Homeಮುಖಪುಟಚುನಾವಣಾ ಆಯೋಗದ ವಿರುದ್ಧ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ

ಚುನಾವಣಾ ಆಯೋಗದ ವಿರುದ್ಧ ಗಾಂಧಿ ಪ್ರತಿಮೆಯ ಬಳಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಧರಣಿ

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಕೋಲ್ಕತ್ತಾದ ಗಾಂಧಿ ಪ್ರತಿಮೆಯ ಬಳಿ ಧರಣಿ ಕುಳಿತಿದ್ದಾರೆ. ಚುನಾವಣಾ ಆಯೋಗ ಬ್ಯಾನರ್ಜಿಯವರಿಗೆ ಮಂಗಳವಾರ ರಾತ್ರಿ 8 ಗಂಟೆಯವರೆಗೆ 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ನಿಷೇಧ ಹೇರಿದೆ. ಇದನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದಾರೆ.

ಕೇಂದ್ರ ಪಡೆಗಳ ವಿರುದ್ಧ ಮಾಡಿದ ಆರೋಪ ಹಾಗೂ ಅಲ್ಪಸಂಖ್ಯಾತ ಮತದಾರರು ತಮ್ಮ ಮತಗಳನ್ನು ವಿಂಗಡಿಸಲು ಅವಕಾಶ ನೀಡದಂತೆ ಮಾಡಿದ್ದ ಮನವಿಯು ನೀತಿ ಸಂಹಿತೆಯ ಉಲ್ಲಂಘನೆ ಎಂದು ಚುನಾವಣಾ ಆಯೋಗವು ಹೇಳಿ, ಪ್ರಚಾರ ನಡೆಸದಂತೆ 24 ಗಂಟೆಗಳ ನಿಷೇಧ ಹೇರಿತ್ತು.

ಪ್ರಚಾರ ನಡೆಸದಂತೆ ನಿಷೇಧ ಹೇರಿರುವುದು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ ನಿರ್ಧಾರ” ಎಂದು ಮಮತಾ ಬ್ಯಾನರ್ಜಿ ಖಂಡಿಸಿದ್ದಾರೆ. ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ನೀಡಿದ್ದ ಹೇಳಿಕೆಯ ಬಗ್ಗೆ ಚುನಾವಣಾ ಆಯೋಗವು ಏಪ್ರಿಲ್ 7 ಮತ್ತು ಏಪ್ರಿಲ್ 8 ರಂದು ಮಮತಾ ಅವರಿಗೆ ನೋಟಿಸ್ ನೀಡಿತ್ತು.

ಇದನ್ನೂ ಓದಿ: ಬಂಗಾಳ: ಮಮತಾ ಬ್ಯಾನರ್ಜಿಗೆ 24 ಗಂಟೆಗಳ ನಿಷೇಧ ಹೇರಿದ ಚುನಾವಣಾ ಆಯೋಗ

ಎರಡು ನೋಟಿಸ್‌ಗಳಿಗೂ ಮಮತಾ ಬ್ಯಾನರ್ಜಿ ಅವರು ಉತ್ತರಿಸಿದ್ದರಾದರೂ, ಚುನಾವಣಾ ಆಯೋಗವು, ಮಮತಾ ಬ್ಯಾನರ್ಜಿ ನೀಡಿದ್ದ ಉತ್ತರದಲ್ಲಿ ತನ್ನ ಭಾಷಣದ ಪ್ರಮುಖ ಭಾಗಗಳನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಹೇಳಿತ್ತು.

ಧರಣಿಯಲ್ಲಿರುವ ಮಮತಾ ಬ್ಯಾನರ್ಜಿ ಅವರು ವರ್ಣಚಿತ್ರಗಳನ್ನು ರಚಿಸಿ ಪ್ರದರ್ಶಿಸುತ್ತಿದ್ದಾರೆ. ಏಪ್ರಿಲ್ 12 ರ ರಾತ್ರಿ 8 ರಿಂದ ಏಪ್ರಿಲ್ 13 ರ ರಾತ್ರಿ 8 ರವರೆಗೆ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದ ಚುನಾವಣೆ ನಡೆಯಲಿದ್ದು, ನಾಲ್ಕು ಹಂತಗಳು ಈಗಾಗಲೇ ಮುಗಿದಿದೆ. ಏಪ್ರಿಲ್ 17 ರಂದು ಐದನೇ ಹಂತದ ಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಆಡಳಿತದ 10 ವರ್ಷಗಳಲ್ಲಿ ‘ED’ ದಾಳಿಗಳಲ್ಲಿ ಹೆಚ್ಚಳ: ವರದಿ

0
ಮೋದಿ ಆಡಳಿತದ ಕಳೆದ 10 ವರ್ಷಗಳಲ್ಲಿ ಜಾರಿ ನಿರ್ದೇಶನಾಲಯದ ದಾಳಿ ಮತ್ತು, ಆಸ್ತಿಮುಟ್ಟುಗೋಲು ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ವರದಿಯೊಂದು ಬಹಿರಂಗಪಡಿಸಿದೆ. ಬಿಜೆಪಿ ಸರಕಾರ 'ಇಡಿ' ಮತ್ತು ಸಿಬಿಐಯಂತಹ ಸರಕಾರಿ ಸಂಸ್ಥೆಗಳನ್ನು ಪ್ರತಿಪಕ್ಷಗಳ...