Homeಮುಖಪುಟಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ

ಜಿ20 ಶೃಂಗಸಭೆಯ ಔತಣ ಕೂಟಕ್ಕೆ ಖರ್ಗೆಗಿಲ್ಲ ಆಹ್ವಾನ

- Advertisement -
- Advertisement -

ಜಿ20 ಶೃಂಗಸಭೆ ಹಿನ್ನೆಲೆ ರಾಷ್ಟ್ರಪತಿಗಳು ಆಯೋಜಿಸಿರುವ ಔತಣ ಕೂಟಕ್ಕೆ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನನ್ನು ನೀಡಿಲ್ಲ ಎಂದು ಅವರ ಕಚೇರಿ ತಿಳಿಸಿದೆ.

ಖರ್ಗೆ ಅವರು ಕ್ಯಾಬಿನೆಟ್ ಮಂತ್ರಿ ದರ್ಜೆಯ ಸ್ಥಾನಮಾನವನ್ನು ಹೊಂದಿದ್ದಾರೆ ಮತ್ತು ದೇಶದ ಅತಿದೊಡ್ಡ ವಿರೋಧ ಪಕ್ಷದ ಅಧ್ಯಕ್ಷರಾಗಿದ್ದಾರೆ.

ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಎಲ್ಲಾ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಎಲ್ಲಾ ಕಾರ್ಯದರ್ಶಿಗಳು ಮತ್ತು ಇತರ ಗೌರವಾನ್ವಿತ ಅತಿಥಿಗಳು ಸಹ ಅತಿಥಿ ಪಟ್ಟಿಯಲ್ಲಿದ್ದಾರೆ. ಆದರೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನನ್ನು ನೀಡಲಾಗಿಲ್ಲ.

ಬಿಹಾರದ ನಿತೀಶ್ ಕುಮಾರ್, ಜಾರ್ಖಂಡ್‌ನ ಹೇಮಂತ್ ಸೊರೆನ್, ಪಶ್ಚಿಮ ಬಂಗಾಳದಿಂದ ಮಮತಾ ಬ್ಯಾನರ್ಜಿ, ತಮಿಳುನಾಡಿನ ಎಂಕೆ ಸ್ಟಾಲಿನ್, ದೆಹಲಿಯಿಂದ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್‌ನ ಭಗವಂತ್ ಮಾನ್ ಅವರು ಔತಣಕೂಟದಲ್ಲಿ ಪಾಲ್ಗೊಳ್ಳುವುದಾಗಿ ಖಚಿತಪಡಿಸಿದ್ದಾರೆ. ಎಲ್ಲಾ ಆಹ್ವಾನಿತ ಅತಿಥಿಗಳಿಗೆ ಸಂಜೆ ಆರು ಗಂಟೆಗೆ ಸಂಸತ್ ಭವನಕ್ಕೆ ತಲುಪುವಂತೆ ತಿಳಿಸಲಾಗಿದೆ. ಅಲ್ಲಿಂದ ಭಾರತ ಮಂಟಪಕ್ಕೆ ಕರೆದುಕೊಂಡು ಹೋಗಲು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ದೇಶಗಳ ನಾಯಕರನ್ನು  ಪ್ರತ್ಯೇಕವಾಗಿ ಸ್ವಾಗತಿಸಲಿದ್ದಾರೆ. ಅಲ್ಲಿ ಔತಣಕೂಟವನ್ನು ಕೂಡ ಆಯೋಜಿಸಲಾಗಿದೆ.

ಇದನ್ನು ಓದಿ: ಆಂಧ್ರಪ್ರದೇಶ: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...