Homeಮುಖಪುಟಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

ಮಲೆಂಗಾವ್ ಸ್ಪೋಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ಪಡೆದ ಬಿಜೆಪಿ ಸಂಸದೆ ಪ್ರಗ್ಯಾ ಠಾಕೂರ್

2018ರ ಅಕ್ಟೋಬರ್‌ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಇತರ ಐವರ ಮೇಲೆ ನ್ಯಾಯಾಲಯ ಭಯೋತ್ಪಾದನೆಯ ಪ್ರಕರಣ ದಾಖಲಿಸಿತ್ತು.

- Advertisement -

2008ರ ಮಲೆಂಗಾವ್ ಸ್ಪೋಟ ಪ್ರಕರಣದ ಏಳು ಆರೋಪಿಗಳಲ್ಲಿ ಒಬ್ಬರಾದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಮುಂಬೈನ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯಕ್ಕೆ ನಿಯಮಿತವಾಗಿ ಹಾಜರಾಗುವುದರಿಂದ ಇಂದು ವಿನಾಯಿತಿ ಪಡೆದಿದ್ದಾರೆ.

ಪ್ರಗ್ಯಾ ಸಿಂಗ್ ಠಾಕೂರ್‌ರವರು ಹಲವು ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರು ತಮ್ಮ ಭೋಪಾಲ್ ಕ್ಷೇತ್ರದ ಜವಾಬ್ದಾರಿ ಹೊತ್ತಿದ್ದಾರೆ. ಅಲ್ಲದೆ ಅವರಿಗೆ ಜೀವ ಬೆದರಿಕೆ ಇದೆ. ಈ ಎಲ್ಲಾ ಕಾರಣಗಳಿಂದ ಅವರು ಮುಂಬೈನ ನ್ಯಾಯಾಲಯಕ್ಕೆ ನಿಯಮಿತವಾಗಿ ಹಾಜರಾಗಲು ಸಾಧ್ಯವಿಲ್ಲ ಎಂದು ಪ್ರಗ್ಯಾ ಪರ ವಕೀಲ ಜೆ.ಪಿ ಮಿಶ್ರಾ ಲಿಖಿತ ಅರ್ಜಿ ಸಲ್ಲಿಸಿದ್ದರು.

ಪ್ರಗ್ಯಾ ಹಲವು ಆರೋಗ್ಯ ಸಮಸ್ಯೆಗಳಿಗೆ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಕೂಡ ಮುಂಬೈನ ಕೊಕಿಲಾಬೆನ್‌ ಆಸ್ಪತ್ರೆಯಲ್ಲಿ ಹಲವು ಪರೀಕ್ಷೆಗಳಿಗೆ ಒಳಗಾಗಿದ್ದಾರೆ. ಅವರ ಆರೋಗ್ಯಕ್ಕಾಗಿ ಹಲವು ವೈದ್ಯರು ಚಿಕಿತ್ಸೆ ನೀಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಅರ್ಜಿ ಆಲಿಸಿದ ಪ್ರಬ್ಲಿಕ್ ಪ್ರಾಸಿಕ್ಯೂಸರ್ ಅವಿನಾಶ್ ರಸಲ್ “ಅಗತ್ಯವಿದ್ದಾಗ ಮಾತ್ರ ನ್ಯಾಯಾಲಯಕ್ಕೆ ಹಾಜರಾಗಲಿ, ಉಳಿದಂತೆ ನಿಯಮಿತವಾಗಿ ಅವರ ಹಾಜರಾಗಬೇಕಿಲ್ಲ” ಎಂದು ತಿಳಿಸಿದ್ದಾರೆ.

ಈ ಹಿಂದೆ ಹಲವು ಬಾರಿ ಅವರು ನ್ಯಾಯಾಲಯದ ವಿಚಾರಣೆಗೆ ತಪ್ಪಿಸಿಕೊಂಡಿದ್ದರು. 2 ತಿಂಗಳಿಂದ ಹಾಜರಾಗದ ಅವರ ನಡೆಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. 2020ರ ಡಿಸೆಂಬರ್ 19 ರಂದು ಅವರು ನ್ಯಾಯಾಲಯಕ್ಕೆ ಹಾಜರಾಗಲು ಇದು ಕೊನೆಯ ಅವಕಾಶ ಎಂದು ಎಚ್ಚರಿಸಿದ್ದರು.

2008ರ ಸೆಪ್ಟಂಬರ್ 29 ರಂದು ಸ್ಪೋಟಕಗಳನ್ನೊಳಗೊಂಡಿದ್ದ ಮೋಟಾರ್ ಸೈಕಲ್‌ ಒಂದನ್ನು ಮಲೆಂಗಾವ್‌ನ ಮಸೀದಿಯೊಂದಕ್ಕೆ ನುಗ್ಗಿಸಿ ಸ್ಪೋಟಿಸಲಾಗಿತ್ತು. ಈ ಘಟನೆಯಲ್ಲಿ 6 ಜನ ಮೃತಪಟ್ಟು, 100ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು. ಘಟನೆ ನಡೆದ 10 ವರ್ಷಗಳ ನಂತರ 2018ರ ಅಕ್ಟೋಬರ್‌ನಲ್ಲಿ ಪ್ರಗ್ಯಾ ಸಿಂಗ್ ಠಾಕೂರ್, ಕರ್ನಲ್ ಪುರೋಹಿತ್ ಸೇರಿದಂತೆ ಇತರ ಐವರ ಮೇಲೆ ನ್ಯಾಯಾಲಯ ಭಯೋತ್ಪಾದನೆಯ ಪ್ರಕರಣ ದಾಖಲಿಸಿತ್ತು.

ಇಂದು ನ್ಯಾಯಾಲಯಕ್ಕೆ ಹಾಜರಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಲ್ಲು ತೂರುವವರ ವಿರುದ್ಧ ಕಾನೂನು ತಂದಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಾಣ್‌ರವರಿಗೆ ಧನ್ಯವಾದ ತಿಳಿಸಿದ್ದಾರೆ.


ಇದನ್ನೂ ಓದಿ: ಮಾಲೆಗಾಂವ್‌‌ ಸ್ಪೋಟ: 2 ನೇ ಬಾರಿಯೂ ವಿಚಾರಣೆಗೆ ತಪ್ಪಿಸಿಕೊಂಡ ಪ್ರಜ್ಞಾ ಸಿಂಗ್ ಠಾಕೂರ್‌

+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕರ್ನಾಟಕ ಕೊರೊನಾ: 24 ಗಂಟೆಯಲ್ಲಿ 67 ಸಾವಿರ ಡಿಸ್ಚಾರ್ಜ್, 38 ಸಾವಿರ ಹೊಸ ಪ್ರಕರಣ

0
ಕೊರೊನಾ ಮೂರನೇ ಅಲೆಯಲ್ಲಿ ರಾಜ್ಯದಲ್ಲಿ ಪ್ರಕರಣಗಳು ದಿಢೀರ್‌ ಹೆಚ್ಚಾಗಿದ್ದವು. ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಕೇಸಸ್ ಪತ್ತೆಯಾಗಿದ್ದವು. ಆದರೆ, ಕಳೆದ 24 ಗಂಟೆಯಲ್ಲಿ 67 ಸಾವಿರ ಕೊರೊನಾ ಸೋಂಕಿತರು ಚೇತರಿಕೆ ಕಂಡು, ಡಿಸ್ಚಾರ್ಜ್ ಆಗಿದ್ದಾರೆ....
Wordpress Social Share Plugin powered by Ultimatelysocial