Homeಮುಖಪುಟಭಾರತದಿಂದ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ಮಲಯಾಳಂ ಚಿತ್ರ 'ಜಲ್ಲಿಕಟ್ಟು'

ಭಾರತದಿಂದ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’

ಹರೀಶ್ ಎಂಬುವವರ "ಮಾವೋಯಿಸ್ಟ್" ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ಲಿಜೋ ಜೋಸ್ ಪೆಲ್ಲಿಸ್ಸೆರಿ ಅತ್ಯುತ್ತಮ ನಿರ್ದೇಶಕ ಪ್ರಶ್ತಿಯನ್ನೂ ಗೆದ್ದಿದ್ದರು.

- Advertisement -
- Advertisement -

ಕಳೆದ ವರ್ಷ ಬಿಡುಗಡೆಯಾಗಿ ಅತ್ಯುತ್ತಮ ವಿಮರ್ಶೆಗೆ ಒಳಗಾಗಿದ್ದ ಮಲಯಾಳಂ ಚಿತ್ರ ‘ಜಲ್ಲಿಕಟ್ಟು’ ಪ್ರಖ್ಯಾತ ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಅಧಿಕೃತವಾಗಿ ನಾಮನಿರ್ದೇಶನಗೊಂಡಿದೆ. ಈ ಚಿತ್ರವನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದರು. ಆಂತೋಣಿ ವರ್ಗೀಸ್ ಮತ್ತು ಚೆಂಬನ್ ವಿನೋದ್ ಜೋಸ್ ಮತ್ತಿತರರು ಅಭಿನಯಿಸಿರುವ ಚಿತ್ರವು ವಿಮರ್ಶಕರ ನಡುವೆಯೂ ಮೆಚ್ಚುಗೆ ಗಳಿಸಿತ್ತು.

ಭಾರತದ ಸುಮಾರು 27 ಭಾಷೆಗಳ ಚಿತ್ರಗಳ ಪೈಕಿ ಜಲ್ಲಿಕಟ್ಟು ಚಿತ್ರವನ್ನು ಆಯ್ಕೆ ಮಾಡಲಾಗಿದೆ ಎಂದು ಫಿಲ್ಮ್‌ ಫೆಡರೇಷನ್ ಆಫ್ ಇಂಡಿಯಾ ಹೇಳಿದೆ. ‘ದಿ ಡಿಸಿಪ್ಲಿನ್’, ‘ಶಕುಂತಲಾ ದೇವಿ’, ‘ಶಿಕಾರ’, ‘ಛಾಪಕ್’, ‘ಏಕೆ V/s ಏಕೆ’, ‘ಭೋಂಸ್ಲೆ’, ‘ಛಾಲಾಂಗ್’, ‘ಚೆಕ್ ಪೋಸ್ಟ್’ ಮುಂತಾದ ಸಿನಿಮಾಗಳ ಮಧ್ಯೆ ‘ಜಲ್ಲಿಕಟ್ಟು’ ಆಯ್ಕೆಯಾಗಿದೆ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಗುಡ್ಡಗಾಡು ಪ್ರದೇಶದ ಒಂದು ಹಳ್ಳಿಯ ಕಸಾಯಿಖಾನೆಯಿಂದ ತಪ್ಪಿಸಿಕೊಳ್ಳುವ ಒಂದು ಎಮ್ಮೆಯನ್ನು ಅ ಊರಿನ ಜನರು ಪತ್ತೆ ಹಚ್ಚುವುದರ ಸುತ್ತ ಈ ಚಿತ್ರದ ಕಥೆಯು ಹೆಣೆದುಕೊಂಡಿದೆ. ತಪ್ಪಿಸಿಕೊಂಡ ಎಮ್ಮೆಯನ್ನು ಹೇಗಾದರೂ ಹಿಡಿಯಲೇ ಬೇಕು ಎಂದು ಊರಿನ ಗಂಡಸರೆಲ್ಲಾ ಒಟ್ಟಾಗಿ ಮಾಡುವ ಸಾಹಸಗಳನ್ನು ತೋರಿಸುವುದರ ಮೂಲಕ ಮನುಷ್ಯನೊಳಗಿರುವ ಮೃಗೀಯ ಗುಣದ ಪರಿಚಯ ಮಾಡಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು.

ಹರೀಶ್ ಎಂಬುವವರ “ಮಾವೋಯಿಸ್ಟ್” ಎಂಬ ಸಣ್ಣ ಕಥೆಯನ್ನು ಆಧರಿಸಿದ ಈ ಚಿತ್ರ ಟೊರೆಂಟೋ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ಲಿಜೋ ಜೋಸ್ ಪೆಲ್ಲಿಸ್ಸೆರಿ ಅತ್ಯುತ್ತಮ ನಿರ್ದೇಶಕ ಪ್ರಶ್ತಿಯನ್ನೂ ಗೆದ್ದಿದ್ದರು.

ಇದನ್ನೂ ಓದಿ: ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

“ಮಾನವೀಯತೆ ಕುರಿತು ಈ ಸಿನಿಮಾವಿದೆ. ಕೆಲವೊಮ್ಮೆ ಮನುಷ್ಯ ಮೃಗಗಳಿಗಿಂತ ಕ್ರೂರನಾಗುತ್ತಾನೆ. ಈ ಚಿತ್ರದ ಉದ್ದೇಶ, ಕ್ಯಾಮರಾ ಕೆಲಸ, ನಿರ್ದೇಶನ ಎಲ್ಲವೂ ಚೆನ್ನಾಗಿದೆ. ಹೀಗಾಗಿ ನಾವು ಈ ಸಿನಿಮಾ ಆಯ್ಕೆ ಮಾಡಿದ್ದೇವೆ’ ಎಂದು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾದ ಚೇರ್‌ಮನ್ ರಾಹುಲ್ ರಾವೇಲ್ ತಿಳಿಸಿದ್ದಾರೆ.

ಫೆಬ್ರವರಿ 28ರಂದು ನಡೆಯಬೇಕಿದ್ದ 93ನೇ ಆಸ್ಕರ್ ಪ್ರಶಸ್ತಿ ಸಮಾರಂಭ, ಕೊರೊನಾದಿಂದಾಗಿ 2021 ಏಪ್ರಿಲ್ 25 ರಂದು ನಡೆಯಲಿದೆ


ಇದನ್ನೂ ಓದಿ: ನಟ ಅಕ್ಷಯ್ ಕುಮಾರ್ ದಾಖಲಿಸಿದ್ದ ಮಾನಹಾನಿ ಕೇಸ್ ವಿರೋಧಿಸಿದ ಯೂಟ್ಯೂಬರ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...