HomeUncategorizedಮಲ್ಲೇಶ್ವರಂ ಕ್ಷೇತ್ರದಲ್ಲಿ ಫಾರಂ-7 ಅಕ್ರಮ: ಬಿಜೆಪಿಯ ಬೂತ್ ಏಜೆಂಟ್ ವಿರುದ್ಧ FIR

ಮಲ್ಲೇಶ್ವರಂ ಕ್ಷೇತ್ರದಲ್ಲಿ ಫಾರಂ-7 ಅಕ್ರಮ: ಬಿಜೆಪಿಯ ಬೂತ್ ಏಜೆಂಟ್ ವಿರುದ್ಧ FIR

- Advertisement -
- Advertisement -

ರಾಜ್ಯಾದ್ಯಂತ ತೀವ್ರ ರಾಜಕೀಯ ವಿವಾದ ಹಾಗೂ ಸಂಚಲನ ಮೂಡಿಸಿರುವ ಮತದಾರರ ಪಟ್ಟಿ ಪರಿಷ್ಕರಣೆಯ (SIR) ಅಕ್ರಮಗಳ ಸರಣಿಗೆ ಇದೀಗ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ ಕ್ಷೇತ್ರವೂ ಸೇರ್ಪಡೆಯಾಗಿದೆ. ಫಾರಂ-7 ಅನ್ನು ಅಸ್ತ್ರವಾಗಿಸಿಕೊಂಡು ಜೀವಂತವಾಗಿರುವ ಹಾಗೂ ಅದೇ ಕ್ಷೇತ್ರದಲ್ಲಿ ವಾಸವಾಗಿರುವ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ನಡೆದಿರುವ ಬೃಹತ್ ಜಾಲವೊಂದು ಬೆಳಕಿಗೆ ಬಂದಿದ್ದು, ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಬೂತ್ ಏಜೆಂಟ್ ಸೇರಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.

ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯಂಗಾರ್ ನೀಡಿರುವ ದೂರಿನನ್ವಯ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 64ರಲ್ಲಿ ಬಿಜೆಪಿ ಮತ್ತು ಆರ್‌ಎಸ್ಎಸ್ ಬೆಂಬಲಿತ ವ್ಯಕ್ತಿಗಳು ದೊಡ್ಡಮಟ್ಟದ ಒಳಸಂಚು ನಡೆಸಿರುವುದು ಬಹಿರಂಗವಾಗಿದೆ. ಮತದಾರರು ಅದೇ ಕ್ಷೇತ್ರದಲ್ಲಿ ಸುಖಕರವಾಗಿ ವಾಸವಿದ್ದರೂ ಸಹ, ಅವರು “ಗೈರುಹಾಜರಾಗಿದ್ದಾರೆ” ಅಥವಾ “ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ” ಎಂದು ಸುಳ್ಳು ಮಾಹಿತಿ ನೀಡಿ ಫಾರಂ-7 ಅರ್ಜಿಗಳನ್ನು ಭರ್ತಿ ಮಾಡಲಾಗಿತ್ತು. ಈ ಕ್ಷೇತ್ರದಲ್ಲಿ ಒಟ್ಟು 778 ಅರ್ಹ ಮತದಾರರ ಹಕ್ಕನ್ನು ಕಸಿಯಲು ಸಂಚು ರೂಪಿಸಲಾಗಿದ್ದು, ಬಿಜೆಪಿ ಬೂತ್ ಮಟ್ಟದ ಏಜೆಂಟ್ ಜಿ.ಎಸ್. ವಸಂತಲಕ್ಷ್ಮೀ ಹೆಸರಿನಲ್ಲಿ ಈ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗಿದೆ.

ತನಿಖೆಯ ವೇಳೆ, ನಿರ್ದಿಷ್ಟ ಸಮುದಾಯದ ಮತದಾರರನ್ನೇ ಗುರಿಯಾಗಿಸಿಕೊಂಡು ಈ ಅಕ್ರಮ ಎಸಗಿರುವುದು ಕಂಡುಬಂದಿದೆ. ವಾರ್ಡ್ 64ರ ವಿವಿದೆಡೆ ಅಂದರೆ ಮತಗಟ್ಟೆ 157ರಲ್ಲಿ 122, ಮತಗಟ್ಟೆ 155ರಲ್ಲಿ 233, ಮತಗಟ್ಟೆ 205ರಲ್ಲಿ 171 ಹಾಗೂ ಮತಗಟ್ಟೆ 203ರಲ್ಲಿ 88 ಅರ್ಜಿಗಳು ಸೇರಿದಂತೆ ಹಲವು ಬೂತ್‌ಗಳಲ್ಲಿ ನಕಲಿ ಫಾರಂ-7 ಸಲ್ಲಿಕೆಯಾಗಿವೆ. ಅಷ್ಟೇ ಅಲ್ಲದೆ, ಈ ಫಾರಂಗಳಲ್ಲಿ ಮಾಡಲಾಗಿರುವ ಸಹಿಗಳಲ್ಲಿ ಗಮನಾರ್ಹ ವ್ಯತ್ಯಾಸಗಳಿದ್ದು, ಫೋರ್ಜರಿ ಸಹಿ ಮಾಡಿ ಅರ್ಜಿ ಸಲ್ಲಿಸಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವೈಯಾಲಿಕಾವಲ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಂಪಸ್ ಹಿಂಸಾಚಾರದ ಬೆನ್ನಲ್ಲೇ SRFTI ಬಳಿ ರ್ಯಾಲಿ: ವಿದ್ಯಾರ್ಥಿಗಳಿಂದ ಕೇಂದ್ರ ಸಚಿವರಿಗೆ ತುರ್ತು ರಕ್ಷಣೆಯ ಮನವಿ

ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (SRFTI)ಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ಬೆನ್ನಲ್ಲೇ, ಸಂಸ್ಥೆಯ ಸಮೀಪ ಹಿಂದೂ ಜಾಗರಣ್ ಮಂಚ್ ರ್ಯಾಲಿ ನಡೆಸಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು...

ಹೆರಿಗೆಗೆ 15000 ರೂ. ಲಂಚದ ಬೇಡಿಕೆ ಆರೋಪ: ಗರ್ಭಿಣಿಯನ್ನು ಆಚೆಗೆ ತಳ್ಳಿದ ಸಿಬ್ಬಂದಿ, ಆಸ್ಪತ್ರೆ ಗೇಟ್‌ ಬಳಿಯೇ ಮಗುವಿಗೆ ಜನ್ಮ ನೀಡಿದ ತಾಯಿ

ಉತ್ತರ ಪ್ರದೇಶದ ರಾಯ್‌ಬರೇಲಿಯ ಜಿಲ್ಲಾ ಮಹಿಳಾ ಆಸ್ಪತ್ರೆಯ ಗೇಟ್ ಬಳಿಯೇ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ ಅತ್ಯಂತ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಶನಿವಾರ (ಅಕ್ಟೋಬರ್ 3) ತಡರಾತ್ರಿ ಈ ಘಟನೆ...

ಎಸ್‌ಐಆರ್ ವಿರುದ್ಧ ಮುಂಬೈ ‘ಗರ್ಜನ ಮೋರ್ಚಾ’ದಲ್ಲಿ ರಾಜ್ ಠಾಕ್ರೆ ಗುಡುಗು: EVM ಬದಲು ಬ್ಯಾಲೆಟ್ ಪೇಪರ್‌ಗೆ ಮರಳಲು ಆಗ್ರಹ

ಮುಂಬೈ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಕುರಿತು ದೇಶಾದ್ಯಂತ ಹೆಚ್ಚುತ್ತಿರುವ ಆಕ್ರೋಶದ ನಡುವೆ, ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ...

ಉತ್ತರ ಪ್ರದೇಶ: ಯೋಧನ ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಟ್ರಕ್‌ಗೆ ಡಿಕ್ಕಿ, ಆತನ ಕುಟುಂಬದ 3 ಮಂದಿ ಮತ್ತು ಚಾಲಕ ಸಾವು 

ಸುಲ್ತಾನ್‌ಪುರ: ಸೇನೆಯ ಸುಬೇದಾರ್ ಮೇಜರ್ ಒಬ್ಬರ ಮೃತದೇಹವನ್ನು ಹುಟ್ಟೂರಿಗೆ ಕೊಂಡೊಯ್ಯುತ್ತಿದ್ದ ಸೇನಾ ಆಂಬ್ಯುಲೆನ್ಸ್ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮೃತ ಯೋಧನ ಕುಟುಂಬದ ಮೂವರು ಸದಸ್ಯರು ಸೇರಿದಂತೆ ನಾಲ್ವರು...

ಕೊಪ್ಪದಲ್ಲಿ ಫಾರಂ-7 ಮೂಲಕ ಅರ್ಹ 243 ಮತದಾರರ ಹೆಸರು ತೆಗೆಯಲು ಯತ್ನ: ಸಿಕ್ಕಿಬಿದ್ದ ಮೇಲೆ ಆಕ್ಷೇಪಣೆ ಹಿಂಪಡೆದ ಬಿಜೆಪಿಗರು

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ನಿಯಮಗಳನ್ನು ದುರುಪಯೋಗಪಡಿಸಿಕೊಂಡು ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ನಡೆಯುತ್ತಿರುವ ಪ್ರಯತ್ನಗಳು ರಾಜ್ಯದ ನಾನಾ ಭಾಗಗಳಲ್ಲಿ ಬೆಳಕಿಗೆ ಬರುತ್ತಿವೆ....

ಗಾಂಧಿ ಜಯಂತಿ ಕಾರ್ಯಕ್ರಮದ ಮೇಲೆ ಬಿಜೆಪಿ ದಾಳಿ ಆರೋಪ: ಗಾಂಧಿ ಭಾವಚಿತ್ರ ಹರಿದುಹಾಕಿ ಬೆದರಿಕೆ; ಎಸ್‌ಎಫ್‌ಐ ನಾಯಕ ಸೇರಿ ಮೂವರ ಬಂಧನ

ಕೋಲ್ಕತ್ತಾ: ಮಹಾತ್ಮ ಗಾಂಧಿಯವರ ಜನ್ಮದಿನದ ಅಂಗವಾಗಿ ಎಡಪಕ್ಷಗಳು ಆಯೋಜಿಸಿದ್ದ ಕಾರ್ಯಕ್ರಮದ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಪಶ್ಚಿಮ ಬಂಗಾಳದ ಕೋಲ್ಕತ್ತಾದ ಬಿರಾಟಿಯಲ್ಲಿ ಕೇಳಿಬಂದಿದೆ. ಕಾರ್ಯಕ್ರಮದ ವೇದಿಕೆ ಮತ್ತು...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಕಠೋರ ಮತ್ತು ಅಸಭ್ಯ ನಡವಳಿಕೆ ಒಪ್ಪಲಾಗದು : ಜಂತರ್ ಮಂತರ್‌ನಲ್ಲಿ ಪತ್ರಕರ್ತರ ಮೇಲಿನ ದೌರ್ಜನ್ಯಕ್ಕೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ತೀವ್ರ ಖಂಡನೆ

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ದೆಹಲಿ ಪೊಲೀಸರು ಮಾಧ್ಯಮ ಪ್ರತಿನಿಧಿಗಳ ವಿರುದ್ಧ ನಡೆದುಕೊಂಡ ರೀತಿ ಮತ್ತು ಅವರ ಮೇಲಿನ ದೌರ್ಜನ್ಯವನ್ನು ಖಂಡಿಸಿ 'ಪ್ರೆಸ್ ಕ್ಲಬ್...

SIR ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಕೇರಳದಲ್ಲಿ ಗ್ಯಾನೇಶ್ ಕುಮಾರ್ ವಿರುದ್ಧ ಹಳೆಯ ಪ್ರಕರಣ ಮರುತನಿಖೆಗೆ ಆದೇಶ 

ತಿರುವನಂತಪುರಂ: ದೇಶದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಅಧಿಕಾರಾವಧಿಗೆ ಸಂಬಂಧಿಸಿದ...

2006 ಎಂಜಿನಿಯರ್ ಆತ್ಮಹತ್ಯೆ ಪ್ರಕರಣ : ಗ್ಯಾನೇಶ್ ಕುಮಾರ್ ವಿರುದ್ಧ ಮರುತನಿಖೆಗೆ ಕೇರಳಂ ಸರ್ಕಾರ ಆದೇಶ

ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಕ್ರಮಗಳ ಆರೋಪ ಎದುರಿಸುತ್ತಿರುವ ದೇಶದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರಿಗೆ 2006ರ ಹಳೆಯ ಭ್ರಷ್ಟಾಚಾರ ಪ್ರಕರಣವೊಂದು ಮತ್ತೆ ಕಂಠಕವಾಗಿ ಪರಿಣಮಿಸಿದೆ....

ಜಂತರ್ ಮಂತರ್ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಗೆ ಪೊಲೀಸ್ ಅಧಿಕಾರಿಯಿಂದ ಲೈಂಗಿಕ ಕಿರುಕುಳ: ರಾಹುಲ್ ಗಾಂಧಿ, ಸಿಜೆಪಿ ಆರೋಪ

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿ, ಬಿಜೆಪಿಗೆ ಅನುಕೂಲವಾಗುವಂತೆ ಕೋಟ್ಯಂತರ ಮತಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯ ಜಂತರ್...