Homeಮುಖಪುಟಪಠ್ಯ ಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ಕೈಬಿಟ್ಟ ವಿಚಾರ| ದೇಶದ ಮೇಲೆ ಕೋಮು ಸಿದ್ಧಾಂತ ಹೇರುವ ಪ್ರಯತ್ನ:...

ಪಠ್ಯ ಪುಸ್ತಕದಿಂದ ಸಂವಿಧಾನದ ಪ್ರಸ್ತಾವನೆ ಕೈಬಿಟ್ಟ ವಿಚಾರ| ದೇಶದ ಮೇಲೆ ಕೋಮು ಸಿದ್ಧಾಂತ ಹೇರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಶಾಲಾ ಮಕ್ಕಳ ಕೆಲ ಪಠ್ಯ ಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ಕೈಬಿಡಲು ಎನ್‌ಸಿಇಆರ್‌ಟಿ ಮುಂದಾಗಿದೆ ಎಂಬ ವಿಚಾರವನ್ನು ಬುಧವಾರ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ “ಇದು ದೇಶದ ಮೇಲೆ ಕೋಮು ಸಿದ್ಧಾಂತವನ್ನು ಹೇರುವ ಪ್ರಯತ್ನ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರ ” ಈ ವಿಷಯ ನಿಜವಲ್ಲ. ನಾವು ಸಂವಿಧಾನವನ್ನು ರಕ್ಷಿಸಲು ಬದ್ದರಾಗಿದ್ದೇವೆ” ಎಂದು ಹೇಳಿದೆ.

“ರಾಜಕೀಯ ಪ್ರಜಾಪ್ರಭುತ್ವವು ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯಲ್ಲಿ ಇರದ ಹೊರತು ಅದು ಉಳಿಯುವುದಿಲ್ಲ. ಸಾಮಾಜಿಕ ಪ್ರಜಾಪ್ರಭುತ್ವದ ಅರ್ಥವೇನು? ಇದರರ್ಥ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ತತ್ವಗಳಾಗಿ ಗುರುತಿಸುವ ಜೀವನ ವಿಧಾನ” ಎಂದ ಖರ್ಗೆ, ನವೆಂಬರ್ 1948 ರಲ್ಲಿ ಸಂವಿಧಾನ ಸಭೆಯ ಚರ್ಚೆಯನ್ನು ರಾಜ್ಯಸಭೆಯಲ್ಲಿ ಉಲ್ಲೇಖಿಸಿದ್ದಾರೆ.

“ಭವಿಷ್ಯದ ಪೀಳಿಗೆಗೆ ಭಾರತೀಯ ಪ್ರಜಾಪ್ರಭುತ್ವ, ಸಂವಿಧಾನದ ಮೂಲ ತತ್ವಗಳು, ಮೌಲ್ಯಗಳು ಹಾಗೂ ಮಹಾತ್ಮಾ ಗಾಂಧಿ, ಜವಾಹರಲಾಲ್ ನೆಹರು, ಬಿ ಆರ್ ಅಂಬೇಡ್ಕರ್ , ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ತ್ಯಾಗದ ಬಗ್ಗೆ ಶಿಕ್ಷಣ ನೀಡಬೇಕು” ಎಂದು ಖರ್ಗೆ ಹೇಳಿದ್ದಾರೆ.

“ಇಂದು, ನಾವು ಕೆಲವು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಿಂದ ಸಂವಿಧಾನದ ಪ್ರಸ್ತಾವನೆಯನ್ನು ತೆಗೆದು ಹಾಕುವ ಕುರಿತ ಬಹಳ ಮುಖ್ಯವಾದ ವಿಷಯವನ್ನು ರಾಜ್ಯಸಭೆಯ ಎತ್ತಿದ್ದೇವೆ. ಮೋದಿ ಸರ್ಕಾರದಿಂದ ಸ್ಪಷ್ಟೀಕರಣವನ್ನು ಕೋರಿದ್ದೇವೆ. ಸಭಾನಾಯಕ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ವಿಷಯವನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಾರೆ ಮತ್ತು ಸಂಪೂರ್ಣ ವಿಷಯದ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ” ಎಂದು ಖರ್ಗೆ ಅವರು ಎಕ್ಸ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

“2024ರ ಲೋಕಸಭೆ ಚುನಾವಣೆಯಲ್ಲಿ 140 ಕೋಟಿ ಭಾರತೀಯರು ‘400 ಪಾರ್’ ಘೋಷಣೆಯ ಕನಸನ್ನು ಭಗ್ನಗೊಳಿಸಿದ್ದರಿಂದ ಹತಾಶೆಯಲ್ಲಿರುವ ಮೋದಿ ಸರ್ಕಾರ, ಹಿಂಬಾಗಿಲಿನಿಂದ ಪಿಟೀಲು ಬಾರಿಸುವ ಮೂಲಕ ಮಕ್ಕಳ ಪಠ್ಯಪುಸ್ತಕಗಳಲ್ಲಿ ಸಂವಿಧಾನವನ್ನು ತಿದ್ದಲು ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ” ಎಂದು ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ಖರ್ಗೆ ಅವರ ಆರೋಪವನ್ನು ತಳ್ಳಿ ಹಾಕಿದ್ದು, “6 ನೇ ತರಗತಿಯ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ ಸಂವಿಧಾನದ ಪೀಠಿಕೆ ತುಂಬಾ ಚೆನ್ನಾಗಿದೆ. ಹೊಸ ಪಠ್ಯಪುಸ್ತಕಗಳಲ್ಲಿ, ಸಂವಿಧಾನದ ಪೀಠಿಕೆಯ ಜೊತೆಗೆ, ಮೂಲಭೂತ ಕರ್ತವ್ಯಗಳು, ಮೂಲಭೂತ ಹಕ್ಕುಗಳು, ರಾಷ್ಟ್ರಗೀತೆ ಮತ್ತು ಸಂವಿಧಾನದ ಮೂಲ ಮೌಲ್ಯಗಳನ್ನು ಕೂಡ ಸೇರಿಸಲಾಗಿದೆ” ಎಂದು ಹೇಳಿದ್ದಾರೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಗಾಂಧಿ ಮತ್ತು ಅಂಬೇಡ್ಕರ್ ಪ್ರತಿಮೆಗಳ ಸ್ಥಳಾಂತರದ ಬಗ್ಗೆಯೂ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರೆ, ಅಧ್ಯಕ್ಷ ಜಗದೀಪ್ ಧನಖರ್ ಅವರು “ಕಾಂಗ್ರೆಸ್ ಅಧ್ಯಕ್ಷರು ವಿಷಯ ಬದಲಿಸುತ್ತಿದ್ದಾರೆ” ಎಂದಿದ್ದಾರೆ.

“ಆರ್‌ಎಸ್‌ಎಸ್ ಮತ್ತು ಬಿಜೆಪಿ ಪಠ್ಯಕ್ರಮವನ್ನು ತಿದ್ದುವ ಮೂಲಕ ತಮ್ಮ ಕೋಮುವಾದಿ ಸಿದ್ಧಾಂತವನ್ನು ಜನರ ಮೇಲೆ ಹೇರಲು ಪ್ರಯತ್ನಿಸುತ್ತಿವೆ. ಎನ್‌ಸಿಇಆರ್‌ಟಿ ತೆಗೆದುಕೊಂಡಿರುವ ಹೆಜ್ಜೆ ಸರಿಯಲ್ಲ” ಎಂದು ಬುಧವಾರ ಬೆಳಗ್ಗೆ ಆಡಳಿತ ಪಕ್ಷದಿಂದ ನಡೆದ ಪ್ರತಿಭಟನೆಯ ವೇಳೆಯೂ ಖರ್ಗೆ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜೆ.ಪಿ ನಡ್ಡಾ ” ಪಠ್ಯ ಪುಸ್ತಕಗಳಿಂದ ಸಂವಿಧಾನದ ಯಾವುದೇ ಅಂಶವನ್ನು ತೆಗೆದು ಹಾಕುವ ಪ್ರಶ್ನೆಯೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಸಂವಿಧಾನದ ಒಂದೊಂದು ಪದವನ್ನು ರಕ್ಷಿಸಲೂ ಬದ್ದವಾಗಿದೆ. ಸಂವಿಧಾಬದ ಪೀಠಿಕೆಯನ್ನು ರಕ್ಷಿಸಲಾಗಿದೆ ಮತ್ತು ರಕ್ಷಿಸಲಾಗುವುದು” ಎಂದಿದ್ದರು.

ಎನ್‌ಸಿಆರ್‌ಟಿಯ 6 ತರಗತಿಯ ಪಠ್ಯ ಪುಸ್ತಕದಿಂದ ಸಂವಿಧಾನದ ಪೀಠಿಕೆಯನ್ನು ಕೈ ಬಿಡಲಾಗಿದೆ ಎಂದು ಇತ್ತೀಚೆಗೆ ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಈ ವಿಚಾರವಾಗಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ : ದಲಿತ ಬಾಲಕನಿಗೆ ಶೌಚಾಲಯ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ, ತರಗತಿಯಲ್ಲಿ ಕೂಡಿಹಾಕಿದ ಶಿಕ್ಷಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...