Homeಮುಖಪುಟಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು;...

ಮಾಲೆಗಾಂವ್ ಸ್ಫೋಟ ಪ್ರಕರಣ: ಶಂಕಿತ ಭಯೋತ್ಪಾದಕಿ, ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್‌‌ ಬೈಕ್‌ನಲ್ಲಿ ಸ್ಫೋಟಕಗಳ ಕುರುಹು; ತಜ್ಞರ ಸಾಕ್ಷಿ

- Advertisement -
- Advertisement -

ಎಲ್‌ಎಂಎಲ್ ವೆಸ್ಪಾ ಸ್ಕೂಟರ್ ಸೇರಿದಂತೆ ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಹಲವಾರು ವಸ್ತುಗಳಲ್ಲಿ ಸ್ಫೋಟಕಗಳ ಕುರುಹುಗಳು ಕಂಡುಬಂದಿವೆ ಎಂದು 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದ 261 ನೇ ಸಾಕ್ಷಿಯಾಗಿರುವ ವಿಧಿವಿಜ್ಞಾನ ತಜ್ಞರು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ಸ್ಕೂಟರ್‌‌ ಶಂಕಿತ ಭಯೋತ್ಪಾದಕಿ, ಭೋಪಾಲ್‌ನ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ಪಟ್ಟಣದ ಮಸೀದಿಯ ಬಳಿ ಸ್ಕೂಟರ್‌ಗೆ ಕಟ್ಟಲಾಗಿದ್ದ ಬಾಂಬ್ ಸ್ಫೋಟಗೊಂಡು ಆರು ಜನರು ಸಾವನ್ನಪ್ಪಿದ್ದರು ಮತ್ತು 100 ಜನರು ಗಾಯಗೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷಿ ನುಡಿದ ವಿಧಿವಿಜ್ಞಾನ ತಜ್ಞರು 2008 ರಲ್ಲಿ ಸಹಾಯಕ ರಾಸಾಯನಿಕ ವಿಶ್ಲೇಷಕರಾಗಿ ಕೆಲಸ ಮಾಡಿದ್ದರು. ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಸ್ಕೂಟರ್‌ನಲ್ಲಿ ಅಮೋನಿಯಂ ನೈಟ್ರೇಟ್ ಕುರುಹುಗಳು ಕಂಡುಬಂದಿವೆ ಎಂದು ಅವರು ಹೇಳಿದ್ದಾರೆ. ಅಮೋನಿಯಂ ನೈಟ್ರೇಟ್ ಅನ್ನು ಸ್ಫೋಟಕವಾಗಿ ಬಳಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಭಯೋತ್ಪಾದಕಿ ಪ್ರಗ್ಯಾ ಠಾಕೂರ್‌ , ಭಯೋತ್ಪಾದಕ ಗೋಡ್ಸೆಯನ್ನು ದೇಶಭಕ್ತ ಎಂದಿದ್ದಾರೆ: ರಾಹುಲ್‌ ಗಾಂಧಿ

2008 ರಲ್ಲಿ ಸ್ಫೋಟದ ಸ್ಥಳಕ್ಕೆ ಹೋಗಿದ್ದಾಗ LML ವೆಸ್ಪಾ ಸ್ಕೂಟರ್ ಗಂಭೀರವಾಗಿ ಹಾನಿಗೊಳಗಾದ ಸ್ಥಿತಿಯಲ್ಲಿ ನೋಡಿದೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಈ ವೇಳೆ ಹೋಂಡಾ ಯುನಿಕಾರ್ನ್, ಬೈಸಿಕಲ್ ಸೇರಿದಂತೆ ಇತರೆ ವಾಹನಗಳಿಗೂ ಭಾಗಶಃ ಹಾನಿಯಾಗಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅವಿನಾಶ್ ರಸಲ್ ಅವರ ಪಾಟಿ ಸವಾಲಿಗೆ ಉತ್ತರಿಸಿದ ಪ್ರಸ್ತುತ ನಿವೃತ್ತರಾಗಿರುವ ವಿಧಿವಿಜ್ಞಾನ ತಜ್ಞರು, ಪೊಲೀಸರು ಕಳುಹಿಸಿದ ವಸ್ತು ಸಾಕ್ಷ್ಯಗಳ ರಾಸಾಯನಿಕ ವಿಶ್ಲೇಷಣೆ ಮತ್ತು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ಒದಗಿಸುವುದು ಮತ್ತು ಸ್ಫೋಟದ ಸ್ಥಳಕ್ಕೆ ಭೇಟಿ ನೀಡುವ ಕೆಲಸದಲ್ಲಿ ತೊಡಗಿದ್ದಾಗಿ ಅವರು ತಮ್ಮ ಕೆಲಸವನ್ನು ವಿವರಿಸುತ್ತಾ ಹೇಳಿದ್ದಾರೆ.

ಸ್ಕೂಟರ್‌ನ ಎಂಜಿನ್ ಸಂಖ್ಯೆಯನ್ನು ಸ್ಕ್ರಾಚ್ ಮಾಡಲಾಗಿತ್ತು. ಕಾರ್ಯವಿಧಾನದ ಮೂಲಕ ತಾನು ಬೈಕ್‌ನಿಂದ ಮೂರು ಸಂಭವನೀಯ ಎಂಜಿನ್ ಸಂಖ್ಯೆಗಳನ್ನು ಕಂಡುಹಿಡಿಯುವಲ್ಲಿ ಯಶಸ್ವಿಯಾಗಿದ್ದಾಗಿ ಅವರು ಸಾಕ್ಷಿ ಹೇಳಿದ್ದಾರೆ.

ಇದನ್ನೂ ಓದಿ: ಫುಟ್‌ಬಾಲ್, ನೃತ್ಯ ಈಗ ಕ್ರಿಕೆಟ್ ಆಡಿದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್

ಸಂಖ್ಯೆಗಳನ್ನು ಗುರುತಿಸುವ ಮೊದಲು ನಂಬರ್‌‌ ಪ್ಲೇಟ್‌ನಲ್ಲಿ ಯಾವುದೇ ಎಂಜಿನ್ ಸಂಖ್ಯೆ ಇರಲಿಲ್ಲ ಎಂಬುವುದನ್ನು ತಾನು ಗಮನಿಸಿದ್ದಾಗಿ ಅವರು ಹೇಳಿದ್ದಾರೆ. ಇವರ ಸಾಕ್ಷಿಯ ವಿಚಾರಣೆ ಮತ್ತಷ್ಟು ಮುಂದುವರಿಯಲಿದೆ.

ಎರಡು ದ್ವಿಚಕ್ರವಾಹನಗಳು ಮತ್ತು ಐದು ಸೈಕಲ್‌ಗಳನ್ನು ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಕಚೇರಿಯಿಂದ ನ್ಯಾಯಾಲಯಕ್ಕೆ ತರಲಾಯಿತು. ವಿಶೇಷ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿ, ಸಾಕ್ಷಿ ಮತ್ತು ಆರೋಪಿಗಳು ನ್ಯಾಯಾಲಯ ಒಳಗಿನಿಂದ ವಾಹನಗಳನ್ನು ನಿಲ್ಲಿಸಿದ ಸ್ಥಳಕ್ಕೆ ತೆರಳಿ ವಾಹನಗಳನ್ನು ಪರಿಶೀಲಿಸಿದರು ಆದರೆ ಛಾಯಾಗ್ರಹಣಕ್ಕೆ ಅವಕಾಶ ನೀಡಲಿಲ್ಲ.

2019 ರಲ್ಲಿ ಪಂಚ ಸಾಕ್ಷಿಯಾಗಿ ಕೆಲಸ ಮಾಡಿದ ಇನ್ನೊಬ್ಬ ಸಾಕ್ಷಿ ಸ್ಫೋಟದ ಸ್ಥಳದಲ್ಲಿದ್ದ ಬೈಕ್ ಅನ್ನು ಗುರುತಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಸರಿಯಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್‌‌ – ಡ್ಯಾನ್ಸ್‌ ಮಾಡುವ ವಿಡಿಯೊ ವೈರಲ್‌!

2008ರ ಸೆಪ್ಟೆಂಬರ್ 29 ರಂದು ಮಾಲೆಗಾಂವ್‌ನ ಭಿಕು ಚೌಕ್‌ನಲ್ಲಿ ಸ್ಕೂಟರ್‌ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಪೋಟಿಸಿ ಆರು ಮಂದಿ ಸಾವನ್ನಪ್ಪಿದ್ದರು ಮತ್ತು ನೂರಕ್ಕೂ ಹೆಚ್ಚು ಜನರು ಗಾಯಗೊಂಡರು ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿದೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸುವ ಮೊದಲು ಮಹಾರಾಷ್ಟ್ರ ಎಟಿಎಸ್ ಆರಂಭದಲ್ಲಿ ತನಿಖೆ ನಡೆಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...