Homeಕರ್ನಾಟಕಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

ಮಳವಳ್ಳಿಯಲ್ಲಿ ದಲಿತ ಯುವಕನ ಮೇಲೆ ದೌರ್ಜನ್ಯ

- Advertisement -
- Advertisement -

ದಲಿತ ಯುವಕನ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಗೌಡೆಗೆರೆ ಗ್ರಾಮದಲ್ಲಿ ನಡೆದಿದೆ. ಗುಂಪೊಂದು ಅಡ್ಡಗಟ್ಟಿ ಜಾತಿ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡುವುದರ ಜೊತೆಗೆ, ಸಾರ್ವಜನಿಕವಾಗಿ ಬಟ್ಟೆ ಹರಿದು ಹಾಕಿ ಮೆರವಣಿಗೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಕುರಿತು ಸಂತ್ರಸ್ತ ಯುವಕ ಕಿರಣ್‌ ಜಿ.ಗಂಗಾಧರ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ?

ಜ.6ರಂದು  ಸಂಜೆ 7.30ರ ಸುಮಾರಿಗೆ ನಾನು ನನ್ನ ಊರಿನಿಂದ ಹಾಡ್ಲಿ ಸರ್ಕಲ್‌ಗೆ ಸ್ನೇಹಿತನಾದ ಶಿವಕುಮರ್‌ ಬಳಿ ಡ್ರಾಪ್‌ ಕೇಳುತ್ತಿದ್ದಾಗ, ವೈ ಸಿ ಎಸ್‌ ಬಾರ್‌ ಮುಂಭಾಗ ಕಾರಿನಲ್ಲಿ ಅತಿ ವೇಗವಾಗಿ ಢಿಕ್ಕಿ ಹೊಡೆಯುವ ರೀತಿಯಲ್ಲಿ ಬಂದು ಬಸವನಪುರ ಗ್ರಾಮದ ಬಿಪಿ ಗಿರೀಶ, ಗಂಗಾಧರ, ಚನ್ನಿಪುರ ಗ್ರಾಮದ ಸುರೇಶ, ಅಗಸನಪುರ ಗ್ರಾಮದ ಅಪ್ಪಯ್ಯ, ಮತ್ತು ಬಸವನಪುರದ ಪ್ರಸನ್ನ ಇತರರು ಸೇರಿಕೊಂಡು ಗುಂಪುಗೂಡಿಕೊಂಡು ಬಂದು  ಬೈಕಿಗೆ ಅಡ್ಡಲಾಗಿ ನಿಂತು ಬೈಕ್‌ನಲ್ಲಿ ಕುಳಿತಿದ್ದ ನನ್ನನ್ನು ಕುತ್ತಿಗೆ ಹಿಡಿದು ಎಳೆದು ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಿದ್ದಾರೆ. ಬಳಿಕ ದೊಣ್ಣೆ ಮತ್ತು ರಾಡ್‌ನಿಂದ ಹಲ್ಲೆ ಮಾಡಲು ಮುಂದಾದಾಗ ನಾನು ತಪ್ಪಿಸಿಕೊಳ್ಳಲು ಯತ್ನಿಸಿದ್ದೇನೆ. ಈ ವೇಳೆ ನನ್ನನ್ನು ಅಟ್ಟಾಡಿಸಿಕೊಂಡು ಬಂದ ಗುಂಪು ಸಾರ್ವಜನಿಕವಾಗಿ ನನ್ನ ಬಟ್ಟೆ ಹರಿದು ದೊಣ್ಣೆ, ರಾಡ್‌ಗಳಿಂದ ಹಲ್ಲೆ ನಡೆಸಿ, ನನ್ನ ಎದೆ ಮತ್ತು ಹೊಟ್ಟೆಯ ಮೇಲೆ ಒದ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಹೊಲಯ ಜಾತಿಯ ಇವನನ್ನು ಬಿಡಬೇಡಿ ಎಂದು ಎಂದು ಥಳಿಸಿದ್ದಾರೆ. ಇದಲ್ಲದೆ ಕತ್ತಿನಲ್ಲಿದ್ದ 50ಗ್ರಾಂ ಚಿನ್ನದ ಸರವನ್ನು ಕಳ್ಳತನ ಮಾಡಿದ್ದಾರೆ. ಜೇಬಿನಲ್ಲಿದ್ದ 50ಸಾವಿರೂ ರೂವನ್ನು ದರೋಡೆ ಮಾಡಿಕೊಂಡು ಬಟ್ಟೆ ಹರಿದು ಹೀಯಾಳಿಸುತ್ತಾ, ಹಲ್ಲೆ ನಡೆಸುತ್ತಾ ಒಂದು ಕಿ.ಮೀ ಮೆರವಣಿಗೆ ಮಾಡಿದ್ದು, ಬಳಿಕ ಸರ್ಕಲ್‌ನಲ್ಲಿ ಬೆತ್ತಲೆಗೊಳಿಸಿ ಸಾರ್ವಜನಿಕವಾಗಿ  ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಮೈಮೇಲೆ ಮೂತ್ರವಿಸರ್ಜನೆ ಮಾಡಿದ್ದಾರೆ. ಬಳಿಕ ನನ್ನನ್ನು ಅಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಈ ವೇಳೆ ಆರೋಪಿಗಳು ಕೊಲೆ ಮಾಡುವ ಬೆದರಿಕೆಯನ್ನು ಕೂಡ ಹಾಕಿದ್ದಾರೆ. ನಾನು ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದೆ. ನನ್ನನ್ನು ಬಳಿಕ ಹಲಗೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನಾನು ಚಿಕಿತ್ಸೆ ಪಡೆದ ಬಳಿಕ ಊರಿನಲ್ಲಿ ಅವಮಾನದಿಂದ ಮುಖವನ್ನು ತೋರಿಸಲು ಸಾಧ್ಯವಾಗದೆ ಪತ್ನಿ ಮನೆ ಕನಕಪುರಕ್ಕೆ ತೆರಳಿರುತ್ತೇನೆ. ಬಳಿಕ ಕನಕಪುರ ಆಸ್ಪತ್ರೆಯಲ್ಲಿ 4 ದಿನ ಒಳರೋಗಿಯಾಗಿ ಚಿಕಿತ್ಸೆಯನ್ನು ಪಡೆದಿದ್ದೇನೆ. ತದ ನಂತರ ಆರೋಪಿಗಳು ರಾಜಿ ಪಂಚಾಯತಿಗೆ ಕರೆದು ದೂರು ನೀಡಬಾರದು ಎಂದು ಬೆದರಿಸಿದ್ದಾರೆ. ನಾನು ಈ ಅವಮಾನ ತಾಳಲಾರದೆ ಇದೀಗ ತಡವಾಗಿ ದೂರು ದಾಖಲಿಸುತ್ತೇನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಪ್ರೊ.ಹರಿರಾಮ್, ಮಳವಳ್ಳಿಯಲ್ಲಿ ನಡೆದಿರುವುದು ಜಾತಿ ಭಯೋತ್ಪಾದನೆ, ಹಲ್ಲೆ ಜೊತೆ ನಿಂದನೆ ಕೂಡ ಅಲ್ಲಿ ನಡೆದಿದೆ. ನಮ್ಮ ತಂಡ ನಾಳೆ ಮಳವಳ್ಳಿಗೆ ತೆರಳಲಿದೆ. ಪೊಲೀಸ್‌ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಜೊತೆ ಮಾತುಕತೆ ನಡೆಸುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಸರಕಾರ ಬಂದಾಗ ಕೆಲವರಿಗೆ ಒಂದು ರೀತಿ ಅಹಂ ಬಂದಿದೆ. ಕಾಂಗ್ರೆಸ್‌ ಬಂದ ಮೇಲೆ ದಲಿತರ ಮೇಲೆ ಹೆಚ್ಚು ದೌರ್ಜನ್ಯಗಳು ನಡೆಯುತ್ತಿದೆ. ಇವರು ಬಿಜೆಪಿಗಿಂತ ಭಿನ್ನವಾಗಿಲ್ಲ. ಎಲ್ಲೂ ದಲಿತ ದೌರ್ಜನ್ಯ ನಡೆದಾಗ ಗಂಭೀರವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಎಫ್ಐಆರ್‌ ಆಗಬೇಕಾದರೂ ನಮ್ಮಂತಹ ಹೋರಾಟಗಾರರು ಒತ್ತಡ, ಬಲವಂತ, ಪ್ರತಿಭಟನೆ ಮಾಡಿದ ಮೇಲೆ ಮಾತ್ರ ಪ್ರಕರಣ ದಾಖಲಿಸಲಾಗುತ್ತಿದೆ. ದಲಿತರಿಗೆ ಸಂಬಂಧಿಸಿದ ಯೋಜನೆಗಳಿಗೆ ಕೂಡ ದುಡ್ಡು ನೀಡುತ್ತಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನವರು ಬಿಜೆಪಿಯನ್ನು ತೊರಿಸಿ ಸುಳ್ಳು ಹೇಳಿ ಮುಸ್ಲಿಮರು ಮತ್ತು ದಲಿತರ ವೋಟ್‌ ತೆಗೆದುಕೊಂಡರು. ಆದರೆ ಅಧಿಕಾರಕ್ಕೆ ಬಂದ ಮೇಲೆ ಕಲ್ಲಡ್ಕ ಭಟ್ಟ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದಾಗ ಆತನಿಗೆ ಬಂಧಿಸಲ್ಲ, ಸರಕಾರಿ ವಕೀಲರೇ ಆತನಿಗೆ ಬಂಧಿಸಲ್ಲ ಎಂದು ಹೇಳುತ್ತಾರೆ. ಆತನಿಗೆ ಜಾಮೀನು ಕೂಡ ಸಿಕ್ಕಿದೆ. ಚಿಕ್ಕಮಗಳೂರಿನ ಗೊಲ್ಲರ ಹಟ್ಟಿ ಘಟನೆ ನಡೆದಿದೆ, ಅದೇ ರೀತಿ ಮಡಿಕೇರಿಯಲ್ಲಿ ಹೆಣ್ಣುಮಗಳ ಮೇಲೆ ದೌರ್ಜನ್ಯ ನಡೆದಿದೆ. ಅದರಲ್ಲಿ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಲ್ಲ. ಎಲ್ಲಾ ಸಮಸ್ಯೆ ವೇಳೆ ಮುಂದೆ ನಿಂತು ಬಗೆಹರಿಸಬೇಕಾದ ಕಾಂಗ್ರೆಸ್‌ನವರು ಈ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ದಲಿತ ಹೋರಾಟಗಾರ ಭಾಸ್ಕರ್‌ ಪ್ರಸಾದ್,  ಮಳವಳ್ಳಿಯಲ್ಲಿ ಕಿರಣ್‌ ಎಂಬ ಯುವಕನ ಮೇಲೆ ತುಂಬಾ ಜನ ಗುಂಪಾಗಿ ಹೊಡೆದಿದ್ದಾರೆ. ಈ ಬಗ್ಗೆ ಡಿವೈಎಸ್ಪಿ ಜೊತೆ ಮಾತನಾಡಲು ಯತ್ನಿಸಿದೆ. ಆದರೆ ಅವರು ಪೋನ್‌ ತೆಗೆದಿಲ್ಲ. ಬಳಿಕ ಎಸ್‌ಐ ಜೊತೆ ಮಾತನಾಡಿದೆವು, ಮೊದಲು ಎಫ್‌ಐಆರ್‌ ಮಾಡಿರಲಿಲ್ಲ. ತುಂಬಾ ತಕರಾರು ಮಾಡಿದ್ರು, ಈಗಾದರೆ ನಾವೆಲ್ಲಾ ಅಲ್ಲಿಗೆ ಬರಬೇಕಾಗುತ್ತೆ ಎಂದ ಮೇಲೆ ಎಫ್‌ಐಆರ್‌ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಒಬ್ಬನಿಗೆ ಮಾತ್ರ ಬಂದಿಸಿದ್ದಾರೆ. ಬೇರೆ ಯಾರಿಗೂ ಬಂಧಿಸಿಲ್ಲ. ಸಂತ್ರಸ್ತನಿಗೆ ಪೊಲೀಸರು ಬೆದರಿಸಿದ್ದಾರೆ. ನೀನು 80 ಜನರನ್ನು ಎಫ್‌ಐಆರ್‌ನಲ್ಲಿ ಹೇಳಿದ್ದಿಯಾ, ನೀನೇ ಅವರನ್ನು ಹುಡುಕಿಕೊಡು ಎಂದು ಬೆದರಿಸಿದ್ದಾರೆ. ಈ ಹಿನ್ನೆಲೆ ನಾವು ನಾಳೆ ಮಳವಳ್ಳಿಗೆ ತೆರಳಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಂಜನ್ ಗೊಗೊಯ್‌ಗೆ ‘ಅತ್ಯುನ್ನತ ನಾಗರಿಕ ಪ್ರಶಸ್ತಿ’: ‘ರಾಮ ಮಂದಿರ’ ಸ್ಥಾಪನೆಯಾಗಿದ್ದರೆ…..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...