Homeಮುಖಪುಟಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

ಎಸ್‌ಐಆರ್‌ಗೆ ತೀವ್ರ ವಿರೋಧ : ಕೋಲ್ಕತ್ತಾದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಎರಡನೇ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ದದ ಪ್ರತಿಭಟನೆಗಳು ಸದ್ದಿಲ್ಲದೆ ಕಾವು ಪಡೆದುಕೊಳ್ಳುತ್ತಿವೆ.

ಇತ್ತ ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷ ಎಸ್‌ಐಆರ್‌ ವಿರುದ್ದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೆ, ಅತ್ತ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬೀದಿಗಿಳಿದು ಹೋರಾಟ ಆರಂಭಿಸಿದ್ದಾರೆ.

ಇಂದು (ನ.4) ತಮ್ಮ ಸೋದರಳಿಯ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರೊಂದಿಗೆ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ರವೀಂದ್ರನಾಥ ಟ್ಯಾಗೋರ್ ಅವರ ಪೂರ್ವಜರ ಮನೆಯಾದ ಜೋರಾಸಂಕೊ ಠಾಕೂರ್ ಬಾರಿವರೆಗೆ 3.8 ಕಿಮೀ ರ‍್ಯಾಲಿಯನ್ನು ಮಮತಾ ಬ್ಯಾನರ್ಜಿ ನಡೆಸಿದ್ದಾರೆ.

ಈ ಪ್ರತಿಭಟನಾ ರ‍್ಯಾಲಿಯಲ್ಲಿ ಟಿಎಂಸಿ ಪಕ್ಷದ ಹಲವು ನಾಯಕರು ಮತ್ತು ಭಾರೀ ಸಂಖ್ಯೆಯಲ್ಲಿ ಬೆಂಬಲಿಗರು ಪಾಲ್ಗೊಂಡಿದ್ದರು.

ರ‍್ಯಾಲಿ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ, “ಎಸ್ಐಆರ್ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಜೊತೆಗೂಡಿ ‘ಸದ್ದಿಲ್ಲದೆ, ಅದೃಶ್ಯವಾಗಿ ನಡೆಸುತ್ತಿರುವ ಮತಗಳ್ಳತನ’ ಎಂದು ಆರೋಪಿಸಿದ್ದಾರೆ.

ಅನೇಕ ಅಸಂಘಟಿತ ವಲಯದ ಕಾರ್ಮಿಕರು ಮತದಾರರ ಪಟ್ಟಿಯಿಂದ ತಮ್ಮ ಹೆಸರು ತೆಗೆದು ಹಾಕುವ ಆತಂಕದಲ್ಲಿದ್ದಾರೆ. ಬಂಗಾಳಿ ಭಾಷೆ ಮಾತನಾಡಿದ ತಕ್ಷಣ ಯಾರೂ ಬಾಂಗ್ಲಾದೇಶಿ ಆಗುವುದಿಲ್ಲ. ಹಿಂದಿ ಅಥವಾ ಪಂಜಾಬಿಯಲ್ಲಿ ಮಾತನಾಡುವವರು ಪಾಕಿಸ್ತಾನಿ ಆಗುವುದಿಲ್ಲ. ಬಂಗಾಳಿ ಭಾಷೆಯಲ್ಲಿ ಮಾತನಾಡುವವರನ್ನು ಬಾಂಗ್ಲಾದೇಶಿ ಎಂದು ಬ್ರಾಂಡ್ ಮಾಡಲಾಗುತ್ತಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದ ಮೂರ್ಖರು ಆ ರೀತಿ ಆರೋಪ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬಿಜೆಪಿ ಎಲ್ಲಿತ್ತು? ಅದಕ್ಕಾಗಿಯೇ ಅವರಿಗೆ ಸ್ವಾತಂತ್ರ್ಯ ಪೂರ್ವದಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಒಂದೇ ಆಗಿತ್ತು ಎಂಬುವುದು ಗೊತ್ತಿಲ್ಲ” ಎಂದಿದ್ದಾರೆ.

ಬಿಜೆಪಿ ಒಂದು ಲೂಟಿಕೋರ ಪಕ್ಷ. ಅವರು ಹಲವಾರು ಸಂಸ್ಥೆಗಳನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ, ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಆದರೆ, ಭವಿಷ್ಯದಲ್ಲಿ ಅವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನಗಳಲ್ಲಿ ಇಷ್ಟು ದೊಡ್ಡ ರ್ಯಾಲಿಯನ್ನು ಏರ್ಪಡಿಸಲು ಸಾಧ್ಯವಾದರೆ, ನಾವು ದೆಹಲಿಗೆ ಪ್ರತಿಭಟನೆಗೆ ಹೋದರೆ ನಮ್ಮ ಜನಸಂದಣಿ ಎಷ್ಟಿರುತ್ತದೆ ಎಂದು ಬಿಜೆಪಿ ಯೋಚಿಸಬೇಕು. ನಾವು ದೆಹಲಿಯ ಜಮೀನ್ದಾರರಿಗೆ ತಲೆಬಾಗುವುದಿಲ್ಲ ಎಂದಿದ್ದಾರೆ.

ಎಸ್‌ಐಆರ್ ಪ್ರಕ್ರಿಯೆಯ ಬಗೆಗಿನ ಭಯವು ಈಗಾಗಲೇ ಹಲವಾರು ಜೀವಗಳನ್ನು ಬಲಿ ಪಡೆದಿದೆ. ಕಳೆದ ಏಳು ದಿನಗಳಲ್ಲಿ, ಎಸ್‌ಐಆರ್ ಭಯದಿಂದ ಸಾವನ್ನಪ್ಪಿದವರ ಕುಟುಂಬ ಸದಸ್ಯರು ಇಂದಿನ ರ್ಯಾಲಿಯಲ್ಲಿ ನಮ್ಮೊಂದಿಗೆ ಇದ್ದಾರೆ. ಪ್ರಾಣ ಕಳೆದುಕೊಂಡ ಏಳು ಜನರೂ ತಮ್ಮ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಭಯದಲ್ಲಿದ್ದರು ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಮತದಾರರ ಪಟ್ಟಿಯಿಂದ ಹೆಸರು ಅಳಿಸದಂತೆ ಬಿಜೆಪಿಗೆ ಎಚ್ಚರಿಕೆ ನೀಡಿದ ಅಭಿನಷೇಕ್ ಬ್ಯಾನರ್ಜಿ, ಒಬ್ಬನೇ ಒಬ್ಬ ಕಾನೂನುಬದ್ಧ ಮತದಾರ ತನ್ನ ಹೆಸರನ್ನು ಕಳೆದುಕೊಂಡರೆ, ಟಿಎಂಸಿ ದೆಹಲಿಯಲ್ಲಿ ಬಂಗಾಳದ ಜನರ ಶಕ್ತಿಯನ್ನು ತೋರಿಸುತ್ತದೆ ಎಂದಿದ್ದಾರೆ. ಕೇಂದ್ರವು ಸಿಎಎ ಶಿಬಿರಗಳನ್ನು ಸ್ಥಾಪಿಸುವ ಮೂಲಕ ನಾಟಕ ಮಾಡುತ್ತಿದೆ ಎಂದು ಆರೋಪಿಸಿದ ಅವರು, ನೀವು ಅವರ ಬಲೆಗೆ ಬಿದ್ದರೆ, ಎನ್‌ಆರ್‌ಸಿಯಿಂದಾಗಿ ಅಸ್ಸಾಂನಲ್ಲಿ 12 ಲಕ್ಷ ಹಿಂದೂ ಬಂಗಾಳಿಗಳು ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಂತೆ ನೀವು ಎಲ್ಲವನ್ನೂ ಕಳೆದುಕೊಳ್ಳುತ್ತೀರಿ ಎಂದು ಜನರನ್ನು ಎಚ್ಚರಿಸಿದ್ದಾರೆ.

ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧರಾಗಿರಿ ಎಂದು ಕರೆಕೊಟ್ಟ ಅವರು, ಪ್ರಧಾನಿ ಮೋದಿ ತಮ್ಮ ಇಚ್ಛೆಯಂತೆ ಸಾಮಾನ್ಯ ಜನರಿಗೆ ನಿಯಮಗಳನ್ನು ನಿರ್ದೇಶಿಸುತ್ತಿದ್ದಾರೆ, ಅದು ನೋಟು ರದ್ದತಿಯಾಗಿರಲಿ ಅಥವಾ ಪೌರತ್ವಕ್ಕಾಗಿ ದಾಖಲೆಗಳನ್ನು ಕೇಳುವುದಾಗಿರಲಿ ಎಂದು ಹೇಳಿದ್ದಾರೆ.

ತೀವ್ರ ವಿರೋಧದ ನಡುವೆಯೂ ಎರಡನೇ ಹಂತದ ಎಸ್‌ಐಆರ್‌ ಪ್ರಾರಂಭಿಸಿದ ಚುನಾವಣಾ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...