ಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ

‘ಎಂಟಿ’ ಎಂದೇ ಖ್ಯಾತರಾಗಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಝಿಕ್ಕೋಡ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಐದು ದಿನಗಳಿಂದ ಅವರು ಗಂಭೀರ ಸ್ಥಿತಿಯಲ್ಲಿದ್ದರು. ಮಲಯಾಳಂ ಸಾಹಿತ್ಯ ದಿಗ್ಗಜ ಬುಧವಾರ ಸಂಜೆ ವೇಳೆಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಹಿರಿಯ ಚಿತ್ರ ಸಾಹಿತಿ ‘ಎಂಟಿ’ ಅವರಿಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಎರಡು ದಿನಗಳ ಶೋಕಾಚರಣೆ ಘೋಷಿಸಿದೆ. ಜ್ಞಾನಪೀಠ, ಪದ್ಮಭೂಷಣ, … Continue reading ಮಲಯಾಳಂ ಸಾಹಿತ್ಯ ದಿಗ್ಗಜ ಎಂ.ಟಿ. ವಾಸುದೇವನ್ ನಾಯರ್ (91) ನಿಧನ