Homeಕರ್ನಾಟಕಬಳಸಿದ ಮಾಸ್ಕ್‌ & ಪಿಪಿಇ ಕಿಟ್ ವಿವೇವಾರಿಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯಕ್ಕೆ ಹೈಕೋರ್ಟ್ ಸೂಚನೆ

ಬಳಸಿದ ಮಾಸ್ಕ್‌ & ಪಿಪಿಇ ಕಿಟ್ ವಿವೇವಾರಿಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯಕ್ಕೆ ಹೈಕೋರ್ಟ್ ಸೂಚನೆ

ಆಮ್ಲಜನಕ ಸಿಲಿಂಡರ್‌ಗಳ ಸಾಗಣೆಗೆ ಬೆಲೆ ನಿಗದಿಪಡಿಸುವಂತೆ ಕೂಡಾ ನಿರ್ದೇಶನ ನೀಡಿದೆ

- Advertisement -
- Advertisement -

ಬಳಸಿದ ಮಾಸ್ಕ್ ಮತ್ತು ಪಿಪಿಇ ಕಿಟ್‌ಗಳನ್ನು ವಿಲೇವಾರಿ ಮಾಡಲು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಜೊತೆಗೆ ಆಮ್ಲಜನಕ ಸಿಲಿಂಡರ್‌ಗಳ ಸಾಗಣೆಗೆ ಬೆಲೆ ನಿಗದಿಪಡಿಸುವಂತೆ ಕೂಡಾ ನಿರ್ದೇಶನ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಮಾಸ್ಕ್‌‌ಗಳು ಮತ್ತು ಪಿಪಿಇ ಕಿಟ್‌ಗಳ ವಿಲೇವಾರಿ ವಿಷಯವು ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ರಿಪಬ್ಲಿಕ್ ಟಿವಿಯಲ್ಲಿ TRP ಹಗರಣದ ಸುದ್ದಿ ಪ್ರಸಾರವನ್ನು ತಡೆಯುವಂತೆ ಕೋರ್ಟ್‌ಗೆ‌‌ ಅರ್ಜಿ

ಸುಮಾರು 1.3 ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರಿನಂತಹ ನಗರದಲ್ಲಿ ಪ್ರತಿದಿನ ಲಕ್ಷಾಂತರ ಜನರು ಮಾಸ್ಕ್‌‌ಗಳನ್ನು ಬಳಸುತ್ತಾರೆ ಎಂದ ನ್ಯಾಯಪೀಠ, ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ಮತ್ತು ವ್ಯಾಪಕ ಪ್ರಚಾರ ಮಾಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿತು. ಬಳಸಿದ ಮಾಸ್ಕ್‌ಗಳು ಮತ್ತು ಪಿಪಿಇ ಕಿಟ್‌ಗಳು ಬಯೋಮೆಡಿಕಲ್ ತ್ಯಾಜ್ಯ ಎಂದ ನ್ಯಾಯಾಲಯ, ಈ ನಿಟ್ಟಿನಲ್ಲಿ ಪೌರಕರ್ಮಿಕರಿಗೆ ಅಗತ್ಯ ತರಬೇತಿ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಿತು.

ಕೊರೊನಾ ಆಸ್ಪತ್ರೆಗಳಿಗೆ ಆಮ್ಲಜನಕ ಸಿಲಿಂಡರ್‌ಗಳನ್ನು ಪೂರೈಸುವ ಸಾರಿಗೆ ಶುಲ್ಕವನ್ನು ತಕ್ಷಣವೇ ತಿಳಿಸುವಂತೆ ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿತು. ಅಕ್ಟೋಬರ್ 24 ರಂದು ಅಥವಾ ಅದಕ್ಕೂ ಮೊದಲು ಆದೇಶಗಳನ್ನು ಪಾಲಿಸುವಂತೆ ರಾಜ್ಯವನ್ನು ಕೋರಲಾಗಿದೆ.

ಸಾಗಣೆಯ ಮೇಲೆ ಬೆಲೆ ನಿಗದಿ ಮಾಡಲು ಸರ್ಕಾರ ವಿಫಲವಾದ ಕಾರಣ ರೋಗಿಗಳು ಆಮ್ಲಜನಕ್ಕೆ ಹೆಚ್ಚಿನ ಹಣವನ್ನು ಪಾವತಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಅರ್ಜಿದಾರರೊಬ್ಬರ ಪರ ಹಾಜರಾದ ವಕೀಲರು, ಸರಬರಾಜುದಾರರು ಸಾಗಣಿಕೆಗಾಗಿ ವಿವಿಧ ದರಗಳನ್ನು ವಿಧಿಸುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾಷಣಕ್ಕೆ ಡಿಸ್‌ಲೈಕ್‌ಗಳ ಸುರಿಮಳೆ: ಮುಜುಗರಕ್ಕೊಳಗಾಗಿ ಸಂಖ್ಯೆ ಮರೆಮಾಚಿದ ಬಿಜೆಪಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...