Homeಮುಖಪುಟಬೈಎಲೆಕ್ಷನ್‌: ಸಿಎಂ ಸ್ಥಾನ ಉಳಿಯಬೇಕಾದರೆ ಗೆಲ್ಲಲೇಬೇಕಾದ ದೀದಿಗೆ ಮುನ್ನಡೆ

ಬೈಎಲೆಕ್ಷನ್‌: ಸಿಎಂ ಸ್ಥಾನ ಉಳಿಯಬೇಕಾದರೆ ಗೆಲ್ಲಲೇಬೇಕಾದ ದೀದಿಗೆ ಮುನ್ನಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಮಮತಾ ಬ್ಯಾನರ್ಜಿಯವರು ಗೆಲ್ಲಲೇಬೇಕಾದ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಭಬನೀಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಮಮತಾ ಬ್ಯಾನರ್ಜಿ ಅವರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ದಕ್ಷಿಣ ಕೋಲ್ಕತ್ತಾದ ಭಬನಿಪುರ ಕ್ಷೇತ್ರದ ಮತ ಎಣಿಗೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. 21 ಸುತ್ತಿನ ಮತ ಎಣಿಕೆ ನಡೆಯಲಿದೆ. ಬಿಜೆಪಿಯು ವಕೀಲರಾದ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಕಣಕ್ಕೆ ಇಳಿಸಿತ್ತು. 41 ವರ್ಷದ ತ್ರಿಬ್ರೇವಾಲ್ ಇತ್ತೀಚಿನ ವಿಧಾನಸಭೆ ಚುನಾವಣೆ ಮತ್ತು 2015ರ ಮುನ್ಸಿಪಲ್ ಚುನಾವಣೆಯಲ್ಲಿ ಸೋತರೂ ಚುನಾವಣೆಯ ನಂತರದ ಹಿಂಸಾಚಾರ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧದ ಅರ್ಜಿದಾರರಲ್ಲಿ ಒಬ್ಬರಾಗಿ ಪ್ರಸಿದ್ಧರಾಗಿದ್ದಾರೆ.

ಮಾರ್ಚ್‌ ಹಾಗೂ ಎಪ್ರಿಲ್‌ನಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಅಭ್ಯರ್ಥಿ ಹಾಗೂ ಈ ಹಿಂದೆ ಟಿಎಂಸಿ ನಾಯಕರಾಗಿದ್ದು, ಚುನಾವಣೆ ವೇಳೆಗೆ ಬಿಜೆಪಿ ಸೇರಿದ್ದ ಸುವೇಂದು ಅಧಿಕಾರಿ ಅವರಿಂದ ಪರಾಜಿತರಾಗಿದ್ದರು.

ಭಬನಿಪುರ ಕ್ಷೇತ್ರವು ಮಮತಾ ಬ್ಯಾನರ್ಜಿಯವರ ಸಾಂಪ್ರದಾಯಿಕ ಕ್ಷೇತ್ರವಾಗಿತ್ತು. ಆದರೆ ಅದನ್ನು ತ್ಯಜಿಸಿದ್ದ ಮಮತಾ ಬ್ಯಾನರ್ಜಿಯವರು ಸುವೇಂದು ಅಧಿಕಾರಿ ಅವರನ್ನು ಮಣಿಸಲು ನಂದಿಗ್ರಾಮದಲ್ಲಿ ಕಣಕ್ಕಿಳಿದಿದ್ದರು. ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದರು. ಚುನಾವಣೆ ಸೋತರೂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಚುನಾವಣೆಯಲ್ಲಿ ಗೆಲ್ಲದಿದ್ದರೆ ಆರು ತಿಂಗಳ ಬಳಿಕ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತದೆ. ಹೀಗಾಗಿ ಬಂಗಾಳದ ಕೃಷಿ ಸಚಿವ ಶೋಭಂದೇಬ್ ಚಟ್ಟೋಪಾಧ್ಯಾಯ ಅವರನ್ನು ಶಾಸಕ ಸ್ಥಾನದಿಂದ ಕೆಳಗಿಳಿದರು, ಮಮತಾ ಬ್ಯಾನರ್ಜಿಯವರು ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ.

ಭಬನಿಪುರ ಹೊರತಾಗಿ ಮುರ್ಷಿದಾಬಾದ್‌‌ನ ಸಂಸರ್‌ಗಂಜ್ ಮತ್ತು ಜಂಗೀಪುರ ಕ್ಷೇತ್ರಗಳಲ್ಲೂ ಮತ ಎಣಿಕೆ ನಡೆಯುತ್ತಿದೆ. ಕ್ರಮವಾಗಿ ಈ ಕ್ಷೇತ್ರಗಳಲ್ಲಿ ಶೇ. 79.92 ಮತ್ತು ಶೇ. 77.63 ಮತದಾನ ನಡೆದಿದೆ.

ಇದನ್ನೂ ಓದಿರಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...