Homeಮುಖಪುಟಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ: ಭಾರತ ಐಕ್ಯತಾ ಯಾತ್ರೆಗೆ ಮೂರು ದಿನ ವಿರಾಮ

ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ: ಭಾರತ ಐಕ್ಯತಾ ಯಾತ್ರೆಗೆ ಮೂರು ದಿನ ವಿರಾಮ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಇಂದು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಹಲವು ಕಾಂಗ್ರೆಸ್ ಮುಖಂಡರು ಭಾಗವಹಿಸುವುದಕ್ಕಾಗಿ ಭಾರತ ಐಕ್ಯತಾ ಯಾತ್ರೆಗೆ ಮೂರು ದಿನ ವಿರಾಮ ಘೋಷಿಸಲಾಗಿದೆ.

ಇಂದಿನ ಕಾರ್ಯಕ್ರಮದಲ್ಲಿ ಕರ್ನಾಟಕದ ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಲಿದ್ದಾರೆ.

ಈಗಾಗಲೇ ಸಿದ್ದರಾಮಯ್ಯ, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದ್ದಾರೆ.

ಇಂದಿನಿಂದ ಎಐಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುವ ಮಲ್ಲಿಕಾರ್ಜುನ ಖರ್ಗೆಯವರ ಮುಂದೆ ಹಲವು ಸವಾಲುಗಲಿವೆ. ಈ ವರ್ಷ ನಡೆಯುವ ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯ ವಿಧಾನಸಭೆಗಳನ್ನು ಅವರು ಹೇಗೆ ಎದುರಿಸುತ್ತಾರೆ ಎಂಬ ಕೂತೂಹಲ ಎಲ್ಲರಲ್ಲಿದೆ. ಆ ಎರಡು ಕಡೆ ಬಿಜೆಪಿ ಅಧಿಕಾರದಲ್ಲಿದೆ.

ಅಲ್ಲದೆ ಮುಂದಿನ ವರ್ಷ ಕರ್ನಾಟಕ ಸೇರಿದಂತೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ್, ತ್ರಿಪುರ ಸೇರಿದಂತೆ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಸದ್ಯಕ್ಕೆ ಕಾಂಗ್ರೆಸ್ ವತಿಯಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ನೂತನ ನಾಯಕತ್ವ ಪಕ್ಷಕ್ಕೆ ಯಾವ ಮಟ್ಟಕ್ಕೆ ಉಪಯೋಗವಾಗುತ್ತದೆ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ: ಬೆಂಗಳೂರು: 1,000 ಕ್ಕೂ ಹೆಚ್ಚು ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಂಡ ಟ್ರಾಫಿಕ್ ಪೊಲೀಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...