Homeಮುಖಪುಟರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ: ಕಾಂಗ್ರೆಸ್ ತೀರ್ಮಾನ

ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ: ಕಾಂಗ್ರೆಸ್ ತೀರ್ಮಾನ

- Advertisement -
- Advertisement -

ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಈ ಮೊದಲು ವಿರೋಧ ಪಕ್ಷದ ನಾಯಕರಾಗಿದ್ದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ನಿವೃತ್ತರಾಗಿರುವ ಹಿನ್ನೆಲೆಯಲ್ಲಿ ಖರ್ಗೆಯವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹೈಕಮಾಂಡ್‌ ರಾಜ್ಯಸಭೆಯ ಸಭಾಪತಿಗೆ ಪತ್ರ ಬರೆದಿದೆ.

ಗುಲಾಂ ನಬಿ ಆಜಾದ್ ಸೇರಿದಂತೆ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗುತ್ತಿದ್ದಾರೆ. ಸದಸ್ಯತ್ವದಿಂದ ನಿವೃತ್ತಿಯಾಗುತ್ತಿರುವ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ವಿದಾಯ ಭಾಷಣ ಮಾಡಿದ ಗುಲಾಂ ನಬಿ ಆಜಾದ್, “ಪಾಕಿಸ್ತಾನಕ್ಕೆ ತೆರಳದ ಅದೃಷ್ಟವಂತರಲ್ಲಿ ನಾನೂ ಒಬ್ಬ. ಪಾಕಿಸ್ತಾನದಲ್ಲಿನ ಪರಿಸ್ಥಿತಿಗಳ ಬಗ್ಗೆ ಓದಿದಾಗ, ನಾನೊಬ್ಬ ಹಿಂದುಸ್ತಾನಿ ಮುಸ್ಲಿಮನಾಗಿರುವುದಕ್ಕೆ ಹೆಮ್ಮೆಯಿದೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನನಗೆ ಜನರ ಪ್ರೀತಿ ದೊರೆತಿದೆ” ಎಂದು ಹೇಳಿದ್ದರು.

ಕಳೆದ ವಾರ ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ ಅವರು ಗುಲಾಂ ನಬಿ ಆಜಾದ್ ಬಗ್ಗೆ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದರು.


ಇದನ್ನೂ ಓದಿ: ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...