Homeಮುಖಪುಟರಾಜ್ಯಸಭೆಯಲ್ಲಿ ಖರ್ಗೆ ಗಟ್ಟಿ ದನಿಯಾಗಲಿದ್ದಾರೆ: ನಾಮಪತ್ರ ಸಲ್ಲಿಕೆ ವೇಳೆ ಸಿದ್ದು ಹೇಳಿಕೆ

ರಾಜ್ಯಸಭೆಯಲ್ಲಿ ಖರ್ಗೆ ಗಟ್ಟಿ ದನಿಯಾಗಲಿದ್ದಾರೆ: ನಾಮಪತ್ರ ಸಲ್ಲಿಕೆ ವೇಳೆ ಸಿದ್ದು ಹೇಳಿಕೆ

- Advertisement -
- Advertisement -

ಪ್ರತಿಪಕ್ಷದ ನಾಯಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ, ಕೇಂದ್ರ ಮಂತ್ರಿಯಾಗಿ ಉತ್ತಮ‌ ಕೆಲಸ ಮಾಡಿರು ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯಲ್ಲಿ ಗಟ್ಟಿ ದನಿಯಾಗಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಖರ್ಗೆ ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಖರ್ಗೆಯವರನ್ನು ಸೋಲಿಸಿದ್ದಾರೆ. ಆದರೆ ಸಂಸತ್ತಿನಲ್ಲಿ ಖರ್ಗೆ ಅವರಂತವರು ಇರಬೇಕು, ಅದು ಈಗ ಸಾಧ್ಯವಾಗುತ್ತಿದೆ ಎಂದಿದ್ದಾರೆ.

ರಾಜ್ಯಸಭೆಗೆ ಕಾಂಗ್ರೆಸ್‌ ಪಕ್ಷದಿಂದ ಮಲ್ಲಿಕಾರ್ಜುನಖರ್ಗೆಯವರ ಒಂದೇ ಹೆಸರನ್ನು ನಾವೆಲ್ಲ ಅಂತಿಮ ಮಾಡಿ ಸೂಚಿಸಿದ್ದೇವು. ನಮ್ಮ ಮಾತನ್ನು ಹೈಕಮಾಂಡ್ ಪರಿಗಣಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಅಭ್ಯರ್ಥಿ ಮಾಡಿದ್ದಾರೆ. ಇದಕ್ಕಾಗಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅಪಾರ ನಂಬಿಕೆ ಇದೆ. ಅವರು ಅದನ್ನು ಸಮರ್ಥವಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಇದೆ ಎಂದರು.

ನಾಮಪತ್ರ ಸಲ್ಲಿಕೆ ವೇಳೆ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶ್ಯಾಮನೂರು ಶಿವಶಂಕರಪ್ಪ ಮುಂತಾದವರು ಜೊತೆಗಿದ್ದರು.


ಇದನ್ನೂ ಓದಿ: ಸಂವಿಧಾನ ಇಲ್ಲದಿದ್ರೆ ಮೋದಿ ಪ್ರಧಾನಿಯೂ ಆಗ್ತಿರ್ಲಿಲ್ಲ; ನಾನು ವಿರೋಧ ಪಕ್ಷದ ನಾಯಕನೂ ಆಗ್ತಿರ್ಲಿಲ್ಲ – ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...