Homeಮುಖಪುಟಡ್ರಗ್ ಬಳಕೆ ಆರೋಪ: ಮಲಯಾಳಂ ನಟ ಶೈನ್ ಟಾಮ್ ಚಾಕೊ ಬಂಧನ

ಡ್ರಗ್ ಬಳಕೆ ಆರೋಪ: ಮಲಯಾಳಂ ನಟ ಶೈನ್ ಟಾಮ್ ಚಾಕೊ ಬಂಧನ

- Advertisement -
- Advertisement -

ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರನ್ನು ಕೇರಳ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಶೈನ್ ಟಾಮ್ ವಿರುದ್ಧ ಮಾದಕ ದ್ರವ್ಯಗಳು ಮತ್ತು ಮನೋವಿಕೃತಿ ಪದಾರ್ಥಗಳ (ಎನ್‌ಡಿಪಿಸ್‌) ಕಾಯ್ದೆಯ ಸೆಕ್ಷನ್ 27 (ಮಾದಕ ದ್ರವ್ಯಗಳು ಅಥವಾ ಮನೋವಿಕೃತಿ ಪದಾರ್ಥಗಳ ಸೇವನೆ) ಮತ್ತು 29 (ಪ್ರೇರಣೆ ಮತ್ತು ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮುಂದಿನ ಕಾನೂನು ಕ್ರಮಗಳ ಜೊತೆಗೆ ಶೀಘ್ರದಲ್ಲೇ ಶೈನ್ ಟಾಮ್ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಎರ್ನಾಕುಲಂ ಉತ್ತರ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ ನಟನ ಬಂಧನವನ್ನು ಔಪಚಾರಿಕವಾಗಿ ದಾಖಲಿಸಿಕೊಂಡಿದ್ದು, ಜಾಮೀನು ನೀಡಬಹುದಾದ ಆರೋಪಗಳನ್ನು ಹೊರಿಸಲಾಗಿದೆ ಎಂದು ಮೂಲಗಳು ದೃಢಪಡಿಸಿವೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಎರ್ನಾಕುಲಂ ಉತ್ತರ ಪೊಲೀಸ್‌ ಠಾಣೆಯಲ್ಲಿ ತನಿಖಾ ತಂಡದ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಶೈನ್ ಟಾಮ್ ಅವರಿಗೆ ಕೊಚ್ಚಿ ನಗರ ಪೊಲೀಸರು ಸಮನ್ಸ್ ಜಾರಿ ಮಾಡಿದ್ದರು. ಶನಿವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಶೈನ್ ಟಾಮ್ ತಮ್ಮ ವಕೀಲರೊಂದಿಗೆ ಠಾಣೆಗೆ ತೆರಳಿದ್ದರು.

ಕಳೆದ ಬುಧವಾರ ರಾತ್ರಿ ಜಿಲ್ಲಾ ಮಾದಕ ದ್ರವ್ಯ ವಿರೋಧಿ ವಿಶೇಷ ಕಾರ್ಯಪಡೆ (ಡನ್ಸಾಫ್) ನಡೆಸಿದ ದಾಳಿಯ ಸಮಯದಲ್ಲಿ ಹೋಟೆಲ್‌ ಕಟ್ಟಡದ ಮೂರನೇ ಮಹಡಿಯ ಕೋಣೆಯ ಕಿಟಕಿಯಿಂದ ಹಾರಿ ಶೈನ್ ಟಾಮ್ ಚಾಕೊ ಪರಾರಿಯಾಗಿದ್ದರು. ಮೂರನೇ ಮಹಡಿಯಿಂದ ಎರಡನೇ ಮಹಡಿಗೆ ಬಳಿಕ ಈಜುಕೊಳಕ್ಕೆ ಹಾರಿ ಮೆಟ್ಟಿಲುಗಳ ಮೂಲಕ ಪರಾರಿಯಾಗಿದ್ದರು ಎಂಬ ಆರೋಪದ ಮೇಲೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದರು.

ಬಾಗಿಲಲ್ಲಿ ನಿಂತಿರುವುದು ಪೊಲೀಸ್ ಅಧಿಕಾರಿಗಳೆಂದು ತನಗೆ ತಿಳಿದಿರಲಿಲ್ಲ. ಅವರು ತನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳು ಎಂದು ಭಾವಿಸಿ ಪರಾರಿಯಾದೆ ಎಂದು ವಿಚಾರಣೆಯ ಸಮಯದಲ್ಲಿ ಚಾಕೊ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ತನಿಖೆಯ ಭಾಗವಾಗಿ, ಪೊಲೀಸರು ಚಾಕೊ ಅವರ ಕರೆ ದತ್ತಾಂಶ ದಾಖಲೆಗಳು ಮತ್ತು ಸಂದೇಶಗಳ ಇತಿಹಾಸವನ್ನು ಸಂಗ್ರಹಿಸಿದ್ದಾರೆ. ಎರ್ನಾಕುಲಂ ಕೇಂದ್ರ ಸಹಾಯಕ ಆಯುಕ್ತ ಸಿ ಜಯಕುಮಾರ್ ಮತ್ತು ನಾರ್ಕೋಟಿಕ್ ಸೆಲ್ ಸಹಾಯಕ ಆಯುಕ್ತ ಕೆ.ಎ ಅಬ್ದುಲ್ ಸಲಾಮ್ ನೇತೃತ್ವದ ತಂಡ ಚಾಕೊ ಅವರನ್ನು ವಿಚಾರಣೆಗೆ ನಡೆಸಿದೆ.

ಬ್ರಾಹ್ಮಣರ ಕುರಿತ ಹೇಳಿಕೆ ವಿವಾದ: ಅನುರಾಗ್ ಕಶ್ಯಪ್ ಕುಟುಂಬಕ್ಕೆ ಕೊಲೆ, ಅತ್ಯಾಚಾರ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...