Homeಅಂತರಾಷ್ಟ್ರೀಯಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು - ವರದಿ

ಅಮೆರಿಕದ ಪ್ರಮುಖ ನಗರಗಳಲ್ಲಿ ಅಕ್ರಮ ವಲಸಿಗರ ಬೇಟೆಗೆ ಇಳಿದ ಅಧಿಕಾರಿಗಳು – ವರದಿ

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೇಶದಲ್ಲಿ ದಾಖಲೆರಹಿತ ವಿದೇಶಿಯರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಧ್ಯೆ, ಅಮೆರಿಕದ ಗೃಹ ಭದ್ರತಾ ಇಲಾಖೆಯ (DHS) ಅಧಿಕಾರಿಗಳು ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿಯ ಗುರುದ್ವಾರಗಳಲ್ಲಿ ಅಕ್ರಮ ವಲಸೆಗಾರರ ಬೇಟೆಯನ್ನು ಪ್ರಾರಂಭಿಸಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ. ಸರ್ಕಾರದ ಕ್ರಮವು ಹಲವಾರು ಸಿಖ್ ಸಂಘಟನೆಗಳಿಂದ ಟೀಕೆಗೆ ಗುರಿಯಾಗಿದ್ದು, ಇದು ತಮ್ಮ ಧಾರ್ಮಿಕ ಸ್ಥಳಗಳ ಪಾವಿತ್ರ್ಯಕ್ಕೆ ಬೆದರಿಕೆ ಎಂದು ಅವರು ಪರಿಗಣಿಸಿದ್ದಾರೆ. ಅಮೆರಿಕದ ಪ್ರಮುಖ

ಈ ಪ್ರದೇಶಗಳಲ್ಲಿನ ಕೆಲವು ಗುರುದ್ವಾರಗಳನ್ನು ಸಿಖ್ ಪ್ರತ್ಯೇಕತಾವಾದಿಗಳು ಮತ್ತು ದಾಖಲೆರಹಿತ ವಲಸಿಗರು ಒಟ್ಟುಗೂಡಿಸುವ ಸ್ಥಳಗಳಾಗಿ ಬಳಸುವ ಸಾಧ್ಯತೆಗಳಿವೆ ಎಂದು ವರದಿಗಳು ಸೂಚಿಸಿವೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಸ್ವಲ್ಪ ಸಮಯದ ನಂತರ ನೀತಿಯಲ್ಲಿ ಬದಲಾವಣೆ ಬಂದಿತ್ತು. ವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಜಾರಿ ಕುರಿತು ಬಿಡೆನ್ ಆಡಳಿತದ ಮಾರ್ಗಸೂಚಿಗಳನ್ನು ರದ್ದುಗೊಳಿಸುವ ನಿರ್ದೇಶನವನ್ನು ಗೃಹ ಭದ್ರತಾ ಇಲಾಖೆ ಕಾರ್ಯದರ್ಶಿ ಬೆಂಜಮಿನ್ ಹಫ್‌ಮನ್ ಹೊರಡಿಸಿದ್ದಾರೆ. ಅಮೆರಿಕದ ಪ್ರಮುಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹಿಂದಿನ ಮಾರ್ಗಸೂಚಿಗಳು ಗುರುದ್ವಾರಗಳಂತಹ ಪೂಜಾ ಸ್ಥಳಗಳು ಸೇರಿದಂತೆ “ಸೂಕ್ಷ್ಮ” ಪ್ರದೇಶಗಳಲ್ಲಿ ಅಥವಾ ಅದರ ಹತ್ತಿರ ಜಾರಿ ಕ್ರಮಗಳನ್ನು ನಿರ್ಬಂಧಿಸಿದ್ದವು.

“ಈ ಕ್ರಮವುವಲಸೆ ಮತ್ತು ಕಸ್ಟಮ್ಸ್ ಜಾರಿ (ICE) ಮತ್ತು ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (CBP) ಯಲ್ಲಿರುವ ಧೈರ್ಯಶಾಲಿಗಳಿಗೆ ನಮ್ಮ ವಲಸೆ ಕಾನೂನುಗಳನ್ನು ಜಾರಿಗೊಳಿಸಲು ಮತ್ತು ನಮ್ಮ ದೇಶಕ್ಕೆ ಅಕ್ರಮವಾಗಿ ಬಂದಿರುವ ಕೊಲೆ ಮತ್ತು ಅತ್ಯಾಚಾರಿಗಳು ಸೇರಿದಂತೆ ಕ್ರಿಮಿನಲ್ ವಿದೇಶಿಯರನ್ನು ಹಿಡಿಯಲು ಅಧಿಕಾರ ನೀಡುತ್ತದೆ” ಎಂದು ಗೃಹ ಭದ್ರತಾ ಇಲಾಖೆ ವಕ್ತಾರರು ತಮ್ಮ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

“ಅಪರಾಧಿಗಳು ಇನ್ನು ಮುಂದೆ ಬಂಧನವನ್ನು ತಪ್ಪಿಸಲು ಅಮೆರಿಕದ ಶಾಲೆಗಳು ಮತ್ತು ಚರ್ಚ್‌ಗಳಲ್ಲಿ ಅಡಗಿಕೊಳ್ಳಲು ಸಾಧ್ಯವಾಗುವುದಿಲ್ಲ. ಟ್ರಂಪ್ ಆಡಳಿತವು ನಮ್ಮ ಧೈರ್ಯಶಾಲಿ ಕಾನೂನು ಜಾರಿ ಸಂಸ್ಥೆಗಳ ಕೈಗಳನ್ನು ಕಟ್ಟುವುದಿಲ್ಲ, ಬದಲಿಗೆ ಅವರು ಸಾಮಾನ್ಯ ಜ್ಞಾನವನ್ನು ಬಳಸುತ್ತಾರೆ ಎಂದು ನಂಬುತ್ತದೆ” ಎಂದು ವಕ್ತಾರರು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿ (SALDF) ನೀತಿ ಬದಲಾವಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ಹೇಳಿಕೆ ನೀಡಿದೆ. “ನಿರ್ದೇಶನ ಹೊರಡಿಸಿದ ಕೆಲವೇ ದಿನಗಳಲ್ಲಿ ನ್ಯೂಯಾರ್ಕ್ ಮತ್ತು ನ್ಯೂಜೆರ್ಸಿ ಪ್ರದೇಶಗಳಲ್ಲಿನ ಗುರುದ್ವಾರಗಳಿಗೆ ಗೃಹ ಭದ್ರಾತಾ ಏಜೆಂಟರು ಭೇಟಿ ನೀಡುತ್ತಿದ್ದಾರೆ” ಎಂದು ಗುಂಪು ಹೇಳಿದೆ.

“ಸೂಕ್ಷ್ಮ ಪ್ರದೇಶಗಳಿಗೆ ರಕ್ಷಣೆಯನ್ನು ತೆಗೆದುಹಾಕಿ ನಂತರ ಗುರುದ್ವಾರಗಳಂತ ಪೂಜಾ ಸ್ಥಳಗಳನ್ನು ಗುರಿಯಾಗಿಸುವ ಗೃಹ ಭದ್ರತಾ ಇಲಾಖೆಯ ನಿರ್ಧಾರದ ಬಗ್ಗೆ ನಾವು ತೀವ್ರವಾಗಿ ಗಾಬರಿಗೊಂಡಿದ್ದೇವೆ” ಎಂದು ಸಿಖ್ ಅಮೇರಿಕನ್ ಕಾನೂನು ರಕ್ಷಣಾ ಮತ್ತು ಶಿಕ್ಷಣ ನಿಧಿಯ (SALDEF) ಕಾರ್ಯನಿರ್ವಾಹಕ ನಿರ್ದೇಶಕಿ ಕಿರಣ್ ಕೌರ್ ಗಿಲ್ ಹೇಳಿದ್ದಾರೆ.

ಗುರುದ್ವಾರಗಳು ಕೇವಲ ಪೂಜಾ ಸ್ಥಳಗಳು ಮಾತ್ರವಲ್ಲ, ಅವು ಅದಕ್ಕಿಂತ ಹೆಚ್ಚಿನ ಸ್ಥಾನಮಾನ ಇವೆ ಎಂದು ಗಿಲ್ ವಿವರಿಸಿದ್ದಾರೆ. “ಅವು ಸಿಖ್ಖರು ಮತ್ತು ವಿಶಾಲ ಸಮುದಾಯಕ್ಕೆ ಬೆಂಬಲ, ಪೋಷಣೆ ಮತ್ತು ಆಧ್ಯಾತ್ಮಿಕ ಸಾಂತ್ವನವನ್ನು ಒದಗಿಸುವ ಪ್ರಮುಖ ಸಮುದಾಯಿಕ ಕೇಂದ್ರಗಳಾಗಿವೆ. ಜಾರಿ ಕ್ರಮಗಳಿಗಾಗಿ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳುವುದು ನಮ್ಮ ನಂಬಿಕೆಯ ಪಾವಿತ್ರ್ಯಕ್ಕೆ ಧಕ್ಕೆ ತರುತ್ತದೆ ಮತ್ತು ದೇಶಾದ್ಯಂತ ವಲಸೆ ಬಂದ ಸಮುದಾಯಗಳಿಗೆ ಭಯಾನಕ ಸಂದೇಶವನ್ನು ಕಳುಹಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ಸಂವಿಧಾನದ ಮೇಲಿನ ದಾಳಿ | ಯುಜಿಸಿ ಕರಡು ನಿಯಮ ಹಿಂಪಡೆಯಲು ತೆಲಂಗಾಣ ಸಿಎಂ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...