Homeಮುಖಪುಟಉತ್ತರ ಪ್ರದೇಶ ಕಾಂಗ್ರೆಸ್​ಗೆ ಮೇಜರ್ ಸರ್ಜರಿ : ಎಲ್ಲಾ ಘಟಕಗಳ ವಿಸರ್ಜನೆ

ಉತ್ತರ ಪ್ರದೇಶ ಕಾಂಗ್ರೆಸ್​ಗೆ ಮೇಜರ್ ಸರ್ಜರಿ : ಎಲ್ಲಾ ಘಟಕಗಳ ವಿಸರ್ಜನೆ

- Advertisement -
- Advertisement -

ಬ್ಲಾಕ್, ಜಿಲ್ಲೆ, ರಾಜ್ಯ ಸಮಿತಿ ಸೇರಿದಂತೆ ಉತ್ತರ ಪ್ರದೇಶ ಕಾಂಗ್ರೆಸ್‌ನ ಸಂಪೂರ್ಣ ಘಟಕವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ (ಡಿ.5) ವಿಸರ್ಜಿಸಿದ್ದಾರೆ.

ಮುಂಬರುವ 2027ರ ವಿಧಾನಸಭೆಯ ಚುನಾವಣೆಗೆ ತಯಾರಿ ಮತ್ತು ರಾಜ್ಯ ಕಾಂಗ್ರೆಸ್‌ ಘಟಕದ ಪುನರ್‌ರಚನೆಯ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, “ತಕ್ಷಣದಿಂದ ಜಾರಿಗೆ ಬರುವಂತೆ ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯ ಜಿಲ್ಲಾ ಅಧ್ಯಕ್ಷರು ಮತ್ತು ಬ್ಲಾಕ್ ಕಾಂಗ್ರೆಸ್ ಸಮಿತಿಗಳೊಂದಿಗೆ ಪಿಸಿಸಿಯ ಸಂಪೂರ್ಣ ರಾಜ್ಯ ಘಟಕವನ್ನು ವಿಸರ್ಜಿಸುವ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

2019 ಮತ್ತು 2024ರ ಲೋಕಸಭೆ ಚುನಾವಣೆ ಮತ್ತು 2022ರ ವಿಧಾನಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಸಾಧನೆ ನಿರಾಶಾದಾಯಕವಾಗಿತ್ತು. ಆದ್ದರಿಂದ, ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಮತ್ತೆ ಬಲಪಡಿಸುವ ಅನಿವಾರ್ಯತೆ ಅದರ ನಾಯಕರಿಗೆ ಎದುರಾಗಿದೆ.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ತಳ ಮಟ್ಟದಿಂದ ಬಲಪಡಿಸುವ ಕಾರ್ಯ ಮಾಡುತ್ತಿದ್ದಾರೆ. ಯುವ ಜನರಿಗೆ ಅವಕಾಶಗಳನ್ನು ಕೊಟ್ಟು ಶಕ್ತಿ ತುಂಬುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಬರೋಬ್ಬರಿ 403 ವಿಧಾನಸಭಾ ಸ್ಥಾನಗಳನ್ನು ಹೊಂದಿರುವ ಅತಿ ದೊಡ್ಡ ರಾಜ್ಯದ ಚುನಾವಣೆ ಪಕ್ಷಕ್ಕೆ ಬಹಳ ಮಹತ್ವದ್ದಾಗಿದೆ. ಹಾಗಾಗಿ, ಈಗಲೇ ಪಕ್ಷ ಸಂಘಟನೆಗೆ ಎಐಸಿಸಿ ಮುಂದಾಗಿದೆ. ಅದರ ಮೊದಲ ಹಂತವೇ ಸಮಿತಿಗಳ ವಿಸರ್ಜನೆ ಎಂದು ಹೇಳಲಾಗುತ್ತಿದೆ.

ನವೆಂಬರ್ 6ರಂದು ಮಲ್ಲಿಕಾರ್ಜುನ ಖರ್ಗೆ ಅವರು ಹಿಮಾಚಲ ಪ್ರದೇಶದ ಬ್ಲಾಕ್, ಜಿಲ್ಲೆ, ರಾಜ್ಯ ಸಮಿತಿ ಸೇರಿದಂತೆ ಎಲ್ಲಾ ಘಟಕಗಳನ್ನು ವಿಸರ್ಜಿಸಿದ್ದರು.

ಇದನ್ನೂ ಓದಿ : ರಾಹುಲ್ ವಿರುದ್ಧ ಅವಹೇಳನಕಾರಿ ಭಾಷೆ:  ಬಿಜೆಪಿ ಸಂಸದರ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...