Homeಮುಖಪುಟಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

ಮಳವಳ್ಳಿ: ಪಿ.ಎಂ ನರೇಂದ್ರಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ- ಗೆಲುವಿನ ಸಾಧ್ಯಾಸಾಧ್ಯತೆ ಹೀಗಿದೆ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಿದೆ. ಮಂಡ್ಯ ಲೋಕಸಭಾ ವ್ಯಾಪ್ತಿಯ 4 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು, ಮಳವಳ್ಳಿಯ ಸಂಕ್ಷಿಪ್ತ ಚಿತ್ರಣ ಇಲ್ಲಿದೆ.

ಮಳವಳ್ಳಿ (ಪರಿಶಿಷ್ಟ ಜಾತಿ ಮೀಸಲು)

ಮಳವಳ್ಳಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವ ಪಿ.ಎಂ ನರೇಂದ್ರ ಸ್ವಾಮಿಯವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. 1999 ಮತ್ತು 2004ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಇವರು ಸೋಲು ಕಂಡಿದ್ದರು. 2008ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯ ಸಾಧಿಸಿದ್ದರು. ಆನಂತರ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದರಿಂದ ಪಿ.ಎಂ ನರೇಂದ್ರ ಸ್ವಾಮಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದರು. 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಕಂಡಿದ್ದರು.

2018ರ ಚುನಾವಣೆಯ ಸಮಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುತ್ತಾರೆ ಎಂಬ ಒಕ್ಕಲಿಗರ ಪರವಾಗಿನ ಅಲೆಯಲ್ಲಿ ಜೆಡಿಎಸ್‌ ಪಕ್ಷದ ಡಾ.ಕೆ ಅನ್ನದಾನಿ ಗೆದ್ದು ಬರುತ್ತಾರೆ. ಅವರು 1,03,038 ಮತಗಳನ್ನು ಪಡೆದರೆ ಕಾಂಗ್ರೆಸ್‌ನ ಪಿ.ಎಂ ನರೇಂದ್ರಸ್ವಾಮಿ 76,278 ಮತಗಳನ್ನು ಪಡೆದು 26,760 ಮತಗಳ ಅಂತರದಿಂದ ಸೋಲು ಕಾಣುತ್ತಾರೆ.

ಎರಡು ಬಾರಿ ಶಾಸಕರಾಗಿರುವ, ಒಮ್ಮೆ ಸಚಿವರಾಗಿರುವ ಪಿ.ಎಂ ನರೇಂದ್ರ ಸ್ವಾಮಿ ಈ ಬಾರಿ ಶತಾಯಗತಾಯ ಗೆಲ್ಲಲು ಕಸರತ್ತು ನಡೆಸಿದ್ದಾರೆ. ತಮ್ಮ ಅವಧಿಯಲ್ಲಿ ಮಾಡಿರುವ ರಸ್ತೆಗಳು, ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತ್ತೊಂದು ಅವಕಾಶ ಕೊಡಿ ಎಂದು ಕೇಳುತ್ತಿದ್ದಾರೆ. ಬಹಳಷ್ಟು ಜನರು ನರೇಂದ್ರ ಸ್ವಾಮಿಯವರು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದಾರೆ, ಕ್ಷೇತ್ರಕ್ಕೆ ಅನುದಾನ ತಂದಿದ್ದಾರೆ ಎನ್ನುತ್ತಾರೆ. ಆದರೆ ಅವರು ಜೋರುದನಿಯಲ್ಲಿ ಒರಟಾಗಿ ಮಾತನಾಡುತ್ತಾರೆ ಎಂದು ಆರೋಪಿಸುತ್ತಾರೆ.

ಇನ್ನು ಮಾಜಿ ಶಾಸಕಿ ಮಲ್ಲಾಜಮ್ಮ ಕೂಡ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದರು. ಜೊತೆಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿರುವ ಆದರ್ಶ ಶಿಕ್ಷಣ ಸಂಸ್ಥೆಯ ಡಾ.ಮೂರ್ತಿಯವರು ಕಾಂಗ್ರೆಸ್ ಟಿಕೆಟ್‌ಗಾಗಿ ಕಸರತ್ತು ನಡೆಸುತ್ತಿದ್ದರು. ಆದರೆ ಕೊನೆಗೂ ಎಂ.ಪಿ ನರೇಂದ್ರ ಸ್ವಾಮಿಯವರಿಗೆ ಟಿಕೆಟ್ ಲಭಿಸಿದೆ.

ರಾಜಕೀಯ ಇತಿಹಾಸ

ಮಳವಳ್ಳಿಯಲ್ಲಿ ಕಾಂಗ್ರೆಸ್ 7 ಬಾರಿ, ಜನತಾ ಪಕ್ಷ ಮೂರು ಬಾರಿ, ಜೆಡಿಎಸ್ ಎರಡು ಬಾರಿ, ಜನತಾದಳ, ಜೆಡಿಯು, ಕಿಸಾನ್ ಮಜ್ದೂರ್ ಪಕ್ಷ, ಶೆಡ್ಯೂಲ್ ಕಾಸ್ಟ್ ಫೆಡರೇಷನ್ ಮತ್ತು ಸ್ವತಂತ್ರ ಅಭ್ಯರ್ತಿಗಳು ತಲಾ ಒಂದು ಬಾರಿ ಗೆಲುವು ಸಾಧಿಸಿದ್ದಾರೆ.

ಜೆಡಿಎಸ್‌ನಿಂದ ಡಾ.ಅನ್ನದಾನಿ ಕಣಕ್ಕೆ

ಎರಡು ಬಾರಿ ಶಾಸಕರಾಗಿರುವ ಹಾಲಿ ಶಾಸಕ ಡಾ.ಅನ್ನದಾನಿಯವರಿಗೆ ಜೆಡಿಎಸ್ ಪಕ್ಷವು ಈಗಾಗಲೇ ಟಿಕೆಟ್ ಘೋಷಿಸಿದೆ.

ಬಿಜೆಪಿಯಲ್ಲಿ ಮೂವರು ಆಕಾಂಕ್ಷಿಗಳು

ಮಳವಳ್ಳಿಯಲ್ಲಿ ಇದುವರೆಗೂ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. 2008ರಲ್ಲಿ ಬಿಜೆಪಿ ಅಭ್ಯರ್ಥಿ ಕಲ್ಕುಣಿ ಮಹದೇವಯ್ಯನವರು 29,158 ಮತಗಳನ್ನು ಪಡೆದಿದ್ದೆ ಇದುವರೆಗಿನ ದೊಡ್ಡ ಸಾಧನೆಯಾಗಿದೆ. ಆದರೂ ಪಕ್ಷದ ಟಿಕೆಟ್‌ಗಾಗಿ ಕ್ಷೇತ್ರದಲ್ಲಿ ಮೂವರು ಪೈಪೋಟಿ ನಡೆಸುತ್ತಿದ್ದಾರೆ. ಭೋವಿ ಸಮುದಾಯದ ಜಿ.ಮುನಿರಾಜುರವರು 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ 26,397 ಮತಗಳನ್ನು ಪಡೆದಿದ್ದರು. ಆದರೆ ಕಳೆದ ಚುನಾವಣೆಯ ಸಮಯದಲ್ಲಿ ಮಾಯವಾಗಿದ್ದ ಅವರು ಈಗ ಮತ್ತೆ ಪ್ರತ್ಯಕ್ಷರಾಗಿದ್ದು ತನಗೇ ಬಿಜೆಪಿ ಟಿಕೆಟ್ ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ ಅವರು ಮೂಲ ಮಳವಳ್ಳಿಯವರಲ್ಲ, ಬೆಂಗಳೂರಿನ ಕೆಂಗೇರಿಯವರು ಎಂದು ಕೆಲವರು ಆರೋಪ ಮಾಡುತ್ತಾರೆ.

ಅಂದಾಜು ಜಾತಿವಾರು ಮತಗಳು

ಮಂಡ್ಯ ಜಿಲ್ಲೆಯ ಉಳಿದ ವಿಧಾನಸಭಾ ಕ್ಷೇತ್ರಗಳಿಗಿಂತ ಭಿನ್ನವಾಗಿ ಮಳವಳ್ಳಿಯಲ್ಲಿ ಪರಿಶಿಷ್ಟ ಜಾತಿಯ ಮತಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಕ್ಷೇತ್ರದಲ್ಲಿ ಒಟ್ಟು ಸುಮಾರು 2,50,000 ಮತಗಳಿದ್ದರೆ ಪರಿಶಿಷ್ಟ ಜಾತಿಯ 75,000 ದಷ್ಟು ಮತಗಳಿವೆ. ಒಕ್ಕಲಿಗರ 70,000, ಲಿಂಗಾಯತರ 30,000 ಮತ್ತು 25,000ದಷ್ಟು ಕುರುಬ ಸಮುದಾಯದ ಮತಗಳಿವೆ. ಮುಸ್ಲಿಂ ಸಮುದಾಯದ 15,000 ಮತಗಳಿದ್ದರೆ ಇತರೆ ಸಮುದಾಯದ ಮತಗಳು 35,000 ಎನ್ನಲಾಗಿದೆ.

2023ರ ಸಾಧ್ಯತೆಗಳು

ಮಳವಳ್ಳಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆಯೇ ನೇರಾನೇರ ಹಣಾಹಣಿ ನಡೆಯುವ ಸೂಚನೆಗಳು ಗೋಚರಿಸುತ್ತಿವೆ. ಶಾಸಕ ಅನ್ನದಾನಿಯವರು ಜೆಡಿಎಸ್ ಪಕ್ಷ ಮತ್ತು ಕುಮಾರಸ್ವಾಮಿಯವರ ನಾಮಬಲದ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನ ಪಿ.ಎಂ ನರೇಂದ್ರ ಸ್ವಾಮಿಯವರು ತಾನು ಮಾಡಿದ ಕೆಲಸಗಳು ಮತ್ತು ಕ್ಷೇತ್ರದ ಅಹಿಂದ ಮತಗಳು ತನ್ನ ಕೈ ಹಿಡಿಯುತ್ತವೆ ಎಂದು ನಂಬಿದ್ದಾರೆ.

ಇನ್ನು ಬಿಜೆಪಿ ಪಕ್ಷವು ಜಿ.ಮುನಿರಾಜುರವರಿಗೆ ಟಿಕೆಟ್ ನೀಡಿದ್ದಲ್ಲಿ ಕ್ಷೇತ್ರದ ಒಂದಷ್ಟು ಲಿಂಗಾಯಿತ ಮತಗಳ ಜೊತೆ ಮತ್ತಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಅವರೊಟ್ಟಿಗೆ ಬಿಎಸ್‌ಪಿಯ ಎಂ.ಕೃಷ್ಣಮೂರ್ತಿಯವರು ಸಹ ಒಂದಷ್ಟು ಮತಗಳನ್ನು ಪಡೆಯಲಿದ್ದಾರೆ. ಇವರಿಬ್ಬರೂ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಹಾಲಿ ಶಾಸಕ ಡಾ.ಕೆ ಅನ್ನದಾನಿಯವರ ಮತಗಳನ್ನು ಕಬಳಿಸುತ್ತಾರೊ ಅಥವಾ ಮಾಜಿ ಸಚಿವ ನರೇಂದ್ರ ಸ್ವಾಮಿಯವರ ಮತಬುಟ್ಟಿಗೆ ಕೈ ಹಾಕುತ್ತಾರೊ ಎಂಬುದರ ಮೇಲೆ ಕ್ಷೇತ್ರದ ಫಲಿತಾಂಶ ನಿರ್ಧಾರವಾಗಲಿದೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಮಳವಳ್ಳಿ: ಹಾಲಿ ಶಾಸಕ ಅನ್ನದಾನಿ ಮೇಲಿನ ಆಡಳಿತ ವಿರೋಧಿ ಅಲೆ ನರೇಂದ್ರ ಸ್ವಾಮಿಯವರಿಗೆ ವರವಾಗಲಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...