Homeಚಳವಳಿಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

ಪ್ರತಿಭಟನಾ ಸ್ಥಳದಲ್ಲಿಯೇ ನನ್ನ ಅಂತ್ಯಕ್ರಿಯೆ ಮಾಡಿ: ಡೆತ್‌ನೋಟ್ ಬರೆದಿಟ್ಟು ಪ್ರಾಣಬಿಟ್ಟ ಹೋರಾಟನಿರತ ರೈತ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ದೆಹಲಿಯ ಗಡಿಗಳಲ್ಲೊಂದಾದ ದೆಹಲಿ- ಗಾಜಿಪುರ್ ಗಡಿಯಲ್ಲಿ ಉತ್ತರ ಪ್ರದೇಶದ 75 ವರ್ಷದ ರೈತನ ಮೃತ ದೇಹವೊಂದು ಡೆತ್‌ನೋಟ್‌ನೊಂದಿಗೆ ಪತ್ತೆಯಾಗಿದೆ.

ಉತ್ತರ ಪ್ರದೇಶದ ಕಾಶ್ಮೀರ್ ಸಿಂಗ್ ಲಧಿ ಎಂಬುವವರು ಗಡಿಯಲ್ಲಿನ ಶೌಚಾಲಯವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಮೃತದೇಹದ ಜೊತೆಗೆ ಆತ್ಮಹತ್ಯಾ ಪತ್ರ ಸಹ ದೊರಕಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂತೆಗದುಕೊಳ್ಳದೆ ರೈತರೊಂದಿಗೆ ಕೇವಲ ಮಾತುಕತೆ ನಡೆಸುತ್ತಿದೆ ಎಂದು ಅವರು ಹತಾಶೆಗೊಂಡಿದ್ದರು. ಹಾಗಾಗಿ ಅವರ ಸಾವಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.

“ನಾವು ಎಷ್ಟು ದಿನ ಎಂದು ಈ ಕೊರೆಯುವ ಚಳಿಯಲ್ಲಿ ಪ್ರತಿಭಟನೆ ನಡೆಸಬೇಕು? ಕೇಂದ್ರ ಸರ್ಕಾರವಂತೂ ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ. ಹಾಗಾಗಿ ನಾನು ಪ್ರಾಣ ಬಿಡಲು ನಿರ್ಧರಿಸುತ್ತಿದ್ದೇನೆ. ಇದರಿಂದಾದರೂ ಕೆಲ ಪರಿಹಾರ ಸಿಗಲಿ. ನನ್ನ ಮೊಮ್ಮಕ್ಕಳು ಇದೇ ಪ್ರತಿಭಟನಾ ಸ್ಥಳದಲ್ಲಿ ನನ್ನ ಅಂತ್ಯಕ್ರಿಯೆ ಮಾಡಲಿ” ಎಂದು ಆತ್ಮಹತ್ಯಾ ಪತ್ರದಲ್ಲಿ ಬರೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯ ಬಿಲಾಸ್ಪುರ್ ಪ್ರದೇಶದವರಾದ ಕಾಶ್ಮೀರ್ ಸಿಂಗ್ ಲಧಿಯವರು ಮಕ್ಕಳು ಮತ್ತು ಮೊಮ್ಮಕ್ಕಳು ಸಹ ಗಾಜಿಪುರ್ ಗಡಿಯಲ್ಲಿ ರೈತ ಹೋರಾಟದಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 38ನೇ ದಿನ ಪ್ರವೇಶಿಸಿದೆ. ಕೇಂದ್ರದ ಕಾಯ್ದೆಗಳು ರೈತರನ್ನು ಬೀದಿಗೆ ತಳ್ಳಿ ಕಾರ್ಪೊರೇಟ್ ಲೂಟಿಗೆ ಅನುಕೂಲ ಮಾಡಿಕೊಡಲಿದೆ ಎಂದು ರೈತರು ದೂರಿದ್ದಾರೆ. ಇದುವರೆಗೂ ಪ್ರತಿಭಟನಾ ಸ್ಥಳದಲ್ಲಿ 30ಕ್ಕೂ ಹೆಚ್ಚು ರೈತರು ಪ್ರಾಣ ಬಿಟ್ಟಿದ್ದಾರೆ. ಕೆಲವರು ತೀವ್ರ ಚಳಿಗೆ ಮೃತಪಟ್ಟರೆ ಮತ್ತೆ ಕೆಲವರು ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಇರುವುದರಿಂದ ಹತಾಶೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಷ್ಟೆಲ್ಲ ರೈತರು ಸಾಯುತ್ತಿದ್ದರೂ ಮೋದಿ ಸರ್ಕಾರ ಕಾಯ್ದೆಗಳ ಕುರಿತಾಗಿ ಹಠಮಾರಿ ಧೋರಣೆ ಮುಂದುವರೆಸುತ್ತಿದೆ ಎಂಬ ಟೀಕೆ ವ್ಯಾಪಕವಾಗಿ ಕೇಳಿಬಂದಿದೆ.

ಹೊಸ ವರ್ಷ ಅಂತೆ! ಎಂತ ಹೊಸ ವರ್ಷ?
ಗಾಜಿಪುರಗಡಿಯಲ್ಲಿ ಎರಡು ಗಂಟೆ ಹಿಂದೆಯಷ್ಟೇ ಮತ್ತೊಬ್ಬ ರೈತ ಹೋರಾಟಗಾರ ಆತ್ಮಹತ್ಯೆ ಮಾಡಿಕೊಂಡ.
ಮತ್ತೆ ಕೇಳಬೇಕಾದ ಪ್ರಶ್ನೆ – ಈ ಸರಕಾರದ ಹೃದಯ ಕರಗಲು ಇನ್ನೆಷ್ಟು ರೈತರ ಬಲಿದಾನ ಆಗಬೇಕು? ಎಂದು ಕನ್ನಡದ ಚಿಂತಕರಾದ ಶ್ರೀನಿವಾಸ ಕಾರ್ಕಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ವಿದ್ಯುತ್ ಕಂಪನಿಯಿಂದ ಕಿರುಕುಳ: ಪ್ರಧಾನಿಗೆ ಪತ್ರ ಬರೆದು ಪ್ರಾಣತ್ಯಾಗ ಮಾಡಿದ ರೈತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...