Homeಮುಖಪುಟ'ಬಿಜೆಪಿ ಸಂಸದರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ' : ತನಿಖೆಗೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದ...

‘ಬಿಜೆಪಿ ಸಂಸದರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ’ : ತನಿಖೆಗೆ ಆಗ್ರಹಿಸಿ ಸ್ಪೀಕರ್‌ಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಇಂದು (ಡಿ.19) ಬೆಳಿಗ್ಗೆ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆ ಕಾಂಗ್ರೆಸ್‌ ಮತ್ತು ಬಿಜೆಪಿ ನಾಯಕರ ನಡುವೆ ಗಂಭೀರ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

“ಸಂಸತ್ತಿನ ಮಕರ ದ್ವಾರದ ಬಳಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ. ಈ ಹಲ್ಲೆಯ ಕುರಿತು ತನಿಖೆ ನಡೆಸಬೇಕು” ಎಂದು ಆಗ್ರಹಿಸಿ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

“ರಾಜ್ಯಸಭೆಯಲ್ಲಿ ಡಿ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ಖಂಡಿಸಿ ಇಂದು (ಡಿ.19) ಬೆಳಿಗ್ಗೆ ಸಂಸತ್ತಿನ ‘ಅಂಬೇಡ್ಕರ್ ಪ್ರೇರಣಾ ಸ್ಥಳ’ದಿಂದ ಮಕರ ದ್ವಾರದವರೆಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ಸಂಸದರು ಪ್ರತಿಭಟನೆ ಹಮ್ಮಿಕೊಂಡಿದ್ದರು” ಎಂದು ಖರ್ಗೆ ಅವರು ಸ್ಪೀಕರ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ನಾನು ಇಂಡಿಯಾ ಮೈತ್ರಿಕೂಟದ ಸಂಸದರ ಜೊತೆ ಮಕರ ದ್ವಾರದ ಬಳಿಗೆ ತಲುಪಿದಾಗ, ನನ್ನನ್ನು ಬಿಜೆಪಿ ಸಂಸದರು ತಳ್ಳಿದರು. ಇದರಿಂದ ಆಯತಪ್ಪಿ ನೆಲಕ್ಕೆ ಬಿದ್ದೆ. ಈ ವೇಳೆ ಈಗಾಗಲೇ ಸರ್ಜರಿ ಆಗಿರುವ ನನ್ನ ಮೊಣಕಾಲಿಗೆ ಗಾಯಗಳಾಗಿವೆ. ತಕ್ಷಣ ಕಾಂಗ್ರೆಸ್ ಸಂಸದರು ಕುರ್ಚಿ ತಂದರು. ನನ್ನ ಸಹೋದ್ಯೋಗಿಗಳ ಸಹಾಯದಿಂದ ತುಂಬಾ ಕಷ್ಟಪಟ್ಟು ನಾನು ಅದರ ಮೇಲೆ ಕುಳಿತೆ. ನಂತರ ಕುಂಟುತ್ತಾ 11 ಗಂಟೆಯ ಸುಮಾರಿಗೆ ನಾನು ಸಂಸತ್‌ಗೆ ತೆರಳಿದೆ ” ಎಂದು ಖರ್ಗೆ ಪತ್ರದಲ್ಲಿ ವಿವರಿಸಿದ್ದಾರೆ.

“ನನ್ನ ಮೇಲೆ ನಡೆದಿರುವುದು ಸಾಮಾನ್ಯ ಹಲ್ಲೆಯಲ್ಲ. ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಅಧ್ಯಕ್ಷರ ಮೇಲೆ ನಡೆದ ಹಲ್ಲೆಯಾಗಿದೆ. ಹಾಗಾಗಿ, ಈ ಘಟನೆಯ ಕುರಿತು ತನಿಖೆ ನಡೆಸುವಂತೆ ನಾನು ನಿಮ್ಮಲ್ಲಿ ಆಗ್ರಹಿಸುತ್ತಿದ್ದೇನೆ” ಎಂದು ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ : ಅಮಿತ್ ಶಾ ಹೇಳಿಕೆ ವಿರೋಧಿಸಿ ಪ್ರತಿಭಟನೆ; ಅಂಬೇಡ್ಕರ್‌ ಚಿತ್ರಗಳಿಂದ ಕಂಗೊಳಿಸಿದ ಸುವರ್ಣ ವಿಧಾನಸೌಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...