Homeಕರ್ನಾಟಕತವರು ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ: ಭಾನುವಾರ ಕಾಂಗ್ರೆಸ್‌ನಿಂದ ಅದ್ದೂರಿ ಸ್ವಾಗತ

ತವರು ರಾಜ್ಯಕ್ಕೆ ಮಲ್ಲಿಕಾರ್ಜುನ ಖರ್ಗೆ: ಭಾನುವಾರ ಕಾಂಗ್ರೆಸ್‌ನಿಂದ ಅದ್ದೂರಿ ಸ್ವಾಗತ

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌‌‌‌‌‌‌‌ನ ನೂತನ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್‌ 6ರ ಭಾನುವಾರದಂದು ರಾಜ್ಯಕ್ಕೆ ಮೊದಲ ಬಾರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಯೋಜಿಸಿದ್ದು, ಅರಮನೆ ಮೈದಾನದಲ್ಲಿ ‘ಸರ್ವೋದಯ ಸಮಾವೇಶ’ ಹಮ್ಮಿಕೊಂಡಿದೆ.

ಸಮಾವೇಶದ ತಯಾರಿ ಭರದಿಂದ ಸಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದ್ದು, ಕಲ್ಯಾಣ ಕರ್ನಾಟಕ ಭಾಗದಿಂದಲೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಈ ಹಿಂದೆ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾವೇಶದ ಕುರಿತು ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌,“ನವೆಂಬರ್‌ 06 ರಂದು ನಡೆಯಲಿರುವ ಸರ್ವೋದಯ ಸಮಾವೇಶದ ತಯಾರಿ ಭರದಿಂದ ಸಾಗುತ್ತಿದೆ. ರಾಷ್ಟ್ರೀಯ ಕಾಂಗ್ರೆಸ್‌‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆಗಮನಕ್ಕೆ ಇಡೀ ಕರ್ನಾಟಕವೇ ಕಾದಿದೆ” ಎಂದು ಹೇಳಿದ್ದಾರೆ.

ಹೊಸದಾಗಿ ಆಯ್ಕೆಯಾದ ಅಧ್ಯಕ್ಷರು ದೇಶದ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮೊದಲು ತವರು ರಾಜ್ಯಕ್ಕೆ ಭೇಟಿ ನೀಡಲು ತೀರ್ಮಾನಿಸಿದ್ದಾರೆ, ಹೀಗಾಗಿ ನವೆಂಬರ್‌ 6 ರಂದು ಅವರನ್ನು ರಾಜಕ್ಕೆ ಸ್ವಾಗತಿಸಲಿದ್ದೇವೆ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೀಯ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ

ಭಾನುವಾರ ಬೆಳಿಗ್ಗೆ 10.50ಕ್ಕೆ ಖರ್ಗೆ ಅವರು ನಗರಕ್ಕೆ ತಲುಪಲಿದ್ದಾರೆ ಕಾಂಗ್ರೆಸ್ ಹೇಳಿದೆ. ಕಾರ್ಯಕ್ರಮಕ್ಕೆ ಹಲವು ಸಂಘಟನೆಗಳು ಕೂಡ ಬೆಂಬಲ ನೀಡಿವೆ ಎಂದು ಎಂದು ಪಕ್ಷದ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಹೇಳಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಎಸ್‌. ನಿಜಲಿಂಗಪ್ಪ ಅವರ ನಂತರ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎರಡನೇ ಕನ್ನಡಿಗರಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...