Homeಕರ್ನಾಟಕಚೈತ್ರಾ ಕುಂದಾಪುರ ಗ್ಯಾಂಗ್‌ನ ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿ 10 ದಿನ ಸಿಸಿಬಿ ಕಸ್ಟಡಿಗೆ

ಚೈತ್ರಾ ಕುಂದಾಪುರ ಗ್ಯಾಂಗ್‌ನ ಪ್ರಮುಖ ಆರೋಪಿ ಹಾಲಶ್ರೀ ಸ್ವಾಮೀಜಿ 10 ದಿನ ಸಿಸಿಬಿ ಕಸ್ಟಡಿಗೆ

- Advertisement -
- Advertisement -

ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ MLA ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಗ್ಯಾಂಗ್‌ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ನಿನ್ನೆಯಷ್ಟೇ ಪೊಲೀಸರ ಬಲೆ ಬಿದ್ದಿದ್ದು, ಇಂದು ಅವರನ್ನು 10 ದಿನಗಳ ಕಾಲ (ಸೆ.29) ಸಿಸಿಬಿ ವಶಕ್ಕೆ ಒಪ್ಪಿಸಿ ಬೆಂಗಳೂರಿನ 19ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಈ ವಂಚನೆ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್ ನಲ್ಲಿ ಮಂಗಳವಾರ ಬಂಧಿಸಿದ್ದರು. ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ​ ಸಿಸಿಬಿ ಅಧಿಕಾರಿಗಳು ಕೋರ್ಟ್ ಗೆ ಮನವಿ ಮಾಡಿದ್ದರು.

ಹಾಲಶ್ರೀ ಸ್ವಾಮೀಜಿ ಪರ ವಕೀಲರಾದ ಲೋಕೇಶ್ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದರು. ಮಧ್ಯಂತರ ಜಾಮೀನಿಗೆ ಸರ್ಕಾರಿ ವಕೀಲರು ಆಕ್ಷೇಪ ಸಲ್ಲಿಸಿದರು. ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸರ್ಕಾರಿ ಪರ ವಕೀಲರಿಗೆ ಸೂಚನೆ ನೀಡಿದ ನ್ಯಾಯಾಲಯ ಸೆಪ್ಟೆಂಬರ್ 29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದೆ.

ಬಿಜೆಪಿ ಟಿಕೆಟ್‌ಗಾಗಿ ಡೀಲ್‌ ಪ್ರಕರಣದಲ್ಲಿ 3ನೇ ಆರೋಪಿಯನ್ನ ನಿನ್ನೆ ಒಡಿಶಾದಿಂದ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ಇಂಡಿಗೋ ವಿಮಾನದ ಮೂಲಕ ಸಿಸಿಬಿ ಅಧಿಕಾರಿಗಳು ಹಾಲಶ್ರೀ ಕರೆತಂದು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದರು. ಆನಂತರ ಆಡುಗೋಡಿಯ ಸಿಸಿಬಿ ಟೆಕ್ನಿಕಲ್ ಸೆಲ್‌ನಲ್ಲಿ ವಿಚಾರಣೆಗೊಳಪಡಿಸಲಾಗಿತ್ತು.

ಇನ್ನು ಟೆಕ್ನಿಕಲ್ ಸೆಲ್‌ನಲ್ಲಿ ಸಿಸಿಬಿ ಪೊಲೀಸರು ಮಧ್ಯರಾತ್ರಿಯವರೆಗೂ ಅಭಿನವ ಹಾಲಾಶ್ರೀ ಸ್ವಾಮೀಜಿಯನ್ನು ವಿಚಾರಣೆ ನಡೆಸಲಾಗಿದೆ. ವಿಚಾರಣೆ ವೇಳೆ ತನಿಖಾಧಿಕಾರಿಗಳಿಗೆ ಹಾಲಾಶ್ರೀ ಸ್ಪಂದಿಸುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಚೈತ್ರಾ, ಗಗನ್ ಇಬ್ಬರ ಬಗ್ಗೆಯೂ ಉತ್ತರಿಸಿದ್ದಾರಂತೆ. ಹಣಕಾಸಿನ ವ್ಯವಹಾರದ ಬಗ್ಗೆ ಆರೋಪಿ ಹಾಲಾಶ್ರೀ ಸ್ವಾಮೀಜಿ ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಚೈತ್ರಾ ಕುಂದಾಪುರ ಗ್ಯಾಂಗ್​ನ ಪ್ರಮುಖ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...