಭಾನುವಾರ (ನ.10) ಬಂಧಿಸಲಾಗಿದೆ.

ಮುಂಬೈ ಪೊಲೀಸರ ಅಪರಾಧ ವಿಭಾಗ ಮತ್ತು ಉತ್ತರ ಪ್ರದೇಶದ ಎಸ್‌ಟಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ಉತ್ತರ ಪ್ರದೇಶ ಬಹ್ರೈಚ್‌ನಿಂದ ಆರೋಪಿ ಶಿವಕುಮಾರ್ ಗೌತಮ್ ಅಲಿಯಾಸ್ ಶಿವನನ್ನು ಬಂಧಿಸಿದೆ. ಈತ ನೇಪಾಳಕ್ಕೆ ಪರಾರಿಯಾಗಲು ಸಿದ್ದತೆ ನಡೆಸಿದ್ದ ಎನ್ನಲಾಗಿದೆ.

ಪ್ರಕರಣದ ಇನ್ನಿಬ್ಬರು ಶಂಕಿತ ಶೂಟರ್‌ಗಳಾದ ಹರಿಯಾಣದ ಗುರ್‌ಮೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಜೊತೆ ಶಿವ ನೇರ ಸಂಪರ್ಕದಲ್ಲಿದ್ದ. ಸಿದ್ದೀಕ್ ಅವರ ಹತ್ಯೆಯನ್ನು ಲಾರೆನ್ಸ್ ಗ್ಯಾಂಗ್ ಭಯ ಹುಟ್ಟು ಹಾಕಲು ಮತ್ತು ಸುಲಿಗೆ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಯೋಜಿಸಿದೆ ಎಂದು ಮುಂಬೈ ಪೊಲೀಸರು ಹೇಳಿದ್ದಾರೆ.

ಬಹ್ರೈಚ್‌ನ ಹೊರವಲಯದ ಅರಣ್ಯ ಪ್ರದೇಶದ ಕುಗ್ರಾಮವೊಂದರಲ್ಲಿ ಶಿವ ಅಡಗಿಕೊಂಡಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳಲು ಆತ ಮೊಬೈಲ್ ಫೋನ್‌ ಬಳಸುತ್ತಿರಲಿಲ್ಲ. ಆತನಿಗೆ ಸಹಾಯ ಮಾಡಿದ್ದ ಇಬ್ಬರು ವ್ಯಕ್ತಿಗಳನ್ನೂ ಕೂಡ ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿವ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

“ಬಾಬಾ ಸಿದ್ದೀಕ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಿವನನ್ನು ಉತ್ತರ ಪ್ರದೇಶದಿಂದ ಬಂಧಿಸಲಾಗಿದೆ. ನಾಲ್ವರು ಅಧಿಕಾರಿಗಳ ಸಮರ್ಪಿತ ತಂಡ 28 ದಿನಗಳ ಕಾಲ ಆತನಿಗಾಗಿ ಹುಡುಕಾಟ ನಡೆಸಿತ್ತು. ಅಂತಿಮವಾಗಿ ಉತ್ತರ ಪ್ರದೇಶ ಎಸ್‌ಟಿಎಫ್‌ನ ಸಹಾಯದಿಂದ ನಾವು ಆತನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಮುಂಬೈನ ಜಂಟಿ ಪೊಲೀಸ್ ಆಯುಕ್ತ (ಅಪರಾಧ) ಲಕ್ಷ್ಮಿ ಗೌತಮ್ ತಿಳಿಸಿದ್ದಾರೆ.

“ಶಿವ ಜೊತೆ ಬಂಧಿತರಾಗಿರುವ ಇನ್ನಿಬ್ಬರು ಆರೋಪಿಗಳಾದ ಅನುರಾಗ್ ಕಶ್ಯಪ್ ಮತ್ತು ಜ್ಞಾನ್ ಪ್ರಕಾಶ್ ತ್ರಿಪಾಠಿ ಶಿವ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದರು. ಅಲ್ಲದೆ, ಆತನೊಂದಿಗೆ ನೇಪಾಳಕ್ಕೆ ಪರಾರಿಯಾಗಲು ಅವರೂ ಯೋಜಿಸುತ್ತಿದ್ದರು” ಎಂದು ಡಿಸಿಪಿ ದತ್ತ ನಲವಾಡೆ ಹೇಳಿದ್ದಾರೆ.

ಅನುರಾಗ್ ಕಶ್ಯಪ್ ಈ ಹಿಂದೆ ಬಂಧಿತನಾಗಿರುವ ಧರ್ಮರಾಜ್ ಕಶ್ಯಪ್‌ನ ಸಹೋದರ. ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆರೋಪಿಗೆ ತ್ರಿಪಾಠಿ 1.5 ಲಕ್ಷ ರೂ. ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಸಿದ್ದೀಕ್ ಹತ್ಯೆ ಬಳಿಕ ಶಿವ ಥಾಣೆಗೆ ಮತ್ತು ನಂತರ ಪುಣೆಗೆ ಪರಾರಿಯಾಗಿದ್ದ. ಮಾರ್ಗಮಧ್ಯೆ ಆತ ತನ್ನ ಮೊಬೈಲ್ ಫೋನ್ ಅನ್ನು ಬಿಸಾಕಿದ್ದ. ಆದ್ದರಿಂದ, ಪೊಲೀಸರಿಗೆ ಆತನ ಮೊಬೈಲ್ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಉತ್ತರ ಪ್ರದೇಶಕ್ಕೆ ಪರಾರಿಯಾಗುವ ವೇಳೆ ಶಿವ ರೈಲು ಪ್ರಯಾಣಿಕರಿಂದ ಮೊಬೈಲ್ ಪಡೆದುಕೊಂಡು ಅನುರಾಗ್‌ಗೆ ಕರೆ ಮಾಡುತ್ತಿದ್ದ. ಅಲ್ಲದೆ, ತನ್ನ ಸ್ಥಳವನ್ನು ಆಗಾಗ ಬದಲಾಯಿಸುತ್ತಿದ್ದ.

ಬಾಬಾ ಸಿದ್ದೀಕ್ ಅವರನ್ನು, ದಸರಾ ಹಬ್ಬದ ಅಂಗವಾಗಿ ಮಗ ಝೀಶಾನ್ ಸಿದ್ದೀಕ್ ಕಚೇರಿ ಬಳಿ ಪಠಾಕಿ ಸಿಡಿಸುತ್ತಿದ್ದ ವೇಳೆ ಕಳೆದ ಅಕ್ಟೋಬರ್ 12ರಂದು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಇದನ್ನೂ ಓದಿ : ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....